ಕೆಲಸದಲ್ಲಿ ಬೈಲಹೊಂಗಲ ಆಸ್ಪತ್ರೆ ಮುಂದಿದೆ

KannadaprabhaNewsNetwork |  
Published : Feb 17, 2026, 03:00 AM IST
ಗುಂಡು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೈಲಹೊಂಗಲ ರಾಜ್ಯದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳಲ್ಲಿ ಬೈಲಹೊಂಗಲ ಆಸ್ಪತ್ರೆ ಮುಂಚೂಣಿಯಲ್ಲಿದೆ. ಪ್ರತಿ ತಾಲೂಕು ಆಸ್ಪತ್ರೆ ಇದೇ ರೀತಿ ನಿರ್ವಹಣೆಯಾದರೆ ರೋಗಿಗಳ ಬಹುತೇಕ ಸಮಸ್ಯೆ ಪರಿಹಾರವಾಗುತ್ತದೆ. ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರಿಸುವ ಉದ್ದೇಶದಿಂದ ನೂತನವಾಗಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ನಿರ್ಮಾಣ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ರಾಜ್ಯದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳಲ್ಲಿ ಬೈಲಹೊಂಗಲ ಆಸ್ಪತ್ರೆ ಮುಂಚೂಣಿಯಲ್ಲಿದೆ. ಪ್ರತಿ ತಾಲೂಕು ಆಸ್ಪತ್ರೆ ಇದೇ ರೀತಿ ನಿರ್ವಹಣೆಯಾದರೆ ರೋಗಿಗಳ ಬಹುತೇಕ ಸಮಸ್ಯೆ ಪರಿಹಾರವಾಗುತ್ತದೆ. ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರಿಸುವ ಉದ್ದೇಶದಿಂದ ನೂತನವಾಗಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ನಿರ್ಮಾಣ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ 50 ಹಾಸಿಗೆಗಳ ತೀವ್ರ ನಿಗಾ ಘಟಕ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಬೆಳಗಾವಿ ಜಿಲ್ಲೆಗೆ ಸುಮಾರು ₹300 ಕೋಟಿ ಅನುದಾನ ಈಗಾಗಲೇ ಸರ್ಕಾರ ನೀಡಿದ್ದು, ವೈದ್ಯಕೀಯ ಸೇವೆ ಕೊಡುಗೆಯಾಗಿ ನೀಡಿದೆ. 50 ಹಾಸಿಗೆಗಳ ತೀವ್ರ ನಿಗಾ ಘಟಕ ನಿರ್ಮಾಣ ಬೈಲಹೊಂಗಲ ತಾಲೂಕಿಗೆ ಅತ್ಯವಶ್ಯವಾಗಿದೆ. ಆಸ್ಪತ್ರೆಯಲ್ಲಿ ತಿಂಗಳಿಗೆ ಸುಮಾರು 200 ಹೆರಿಗೆಗಳು ಆಗುತ್ತಿದ್ದು, ಇಲ್ಲಿವರೆಗೂ ಯಾವುದೇ ಸಮಸ್ಯೆ ಕೇಳಿ ಬಂದಿಲ್ಲ ಎಂದರು.

ಪುನೀತ್ ರಾಜಕುಮಾರ ಹೃದಯ ಜ್ಯೋತಿ, ಟೆಲಿ ಐಸಿಯು, ಗೃಹ ಆರೋಗ್ಯ ಯೋಜನೆ ಕೂಡ ಜಾರಿಯಲ್ಲಿದೆ. ಶಾಸಕರ ಬೇಡಿಕೆಯಂತೆ ಆಸ್ಪತ್ರೆಯ ಆವರಣದಲ್ಲಿ ಕಾಂಪೌಂಡ್ ನಿರ್ಮಿಸಲು ಅಗತ್ಯವಿರುವ ₹2 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಈ ಕಟ್ಟಡ ನಿರ್ಮಾಣ ಕಾಮಗಾರಿಗೆ ಸುಮಾರು ₹ 23 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೈಲಹೊಂಗಲ ಆಸ್ಪತ್ರೆಯ ಸಿಬ್ಬಂದಿ ಒಳ್ಳೆಯ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 7 ವರ್ಷಗಳ ಹಿಂದೆ 110 ಒಪಿಡಿ ಗಳು ಮಾತ್ರ ನೋಂದಣಿಯಾಗುತ್ತಿದ್ದವು. ಈಗ 800 ಕ್ಕೂ ಅಧಿಕ ಒಪಿಡಿ ನೋಂದಣಿಯಾಗುತ್ತಿವೆ. ಸಾರ್ವಜನಿಕರಿಂದ ಆಸ್ಪತ್ರೆಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಕ್ಷಣಾತ್ಮಕ ದೃಷ್ಟಿಯಿಂದ ಆಸ್ಪತ್ರೆ ಕಾಂಪೌಂಡ್ ನಿರ್ಮಾಣಕ್ಕೆ ₹ 2 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಆಂಬ್ಯುಲೆನ್ಸ್ ಸುತ್ತುವ ವ್ಯಾಪ್ತಿ ದೊಡ್ಡದಾಗಿದ್ದು, ತಿಂಗಳ ಇಂಧನ ವೆಚ್ಚದ ಮಿತಿ ಹೆಚ್ಚಿಸಬೇಕು. ಗುತ್ತಿಗೆದಾರ ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಂಡು ಪೂರ್ಣಗೊಳಿಸಬೇಕು ಎಂದರು. ಈ ವೇಳೆ ಸಚಿವ, ಶಾಸಕರು, ಅಭಿಯಂತರರು, ಗುತ್ತಿಗೆದಾರ, ಮೂರ್ತಿಕಾರರನ್ನು ಸನ್ಮಾನಿಸಲಾಯಿತು. ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಕೆಎಸ್ಆರ್‌ಟಿಸಿ ರಾಜ್ಯ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಜಿಲ್ಲಾ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಈಶ್ವರ ಗಡಾದಿ, ತಹಸೀಲ್ದಾರ ಹನುಮಂತ ಶಿರಹಟ್ಟಿ, ತಾಲೂಕು ವೈದ್ಯಾಧಿಕಾರಿ ಸಂಜಯ ಸಿದ್ದಣ್ಣವರ, ಆರೋಗ್ಯ ರಕ್ಷಣಾ ಸಮಿತಿಯ ಸದಸ್ಯರಾದ ಬಸವರಾಜ ಜನ್ಮಟ್ಟಿ, ಮಹಾಂತೇಶ ಕಳ್ಳಿಬಡ್ಡಿ, ಸೋಮನಗೌಡ ಪಾಟೀಲ, ಜಿನ್ನಪ್ಪ ಮಲ್ಲಾಡಿ, ಸಿದ್ದಯ್ಯ ಮಠಪತಿ, ಸದಾನಂದ ನಂಜಪ್ಪನವರ, ಮಲ್ಲವ್ವ ಬುಡರಕಟ್ಟಿ, ಡಾ.ತೌಸೀಫ ಸಂಗೊಳ್ಳಿ, ಅರ್ಜುನ ಕಲಕುಟಕರ, ಸಿದ್ದಪ್ಪ ಶೀಗಿಹಳ್ಳಿ, ಡಾ.ಮಹಾಂತೇಶ ಗದಗ, ಮಹಾಂತೇಶ ತುರಮರಿ ಉಪಸ್ಥಿತರಿದ್ದರು. ಬಸವರಾಜ ಕೌಜಲಗಿ, ಮಲ್ಲಪ್ಪ ಮುರಗೋಡ ಸೇರಿ ಹಲವರು ಇದ್ದರು.

ಮುಖ್ಯವೈದ್ಯಾಧಿಕಾರಿ ಡಾ.ರವೀಂದ್ರಕುಮಾರ ಜಕನೂರ ಸ್ವಾಗತಿಸಿದರು. ಡಾ.ಅನೀಲ ಅಗ್ನಿಹೋತ್ರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಎಲ್‌ಡಿಇ ಸಂಸ್ಥೆಯಿಂದಲೇ ಅಂಗಾಂಗ ದಾನದ ಜಾಗೃತಿ ಅಭಿಯಾನ
ಸಂಭ್ರಮದ ಶಿವಯೋಗಮಂದಿರದ ಮಹಾರಥೋತ್ಸವ