ಕನ್ನಡಪ್ರಭ ವಾರ್ತೆ ಕುಶಾಲನಗರ
ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಯಿಂದ ಕಲಶ ಪೂಜೆ, ದುರ್ಗಾ ಹೋಮ, ಗಣಪತಿ ಪೂಜೆ, ಹೋಮ ಸಂಕಲ್ಪ ಪೂಜೆ, ಪಂಚಾಮೃತ ಅಭಿಷೇಕ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲದೊಂದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು.
ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ದೇವಾಲಯದ ಸೇವಾ ಸಮಿತಿ ಅಧ್ಯಕ್ಷರಾದ ರಾಮದಾಸ್ ಕಾರ್ಯದರ್ಶಿ ಎಂಎಂ ಚರಣ್, ಖಜಾಂಚಿ ಮುತ್ತಣ್ಣ ಮತ್ತು ಸಮಿತಿಯ ನಿರ್ದೇಶಕರು ಇದ್ದರು.