ಬಡೋಳಿ: 28ರಂದು ವಾಲ್ಮೀಕಿ ಗುರುಪೀಠ ಸ್ಥಾಪನೆಗೆ ಭೂಮಿಪೂಜೆ

KannadaprabhaNewsNetwork |  
Published : Nov 27, 2026, 01:15 AM IST
ಹುಣಸಗಿ ತಾಲೂಕಿನ ಬಂಡೋಳಿಯಲ್ಲಿ ನ.೨೮ರಂದು ನಡೆಯಲಿರುವ ವಾಲ್ಮೀಕಿ ಗುರುಪೀಠದ ಭೂಮಿಪೂಜಾ ಸಮಾರಂಭ ಕುರಿತು ಶಾಸಕ ರಾಜಾ ವೇಣುಗೋಪಾಲನಾಯಕ ಅವರು ಸುರಪುರದಲ್ಲಿ ಸೋಮವಾರ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. | Kannada Prabha

ಸಾರಾಂಶ

ಕಲ್ಯಾಣ ಕರ್ನಾಟಕ ಭಾಗದ ವಾಲ್ಮೀಕಿ ಸಮಾಜದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಯ ಉದ್ದೇಶದಿಂದ ತಾಲೂಕಿನ ಬಂಡೋಳಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ರಾಜನಹಳ್ಳಿ ವತಿಯಿಂದ ಖರೀದಿಸಿದ 17 ಎಕರೆ 18 ಗುಂಟೆ ಜಮೀನಿನಲ್ಲಿ ನ.28ರಂದು ಬೆಳಗ್ಗೆ 11ಕ್ಕೆ ಭೂಮಿ ಪೂಜಾ ಸಮಾರಂಭ ನಡೆಯಲಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.

ಕನ್ನಡಪ್ರಭ ವಾರ್ತೆ ಸುರಪುರ

ಕಲ್ಯಾಣ ಕರ್ನಾಟಕ ಭಾಗದ ವಾಲ್ಮೀಕಿ ಸಮಾಜದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಯ ಉದ್ದೇಶದಿಂದ ತಾಲೂಕಿನ ಬಂಡೋಳಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ರಾಜನಹಳ್ಳಿ ವತಿಯಿಂದ ಖರೀದಿಸಿದ 17 ಎಕರೆ 18 ಗುಂಟೆ ಜಮೀನಿನಲ್ಲಿ ನ.28ರಂದು ಬೆಳಗ್ಗೆ 11ಕ್ಕೆ ಭೂಮಿ ಪೂಜಾ ಸಮಾರಂಭ ನಡೆಯಲಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.

ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷ್ಣಾ ನದಿಯ ದಂಡೆಯಲ್ಲಿರುವ ಬಂಡೋಳಿ ಗ್ರಾಮವು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ತಿಂಥಣಿ ಮೌನೇಶ್ವರ ಕ್ಷೇತ್ರದ ಸಮೀಪ ಹಾಗೂ ಸಹೋದರ ಸಮುದಾಯದ ಕನಕ ಗುರುಪೀಠದ ಸನಿಹದಲ್ಲಿದೆ. ಈ ಹಿನ್ನೆಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ಶಾಖಾಮಠ ಸ್ಥಾಪನೆ ಹಾಗೂ ಸಮಾಜದ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಈ ಸ್ಥಳ ಮಹತ್ವದ ಕೇಂದ್ರವಾಗಲಿದೆ ಎಂಬ ಆಶಯ ಹೊಂದಲಾಗಿದೆ. ಈ ಭಾಗದ ವಾಲ್ಮೀಕಿ ಸಮಾಜದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ಕಟ್ಟಡಗಳ ಹಾಗೂ ನೂತನ ಶಾಖಾ ಮಠವನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದೆ ಎಂದರು.

ಈ ಮಹತ್ವದ ಯೋಜನೆಗೆ ಸರ್ಕಾರದಿಂದ ₹ 5 ಕೋಟಿ ಅನುದಾನ ಮಂಜೂರಾಗಿದೆ. ಅಲ್ಲದೆ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ವಿಶೇಷ ಆಸಕ್ತಿ ವಹಿಸಿ ₹ 5 ಕೋಟಿ ಅನುದಾನ ನೀಡಿದ್ದಾರೆ. ಒಟ್ಟು ₹ 10 ಕೋಟಿ ಅನುದಾನದ ಗುರುಪೀಠದ ನಿರ್ಮಾಣ ಹಾಗೂ ಸಮಾಜದ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ನ.28 ರಂದು ನಡೆಯಲಿರುವ ಭೂಮಿ ಪೂಜಾ ಸಮಾರಂಭವು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಪರಮ ಪೂಜ್ಯ ಜಗದ್ಗುರು ಡಾ.ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹಾಗೂ ಸಚಿವ ಟಿ.ರಘುಮೂರ್ತಿ ಅವರು ಭಾಗವಹಿಸಲಿದ್ದಾರೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಮಾಹಿತಿ ನೀಡಿದರು.

ಯಾದಗಿರಿ ಜಿಲ್ಲೆಯ ಸಮಾಜದ ಹಾಲಿ ಹಾಗೂ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ-ಮಂಡಳಿ ಅಧ್ಯಕ್ಷರು, ಶ್ರೀಮಠದ ಧರ್ಮದರ್ಶಿಗಳು, ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಮಾಜದ ಹಿರಿಯರು, ಯುವಕರು, ಮಹಿಳೆಯರು ಹಾಗೂ ಸಮಸ್ತ ವಿವಿಧ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಸುಮಾರು 5ಸಾವಿರ ದಿಂದ 8 ಸಾವಿರದವರೆಗೆ ಜನ ಸೇರುವ ನಿರೀಕ್ಷೆಯಿದೆ ಎಂದರು.

ಗುರುಪೀಠದ ಸ್ವಾಮೀಜಿಗಳಿಗೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.

ಸಮಾಜದ ಮುಖಂಡರು ಮಾತನಾಡಿ, ಈ ಭಾಗದ ವಾಲ್ಮೀಕಿ ಸಮಾಜದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ಕಟ್ಟಡಗಳನ್ನು ನಿರ್ಮಿಸುವುದು, ಉತ್ತಮ ಸಂಸ್ಕಾರ, ಶಿಕ್ಷಣ, ಸಂಘಟನೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವುದು ಗುರುಪೀಠದ ಪ್ರಮುಖ ಉದ್ದೇಶವಾಗಿದೆ. ಸಮಾಜದ ಒಗ್ಗಟ್ಟು, ಶಿಕ್ಷಣ, ಸಂಘಟನೆ ಹಾಗೂ ಸಮಾನ ಅವಕಾಶಗಳ ಆಶಯದೊಂದಿಗೆ ಬಂಡೋಳಿಯಲ್ಲಿ ನಿರ್ಮಾಣವಾಗಲಿರುವ ಗುರುಪೀಠವು ಮುಂದಿನ ಪೀಳಿಗೆಯ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿಗೆ ಹೊಸ ದಾರಿಯಾಗಲಿ ಎಂಬ ಆಶಯಗಳನ್ನು ವ್ಯಕ್ತಪಡಿಸಿದರು.

ವಾಲ್ಮೀಕಿ ಸಮಾಜದ ರಾಜ್ಯ ಪುರಸ್ಕೃತ ನಂದಕುಮಾರ ಮಾಲಿಪಾಟೀಲ, ಸಮಾಜದ ಜಿಲ್ಲಾಧ್ಯಕ್ಷ ಗೌಡಪ್ಪಗೌಡ ಆಲ್ದಾಳ, ಸಿದ್ದನಗೌಡ ಕರಿಭಾವಿ, ರಾಜಾ ಮುಕುಂದ ನಾಯಕ, ಸುದರ್ಶನ ನಾಯಕ, ವೇಣುಗೋಪಾಲ ನಾಯಕ ಜೇವರ್ಗಿ, ಗಂಗಾಧರ ನಾಯಕ ತಿಂಥಣಿ, ರಾಮುನಾಯಕ ಅರಳಹಳ್ಳಿ, ದೇವಿಂದ್ರಪ್ಪ ಬಳಿ ಚಕ್ರ ಅವರು ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂವಿಧಾನ ಆಶಯಗಳ ಅರಿತು ಪಾಲಿಸುವುದು ಪ್ರತಿ ಪ್ರಜೆಯ ಕರ್ತವ್ಯ-ನಾಗರಾಜ
ಸಭೆ ಅರ್ಧಕ್ಕೆ ಎದ್ದು ಹೋದ ಟಿ.ಎಂ. ಶಾಹಿದ್ ತೆಕ್ಕಿಲ್