ನಗರಸಭೆ ನಿರ್ಲಕ್ಷ್ಯದಿಂದ ಕೆಟ್ಟ ನೀರು ಶುದ್ಧೀಕರಣ ಘಟಕ

KannadaprabhaNewsNetwork |  
Published : Nov 09, 2026, 02:00 AM IST
5ಸಿಎಚ್‌ಎನ್1ಚಾಮರಾಜನಗರದಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿಕರ್ನಾಟಕಅಭಿವೃದ್ದಿ ಹೋರಾಟ ಸಮಿತಿಅಧ್ಯಕ್ಷ ಕೆ.ವೀರಭದ್ರಸ್ವಾಮಿ ಮಾತನಾಡಿದರು, | Kannada Prabha

ಸಾರಾಂಶ

ನಗರಸಭೆ ವ್ಯಾಪ್ತಿಯ 31 ವಾರ್ಡ್‌ಗಳಿಂದ ಸಂಗ್ರಹವಾಗುವ ಕೊಳಚೆ ನೀರನ್ನು ಸಂಸ್ಕರಿಸುವ ಉದ್ದೇಶದಿಂದ ತಾಲೂಕಿನ ಬೂದಿತಿಟ್ಟುಗ್ರಾಮದ ಬಳಿ ಕೋಟ್ಯಂತರ ರುಪಾಯಿ ವೆಚ್ಚ ಮಾಡಿ, ನಿರ್ಮಿಸಿರುವ ಮಲೀನ ನೀರು ಶುದ್ಧೀಕರಣ ಘಟಕ ನಗರಸಭೆ ನಿರ್ಲಕ್ಷ್ಯದಿಂದಾಗಿ ಐದಾರು ತಿಂಗಳಿಂದ ಕಾರ್ಯನಿರ್ವಹಿಸದೆ ಕೆಟ್ಟು ನಿಂತಿದೆ ಎಂದು ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೆ.ವೀರಭದ್ರಸ್ವಾಮಿ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಗರಸಭೆ ವ್ಯಾಪ್ತಿಯ 31 ವಾರ್ಡ್‌ಗಳಿಂದ ಸಂಗ್ರಹವಾಗುವ ಕೊಳಚೆ ನೀರನ್ನು ಸಂಸ್ಕರಿಸುವ ಉದ್ದೇಶದಿಂದ ತಾಲೂಕಿನ ಬೂದಿತಿಟ್ಟುಗ್ರಾಮದ ಬಳಿ ಕೋಟ್ಯಂತರ ರುಪಾಯಿ ವೆಚ್ಚ ಮಾಡಿ, ನಿರ್ಮಿಸಿರುವ ಮಲೀನ ನೀರು ಶುದ್ಧೀಕರಣ ಘಟಕ ನಗರಸಭೆ ನಿರ್ಲಕ್ಷ್ಯದಿಂದಾಗಿ ಐದಾರು ತಿಂಗಳಿಂದ ಕಾರ್ಯನಿರ್ವಹಿಸದೆ ಕೆಟ್ಟು ನಿಂತಿದೆ ಎಂದು ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೆ.ವೀರಭದ್ರಸ್ವಾಮಿ ಆರೋಪಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದರಿಂದಾಗಿ ಸುವರ್ಣಾವತಿ ನದಿ ಹಾಗೂ ಕಾಲುವೆಗಳಿಗೆ ಕೊಳಚೆ ನೀರು ಹೋಗುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ತೊಂದರೆ ಎದುರಿಸುತ್ತಿದ್ದಾರೆ ಎಂದರು.

ಚಾಮರಾಜನಗರ ನಗರಸಭೆ ವ್ಯಾಪ್ತಿಯ 31 ವಾರ್ಡ್ಗಳಿಂದ ಸಂಗ್ರಹವಾಗುವ ಕೊಳಚೆ ನೀರನ್ನು ಸಂಸ್ಕರಿಸುವ ಉದ್ದೇಶದಿಂದ ಮಲೀನ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಾಗಿದ್ದು, ಯಂತ್ರೋಪಕರಣಗಳು ಕಳೆದ ಐದಾರು ತಿಂಗಳಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಕಲುಷಿತ ನೀರು ಬೂದಿತಿಟ್ಟು ಮತ್ತು ಕೂಡ್ಲೂರು ಗ್ರಾಮಗಳ ಕೃಷಿ ಭೂಮಿಗಳಿಗೆ ಹರಿಯುವುದರಿಂದ ದುರ್ವಾಸನೆ ಬೀರುತ್ತಿದ್ದು ಮಣ್ಣಿನ ಗುಣಮಟ್ಟ ಹದಗೆಟ್ಟು, ಕೃಷಿ ಉತ್ಪಾದನೆ ಹಾಗೂ ರೈತರ ಜೀವನೋಪಾಯಕ್ಕೆ ತೊಂದರೆಯಾಗುವ ಆತಂಕವಿದೆ. ಸಾರ್ವಜನಿಕರ ಆರೋಗ್ಯಕ್ಕೂ ಗಂಭೀರ ಅಪಾಯ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಕೂಡಲೇ ನಗರಸಭೆ ಆಡಳಿತಾಧಿಕಾರಿಗಳಾದ ಜಿಲ್ಲಾಧಿಕಾರಿ ನಗರಸಭೆ ಆಯುಕ್ತರು, ಎಂಜಿನಿಯರ್‌ ಅವರ ಜತೆ ಭೇಟಿ ನೀಡಿ, ಮಲೀನ ನೀರು ಶುದ್ಧೀಕರಣ ಘಟಕದ ಪ್ರಸ್ತುತ ಅವ್ಯವಸ್ಥೆ ಪರಿಶೀಲಿಸಬೇಕು, ಸುವರ್ಣಾವತಿ ನದಿ ಹಾಗೂ ಸಂಪರ್ಕ ಹೊಂದಿರುವ ಕಾಲುವೆಗಳಲ್ಲಿ ಹರಿಯುತ್ತಿರುವ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ವೈಜ್ಞಾನಿಕ ಪರೀಕ್ಷೆ ನಡೆಸಬೇಕು. ಕಲುಷಿತ ನೀರು ಕೃಷಿ ಭೂಮಿಗಳಿಗೆ ಹರಿಯುತ್ತಿದೆಯೇ ಎಂಬುದನ್ನು ಪರಿಶೀಲಿಸಿ. ಮಣ್ಣಿನ ಗುಣಮಟ್ಟದ ಪರೀಕ್ಷೆ ನಡೆಸಬೇಕು ಎಂದರು.

ಕೆಟ್ಟು ಹೋಗಿರುವ ಯಂತ್ರೋಪಕರಣಗಳನ್ನು ತುರ್ತಾಗಿ ದುರಸ್ತಿಪಡಿಸಿ, ಶುದ್ದೀಕರಣ ಘಟಕ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಬೇಕು, ನಿರ್ಲಕ್ಷ್ಯಕ್ಕೆ ಕಾರಣವಾದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸಿ, ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಲುಷಿತ ನೀರಿನಿಂದ ರೈತರಿಗೆ, ಜಾನುವಾರು ಅಥವಾ ಸಾರ್ವಜನಿಕರಿಗೆ ಆರೋಗ್ಯಕ್ಕೆ ತೊಂದರೆಯಾಗುತ್ತಿದೆ ಎಂದು ದೃಢಪಟ್ಟಲ್ಲಿ ಅವರಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು, ನಿರ್ಲಕ್ಷ್ಯವಹಿಸಿದ್ದಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆ ಅಡಳಿತದ ವಿರುದ್ಧ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟಕ್ಕೆ ಸಜ್ಜಾಗಲಿದೆ ಎಂದು ಎಚ್ಚರಿಸಿದರು.

ಉಪಾಧ್ಯಕ್ಷರಾದ ಮೂಡಲಪುರ ಬಸವಣ್ಣ, ಬೂದಿತಿಟ್ಟು ಲಕ್ಷ್ಮಣ್, ಸಂಚಾಲಕ ಬೂದಿತಿಟ್ಟು ಲಿಂಗರಾಜು, ಕಾನೂನು ಸಲಹೆಗಾರ ಗಟ್ಟವಾಡಿ ಮಹದೇವಸ್ವಾಮಿ, ದೊಡ್ಡರಾಯಪೇಟೆ ಅಶೋಕ್, ಮಹದೇವಪ್ರಸಾದ್, ಹಂಡರಕಳ್ಳಿ ಮಹದೇವಸ್ವಾಮಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ