ಶಿವಮೊಗ್ಗ ಗೋರಕ್ಷಕರ ಮೇಲೆ ನಡೆದ ದಾಳಿಗೆ ಬಜರಂಗದಳ ಖಂಡನೆ

KannadaprabhaNewsNetwork |  
Published : Aug 27, 2026, 01:45 AM IST
ದಂಗೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ | Kannada Prabha

ಸಾರಾಂಶ

ಆ. ೧೫ ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ವಧೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು, ಕಾನೂನುಬದ್ಧವಾಗಿ ಗೋವುಗಳನ್ನು ರಕ್ಷಿಸಲು ಮುಂದಾದ ಗೋರಕ್ಷಕರ ಮೇಲೆ ಪೂರ್ವನಿಯೋಜಿತ ಸಂಚು ನಡೆಸಿ, ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಯತ್ನಿಸಿದ ಘಟನೆಯು ಬಹಳ ಆತಂಕಕಾರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಶಿಕಾರಿಪುರದಲ್ಲಿ ಗೋರಕ್ಷಕ ಕಾರ್ಯಕರ್ತರ ಮೇಲೆ ದಾಳಿಯನ್ನು ತೀವ್ರವಾಗಿ ಖಂಡಿಸಿ, ದಂಗೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಾಗೂ ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಲು ಆಗ್ರಹಿಸಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಆ. ೧೫ ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ವಧೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು, ಕಾನೂನುಬದ್ಧವಾಗಿ ಗೋವುಗಳನ್ನು ರಕ್ಷಿಸಲು ಮುಂದಾದ ಗೋರಕ್ಷಕರ ಮೇಲೆ ಪೂರ್ವನಿಯೋಜಿತ ಸಂಚು ನಡೆಸಿ, ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಯತ್ನಿಸಿದ ಘಟನೆಯು ಬಹಳ ಆತಂಕಕಾರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಶಿಕಾರಿಪುರ ಮಾತ್ರವಲ್ಲದೆ, ಸಮಗ್ರ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಹ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ನಿರಂತರವಾಗಿ ಅಕ್ರಮ ಗೋಸಾಗಾಟ ಹಾಗೂ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿರುವುದು ಅತ್ಯಂತ ವಿಷಾದಕರ.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ ೨೦೨೦ ಜಾರಿಯಲ್ಲಿದ್ದರೂ ಸಹ, ರಾಜ್ಯದ ಹಲವೆಡೆ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿರುವುದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಗೋರಕ್ಷಕರ ಮೇಲೆ ಕೊಲೆ ಯತ್ನ ನಡೆಸಿದ ಎಲ್ಲಾ ಆರೋಪಿಗಳನ್ನು ಹಾಗೂ ಅವರ ಹಿಂದಿರುವ ಸಂಚುಕೋರರನ್ನು ತಕ್ಷಣವೇ ಬಂಧಿಸಿ, ಅವರ ವಿರುದ್ಧ ಜಾಮೀನು ರಹಿತ ಕಠಿಣ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಸಿ.ಟಿ. ಶ್ರೀನಿವಾಸ್, ಸಂಯೋಜಕ ರಮೇಶ್ ನಾಯಕ, ಎಂ. ಮಂಜುನಾಥ್, ಶಿವು, ಮಂಜು, ಕಿಟ್ಟಿ, ಅನಿಲ್, ರವಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನ್ಯಾಯಬೆಲೆ ಅಂಗಡಿಗಳಲ್ಲಿ ಬಿಗಡಾಯಿಸಿದ ಸರ್ವರ್ ಸಮಸ್ಯೆ
ಮಠಗಳು ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂದು: ಸುತ್ತೂರು ಶ್ರೀಗಳು