ಧರ್ಮಸ್ಥಳ: ಇಂದಿನಿಂದ ರಾಜ್ಯಮಟ್ಟದ ಭಜನಾ ಕಮ್ಮಟ

KannadaprabhaNewsNetwork |  
Published : Sep 28, 2026, 02:15 AM IST
ವೀರೇಂದ್ರ ಹೆಗ್ಗಡೆ | Kannada Prabha

ಸಾರಾಂಶ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟ 28ರಿಂದ ಅ.4ರವರೆಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟ 28ರಿಂದ ಅ.4ರವರೆಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

28ರಂದು ಬೆಳಗ್ಗೆ 11 ಗಂಟೆಗೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕಮ್ಮಟ ಉದ್ಘಾಟಿಸಲಿದ್ದು, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಣಿಲ ಶ್ರೀಧಾಮ ಶ್ರೀಮಹಾಲಕ್ಷ್ಮಿ ಭಜನಾ ಪರಿಷತ್ ಉಪಾಧ್ಯಕ್ಷ ಸೇವಾ ಪ್ರತಿಷ್ಠಾನದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ.ಹೇಮಾವತಿ ವೀ.ಹೆಗ್ಗಡೆ ಹಾಗೂ ಡಿ.ಹರ್ಷೇಂದ್ರ ಕುಮಾ‌ರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅ.4ರಂದು ಬೆಳಗ್ಗೆ 11 ಗಂಟೆಗೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನ ದಲ್ಲಿ ಸಮಾರೋಪ ನಡೆಯಲಿದೆ. ಸುತ್ತೂರಿನ ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತಿ ವಹಿಸಲಿದ್ದು, ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಹರೀಶ್, ಕುಮಾ‌ರ್, ಭಜನಾ ಪರಿಷತ್ ಉಪಾಧ್ಯಕ್ಷರಾದ ಡಾ.ಹೇಮಾವತಿ ವೀ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ ಹಾಗೂ ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಭಜನಾ ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾದೇಶಿಕ ಭಜನಾ ಪರಿಷತ್ ಸಾಲಿಯಾನ್, ಭಜನಾ ಕಮ್ಮಟ ಅಧ್ಯಕ್ಷ ಚಂದ್ರಶೇಖರ್ ಕಾರ್ಯದರ್ಶಿ ಧರ್ಮಸ್ಥಳ ಪ್ರಾದೇಶಿಕ ಭಜನಾ ಪರಿಷತ್ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬನ್ನೂರು, ಎ.ವಿ.ಶೆಟ್ಟಿ, ಶ್ರೀ ಮಂಜುನಾಥೇಶ್ವರ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ಶೋಭಾಯಾತ್ರೆ

ಅ.4ರಂದು ಬೆಳಗ್ಗೆ 9.30ಕ್ಕೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕಾಸರಗೋಡು ಜಿಲ್ಲೆಗಳ ಆಯ್ದ ಭಜನಾ ಮಂಡಳಿಗಳ ಸುಮಾರು 400 ಭಜನಾ ತಂಡಗಳ 6 ಸಾವಿರಕ್ಕೂ ಅಧಿಕ ಭಜನಾ ಪಟುಗಳಿಂದ ಶೋಭಾಯಾತ್ರೆ ನಡೆಯಲಿದೆ. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ ಭಜನಾ ಕಾರ್ಯಕ್ರಮ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್ ಶಾಸಕರಿಗೇ ಸರ್ಕಾರದ ಮೇಲೆ ವಿಶ್ವಾಸವಿಲ್ಲ: ಮಟ್ಟಾರು
ಕುಟುಂಬದ ಭದ್ರತೆಗೆ ಮನೆಯ ಹಿರಿಯರು ಬೇರು ಇದ್ದಂತೆ : ನ್ಯಾ. ರಾಮಲಿಂಗಪ್ಪ