ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಟಿ.ಬಿ.ಬಡಾವಣೆಯ ಮಾಜಿ ಶಾಸಕ ಸುರೇಶ್‌ಗೌಡರ ಗೃಹ ಕಚೇರಿಯಲ್ಲಿ ಭಾನುವಾರ ನಡೆಸಿದ ಸುದ್ದಿಗೋಷ್ಠಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ತಾಲೂಕಿನ ಜೆಡಿಎಸ್ ಕಾರ್ಯಕರ್ತರನ್ನೇ ಟಾರ್ಗೆಟ್ ಮಾಡಿ 694 ಸಾಗುವಳಿ ಪತ್ರಗಳನ್ನು ಉದ್ದೇಶ ಪೂರ್ವಕವಾಗಿಯೇ ವಜಾಗೊಳಿಸಿದ್ದಾರೆ ಎಂದು ಆರೋಪಿಸಿದರು.
ಮಾಜಿ ಶಾಸಕ ಸುರೇಶ್‌ಗೌಡ ಅವರು ಯಾರಿಗೂ ಅನ್ಯಾಯ ಮಾಡಿಲ್ಲ. ಯಾವೊಬ್ಬ ರೈತರಿಂದಲೂ ಹಣ ಪಡೆದು ಜಮೀನು ಮಂಜೂರು ಮಾಡಿಕೊಟ್ಟಿಲ್ಲ. ಎಲ್ಲರಿಗೂ ಒಳ್ಳೆಯದನ್ನೇ ಮಾಡಿದ್ದಾರೆ. ಹಾಗಾಗಿ ಸರ್ಕಾರ ವಜಾಗೊಳಿಸಿರುವ ಆದೇಶ ಹಿಂಪಡೆದು ರೈತರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಶಾಸಕ ಸುರೇಶ್‌ಗೌಡರ ಬಗ್ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಅವರು ಅವಾಚ್ಯ ಶಬ್ದ ಬಳಸಿದ್ದರಿಂದ ಜೆಡಿಎಸ್ ಕಾರ್ಯಕರ್ತ ಚೇತನ್ ಪತ್ರಿಕಾಗೋಷ್ಠಿ ನಡೆಸಿ ರಾಜೇಶ್‌ಗೆ ಪ್ರತ್ಯುತ್ತರ ನೀಡಿದ್ದರು. ಈ ಸಂಬಂಧ ದೂರು ಸ್ವೀಕರಿಸಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ನಮ್ಮ ಪಕ್ಷದ ಕಾರ್ಯಕರ್ತ ಚೇತನ್ ಅವರನ್ನು ಠಾಣೆಗೆ ಕರೆಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಅವರಲ್ಲಿ ಕ್ಷಮೆಯಾಚಿಸುವಂತೆ ಹೆದರಿಸಿ ಬೆದರಿಸಿ ವೀಡಿಯೋ ಮಾಡಿಸಿ ಸಾಮಾಜಿಕ ಜಾಲತಾಣಕ್ಕೆ ಹಾಕಿಸಿದ್ದಾರೆಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಂಡಿಗನವಿಲೆ ಹೋಬಳಿ ಜೆಡಿಎಸ್ ಘಟಕದ ಅಧ್ಯಕ್ಷೆ ಸುನಿತ, ಬೆಳ್ಳೂರು ಹೋಬಳಿ ಘಟಕದ ಅಧ್ಯಕ್ಷೆ ಸುನಿತ ಇದ್ದರು.