ಬಾಡಗರಕೇರಿ: ೬ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ

KannadaprabhaNewsNetwork |  
Published : Jul 03, 2026, 03:00 AM IST
ಬ್ರಹ್ಮಕಲಶೋತ್ಸವ | Kannada Prabha

ಸಾರಾಂಶ

ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಡಗರಕೇರಿ ಗ್ರಾಮದಲ್ಲಿರುವ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಜು. ೬ ರಿಂದ ೯ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಚೋನಿರ ಸುಬ್ರಮಣಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಡಗರಕೇರಿ ಗ್ರಾಮದಲ್ಲಿರುವ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಜು. ೬ ರಿಂದ ೯ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಚೋನಿರ ಸುಬ್ರಮಣಿ ತಿಳಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೮೦೦-೯೦೦ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ದೇವಾಲಯದಲ್ಲಿ ವರ್ಷದ ೩೬೫ ದಿನ ಮೃತ್ಯುಂಜಯ ಹೋಮ, ಮಹಾ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನಡೆಸಲಾಗುತ್ತಿದೆ. ಸುಮಾರು ೧.೨೦ ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಮುಖವಾಗಿ ಗರ್ಭಗುಡಿ, ತೀರ್ಥ ಮಂಟಪ, ಗಣಪತಿ ಗುಡಿಯನ್ನು ಎಲ್ಲರ ಸಹಕಾರದಿಂದ ಜೀರ್ಣೋದ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜು. ೬ರಿಂದ ೯ರವರೆಗೆ ನೀಲೇಶ್ವರ ಉಚ್ಚಿಲತ್ತಾಯ ಪಧ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಜು.೬ರಂದು ಸಂಜೆ ೬ ರಿಂದ ಪ್ರಾರ್ಥನೆ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಬಲಿ ನಡೆಯಲಿದೆ. ಜು.೭ರಂದು ಬೆಳಗ್ಗೆ ಗಂಟೆಗೆ ಗಣಪತಿ ಹೋಮ, ಬಿಂಬ ಶುದ್ಧಿ, ಕಲಶಾಭಿಷೇಕ, ೧೨.೩೦ಕ್ಕೆ ಮಹಾಪೂಜೆ, ಸಂಜೆ ೭ಂಟೆಗೆ ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ. ಜು.೮ರಂದು ಬೆಳಗ್ಗೆ ಅನುಜ್ಞಾ ಕಲಶಾಭಿಷೇಕ, ಸಂಹಾರ ತತ್ವ ಕಲಶ ಪೂಜೆ, ಸಂಹಾರ ತತ್ವ ಹೋಮ, ಶಯ್ಯ ಪೂಜೆ, ಸಂಹಾರ ತತ್ವ ಕಲಶಾಭಿಷೇಕ, ಸಂಜೆ ೭ ರಿಂದ ಧ್ಯಾನಾಧಿವಾಸ, ಬ್ರಹ್ಮಕಲಶಪೂಜೆ, ಅಧಿವಾಸ ಹೋಮ ಪರಿಕಲಸ ಪೂಜೆ, ಕಲಶಾಧಿವಾಸ ನಡೆಯಲಿದೆ ಎಂದು ತಿಳಿಸಿದರು.

ಜು.೯ರ ಬೆಳಗ್ಗೆ ೭ರಿಂದ ಗಣಪತಿ ಹೋಮ, ತತ್ವಹೋಮ, ತತ್ವ ಕಲಶ ಪೂಜೆ, ೯:೯ರಿಂದ ೧೦:೨೨ರ ಸಿಂಹಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಮೃತ್ಯುಂಜಯ ದೇವರ ಬಿಂಬ ಪ್ರತಿಷ್ಠೆ, ಅಷ್ಟಬಂಧ ಲೇಪನ, ಜೀವ ಕಲಶಾಭಿಷೇಕ, ಶಿಖರ ಪ್ರತಿಷ್ಠೆ, ತತ್ವಕಲಶಾಭಿಷೇಕ, ೧:೩೦ಕ್ಕೆ ಮಹಾಪೂಜೆ ನಡೆಯಲಿದೆ. ಅಂದಿನ ಕಾರ್ಯಕ್ರಮಕ್ಕೆ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

ದೇವತಕ್ಕರಾದ ಅಣ್ಣಿರ ದಾದಾ ಗಣಪತಿ ಮಾತನಾಡಿ, ಫೆಬ್ರವತಿ ಅಥವಾ ಮಾರ್ಚ್‌ನಲ್ಲಿ ಶ್ರೀ ಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವ ನಡೆಯಲಿದೆ. ಶ್ರೀ ಮೃತ್ಯುಂಜಯ ದೇವಸ್ಥಾನದ ಸಮೀಪ ಮಹಾವಿಷ್ಣು ದೇವಾಲಯವಿದ್ದು, ವಾರಕ್ಕೊಮ್ಮೆ ಮತ್ತು ವಿಶೇಷ ದಿನಗಳಲ್ಲಿ ಪೂಜೆ ನಡೆಯಲಿದೆ ಎಂದು ತಿಳಿಸಿದರು.

ನಾಡತಕ್ಕರಾದ ಕಾಯಪಂಡ ಕೆ. ಅಯ್ಯಪ್ಪ, ಶ್ರೀ ಮೃತ್ಯುಂಜಯ ದೇವಸ್ಥಾನ ಸಮಿತಿ ಉಪಾಧ್ಯಕ್ಷ ಕಾಯಪಂಡ ಸ್ವಾಲಿನ್ ಗಣಪತಿ, ಕಾರ್ಯದರ್ಶಿ ಬಲ್ಯಮೀದೇರಿರ ಸಂಪತ್, ಪ್ರಮುಖರಾದ ಕಾಯಪಂಡ ಶಶಿ ಸೋಮಯ್ಯ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೃತ್ತಿ ಜೊತೆ ನಾಡಗೌಡರ ಸೇವೆ ಅನುಪಮ
ಯೋಗ, ಧ್ಯಾನದಿಂದ ಆರೋಗ್ಯ ವೃದ್ಧಿ