ಸುಂಟಿಕೊಪ್ಪ: ಬಕ್ರೀದ್ ಹಬ್ಬ ಆಚರಣೆ

KannadaprabhaNewsNetwork |  
Published : Jun 08, 2025, 02:09 AM IST
ತ್ಯಾಗ | Kannada Prabha

ಸಾರಾಂಶ

ಬಕ್ರೀದ್‌ ಹಬ್ಬದ ಅಂಗವಾಗಿ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸುಂಟಿಕೊಪ್ಪದಲ್ಲಿ ಮುಸ್ಲಿಂ ಬಾಂಧವರು ತ್ಯಾಗ, ಸಮಾನತೆ, ಸಹಬಾಳ್ವೆಯ ಸಂಕೇತವಾದ ಬಕ್ರೀದ್ ಹಬ್ಬದ ಅಂಗವಾಗಿ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಆಲಂಗಿಸಿಕೊಂಡು ಶುಭಾಶಯ ವಿನಿಮಯಗೊಳಿಸಿ ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಿಸಿಕೊಂಡರು.

ಶನಿವಾರ ರಂಜಾನ್ ಈದ್‌ಉಲ್ ಪಿತ್ತರ್ ಅಂಗವಾಗಿ ಪಟ್ಟಣದಲ್ಲಿ ಹೊಸ ಉಡುಪುಗಳನ್ನು ತೊಟ್ಟು ಒಬ್ಬರಿಗೊಬ್ಬರು ಈದ್ ಉಲ್ ಆಧಾ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ಮುಂಜಾನೆ ವೇಳೆ ಕಂಡು ಬಂದವು.

ಸುಂಟಿಕೊಪ್ಪ ಪಟ್ಟಣದ ಸುನ್ನಿ ಶಾಫಿ ಜುಮ್ಮ ಮಸ್ಜಿದ್‌ನಲ್ಲಿ ಇಬ್ರಾಹಿಂ ಯಾಸನಿ, ಸುನ್ನಿ ಹನಫಿ ಮುಸ್ಲಿಂ ಜಮಾಅತ್ ಮೌಲನಾ ಜುಬೇರ್, ಸುನ್ನಿ ಶಾಫಿ ಜುಮಾ ಮಸ್ಜಿದ್ ಧಾರ್ಮಿಕ ಧರ್ಮಗುರುಗಳಾದ ಇಸಾಂ ಬಾಕವಿ, ಕೂಬ್ಬ ಮಸ್ಜಿದ್ ಮೌಲನಾ ಇನಾಂ, ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್ ಮುಸ್ಲಿಯರ್ ಅಬ್ದುಲ್ ಅಜೀಜ್ ಸಖಾಫಿ ಅವರು ಧಾರ್ಮಿಕ ಪ್ರವಚನ ಪ್ರಾರ್ಥನೆ ಸಲ್ಲಿಸಿದರು.

ಈದ್‌ಉಲ್ ಆಧಾ ಅಂಗವಾಗಿ ಶನಿವಾರ ಎಲ್ಲಾ ಜುಮ್ಮ ಮಸೀದಿಗಳಲ್ಲಿ ಪ್ರಾರ್ಥನೆ ಧಾರ್ಮಿಕ ಪ್ರವಚನದ ನಂತರ ಮುಸ್ಲಿಂಬಾಂಧವರು ಒಬ್ಬರನ್ನೊಬ್ಬರು ಆಲಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ನಂತರ ಮುಸ್ಲಿಂ ಬಾಂಧವರು ಗದ್ದೆಹಳ್ಳದ ಈದ್ಗಾಗಳಿಗೆ ಕುಟುಂಬದಲ್ಲಿ ಮೃತರಿಗೆ ಪ್ರಾರ್ಥನೆಯನ್ನು ಸಲ್ಲಿಸಿ ಮನೆಗಳಲ್ಲಿ ಕುಟುಂಬದವರೊಂದಿಗೆ ಹಬ್ಬ ಆಚರಣೆ ಸಡಗರದಲ್ಲಿ ತೊಡಗಿಸಿಕೊಂಡರು.

ಸಲಾಫಿ ಮಸೀದಿಯಲ್ಲಿ ಬಕ್ರೀದ್ ಈದ್‌ಉಲ್ ಆಧಾ ಅಂಗವಾಗಿ ನಿಷಾದ್ ಸಲಾಯಿ ಅವರು ಧಾರ್ಮಿಕ ಪ್ರವಚನ ಹಾಗೂ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಪುರುಷರು, ಮಹಿಳೆಯರು, ಮಕ್ಕಳು ಒಗ್ಗೂಡಿ ಪ್ರಾರ್ಥನೆಯನ್ನು ಸಲ್ಲಿಸಿದರು.

ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್, ಹಾಗೂ ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ವಹಿಸಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌