ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ನಗರದ ಜಿಲ್ಲಾ ಸಿಪಿಐಎಂ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೈರಮಂಗಲ ಕ್ರಾಸ್ ಹಾರೋಹಳ್ಳಿ ಮುಖ್ಯರಸ್ತೆಯ ಅಬ್ಬನಕುಪ್ಪೆ ಬಿಎಂಟಿಸಿ ಬಸ್ ಡಿಪೋದಿಂದ ಮೇ 29ರ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಮೆರವಣಿಗೆಯನ್ನು ಅಖಿಲ ಭಾರತ ಕಿಸಾನ್ ಸಭಾ ರಾಷ್ಟ್ರೀಯ ಸಹ ಕಾರ್ಯದರ್ಶಿ ಡಿ. ರವೀಂದ್ರನ್ ಉದ್ಘಾಟಿಸಲಿದ್ದು, ಸಿಐಟಿಯು ರಾಜ್ಯ ಪ್ರದಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ, ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷ ಯು ಬಸವರಾಜ, ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ ಟಿ, ಹಿರಿಯ ರೈತ ಮುಖಂಡರಾದ ಎನ್ ವೆಂಕಟಾಚಲಯ್ಯ ಸೇರಿ ರೈತ ಸಂಘದ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕೆಪಿಆರ್‌ಸ್ ಕಾರ್ಯದರ್ಶಿ ಚನ್ನರಾಯಪ್ಪ ಮಾತನಾಡಿ, ಫಲವತ್ತಾದ ನೀರಾವರಿ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್ ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿಯಾಗಿದ್ದು ರೈತರ ಪಕ್ಷಾತೀತ ವಿರೋಧವನ್ನೂ ಲೆಕ್ಕಿಸದೇ ಏಪ್ರಿಲ್ 30 ರಂದು ರಾಜ್ಯ ಸರ್ಕಾರದ ಅನುಮೋದನೆ ನೀಡಿರುವುದು ರೈತರ ಸಂವಿಧಾನ ಬದ್ಧ ಹಕ್ಕುಗಳ ಉಲ್ಲಂಘನೆ ಹಾಗೂ ಸರ್ವಾಧಿಕಾರಿ ಕ್ರಮವಾಗಿದೆ ಎಂದು ಆರೋಪಿಸಿದರು.ಈ ಹಿನ್ನೆಲೆಯಲ್ಲಿ ರೈತರ ಹೋರಾಟ ಬಲಪಡಿಸಲು ಹಾಗೂ ಹೋರಾಡುತ್ತಿರುವ ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಕರ್ನಾಟಕ ಪ್ರಾಂತ ರೈತ ಸಂಘ ಬೈರಮಂಗಲ ಚಲೋ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಸಿಕೆಬಿ-1 ಸುದ್ದಿಗೋಷ್ಠಿಯಲ್ಲಿ ಬಿ.ಎನ್. ಮುನಿಕೃಷ್ಣಪ್ಪ ಮಾತನಾಡಿದರು.