ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಮಾತನಾಡಿ, ಸಮಾಜದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಬದುಕಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.
ಹಬ್ಬದ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಜಿಲ್ಲೆಗೆ ಯಾವುದೇ ಕಪ್ಪು ಚುಕ್ಕಿ ಬಾರದಂದೆ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಗಳಿಂದ ಆಚರಿಸೋಣ. ಒಂದು ವೇಳೆ ಶಾಂತಿಗೆ ಭಂಗ ತರುವ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ.ಶೋಭಾರಾಣಿ ಮಾತನಾಡಿ, ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿವಿಧ ಸಂಘಟನೆಗಳ ಮುಖಂಡರು ಸಲಹೆಗಳನ್ನು ನೀಡಿದ್ದೀರಿ. ಅದರಂತೆ ಎಲ್ಲ ರೀತಿಯ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಸುರಕ್ಷಿತೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.
ಸಭೆಯಲ್ಲಿ ಡಿವೈಎಸ್ಪಿ ಲಕ್ಷ್ಮೀ ನಾರಾಯಣ ಪ್ರಸಾದ್, ಜಿಲ್ಲೆಯ ಮುಸ್ಲಿಂ ಮತ್ತು ಹಿಂದೂ ಧರ್ಮದ ಮುಖಂಡರು ಪಾಲ್ಗೊಂಡಿದ್ದರು.