ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವರಾಮ್ ಮಾತನಾಡಿ, ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ್ ರಾಮ್ ರವರು ಈ ದೇಶ ಕಂಡ ಅತ್ಯುತ್ತಮ ನಾಯಕರಾಗಿದ್ದು, ಅವರ ತತ್ವ, ಸಿದ್ಧಾಂತಗಳನ್ನು ಎಲ್ಲರೂ ಗೌರವಿಸಿ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗೌಡಕಿ ಮಂಜು, ಹೊನ್ನೇಗೌಡ, ಎನ್ ಎಸ್ ಮಂಜುನಾಥ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭವಾನಿ, ಸಹಕಾರ್ಯದರ್ಶಿ ರಾಜಕುಮಾರ್, ಬಿಲ್ ಕಲೆಕ್ಟರ್ ನಾಗರಾಜು, ಸೋಮು, ವಾಟರ್ ಮ್ಯಾನ್ ರಾಜಣ್ಣ, ಮಾಸ್ತಿಗೌಡ, ನಿಂಗರಾಜು, ಧರಣಿ ಕುಮಾರ್, ಸೇರಿದಂತೆ ಇತರರು ಹಾಜರಿದ್ದರು.