ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತಮ್ಮ ಕಚೇರಿಯಲ್ಲಿ ಸಕ್ರಿಯ ಸದಸ್ಯತ್ವ ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ದೇಶದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷವಾಗಿ ಹೊರಹೊಮ್ಮಿದೆ ಎಂದರು. ಪ್ರಧಾನಿ ಮೋದಿಯವರು ಮಿಸ್ ಕಾಲ್ ಕೊಡುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ದೇಶಾದ್ಯಂತ ಸದಸ್ಯತ್ವ ಅಭಿಯಾನ ಜೋರಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಕೂಡ ಬಿಜೆಪಿ ಸದಸ್ಯರಾಗಲು ಉತ್ಸುಕತೆಯಿಂದ ಜನ ಸ್ವಯಂ ಪ್ರೇರಣೆಯಿಂದ ಬರುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಬಾಗಲಕೋಟೆ ಜಿಲ್ಲೆಯೂ ಮೂರನೇ ಸ್ಥಾನದಲ್ಲಿದ್ದು ಈಗ ಮತ್ತೊಮ್ಮೆ ಅವಧಿ ವಿಸ್ತರಿಸಿದ ಕಾರಣ ಸಕ್ರಿಯ ಸದಸ್ಯತ್ವ ಪಡೆದುಕೊಳ್ಳುವುವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಗಲಕೋಟೆ ಜಿಲ್ಲೆ ಬಿಜೆಪಿ ಕಾರ್ಯಕರ್ತರು , ನಾಯಕರು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಬೂತಮಟ್ಟದ ಕಾರ್ಯಕರ್ತರು, ಮುಖಂಡರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿರುವ ಪರಿಣಾಮ ಸದಸ್ಯತ್ವ ಹೆಚ್ಚಾಗಲು ಸಹಾಯಕವಾಗುತ್ತಿದೆ ಎಂದು ಹೇಳಿದರು.