ರಾಮನಗರ: ಜಿಲ್ಲೆಯವರೇ ಆದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವುದು ಬಹುತೇಕ ಖಚಿತವಾಗಿದ್ದು, ಅವರೊಂದಿಗೆ ಸಚಿವರಾಗಿ ಜಿಲ್ಲೆಯ ಹಿರಿಯ ಹಾಗೂ ಅನುಭವಿ ರಾಜಕಾರಣಿಯಾದ ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೂ ಸಚಿವ ಸ್ಥಾನ ಸಿಗಲಿದಿಯೇ ಎಂಬ ಕುತೂಹಲ ಮೂಡಿದೆ.
2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾದಾಗ ಬಾಲಕೃಷ್ಣ ಸಚಿವ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ನಡೆಸಿದ್ದರು. ಅವರಿಗೆ ಸಚಿವ ಸ್ಥಾನದ ಬದಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸಲಾಗಿತ್ತು. ಇಷ್ಟೇ ಅಲ್ಲದೆ, ಕಳೆದ ಮಾರ್ಚ್ ತಿಂಗಳಲ್ಲಿ ಬಾಲಕೃಷ್ಣರವರು ಹಿರಿಯ ಶಾಸಕರೊಂದಿಗೆ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರಿಗೂ ಪತ್ರ ಬರೆದು ಸಂಪುಟ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅದು ಈಡೇರಿರಲಿಲ್ಲ. ಆದರೀಗ ಸಚಿವ ಸ್ಥಾನಕ್ಕಾಗಿ ಬಿಗಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಕಮಲ 1, ದಳ 3 ಬಾರಿ ಶಾಸಕರಾದರು:ನಾಡಪ್ರಭು ಕೆಂಪೇಗೌಡರ ನೆಲವಾದ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಬಾಲಕೃಷ್ಣರವರು 5ನೇ ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಚುನಾಯಿತರಾಗಿದ್ದಾರೆ. ಬಿಜೆಪಿ ಪಕ್ಷದಿಂದ ಒಂದು ಬಾರಿ ಹಾಗೂ ಜೆಡಿಎಸ್ ಪಕ್ಷದಿಂದ 3 ಬಾರಿ ಶಾಸಕರಾಗಿ ವಿಧಾನಸೌಧ ಪ್ರವೇಶಿಸಿದವರು.
ಬಾಲಣ್ಣ ಕಾಂಗ್ರೆಸ್ ಸೇರ್ಪಡೆ :
2018ರ ವಿಧಾನಸಭಾ ಚುನಾವಣೆ ವೇಳೆಗೆ ಬಾಲಕೃಷ್ಣರವರು ಸ್ನೇಹಿತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಜೆಡಿಎಸ್ ನ ಎ.ಮಂಜುನಾಥ್ ವಿರುದ್ಧ 51,425 ಮತಗಳ ಅಂತರದಿಂದ ಪರಾಭವಗೊಂಡರು.
ಮಾಗಡಿ ಕ್ಷೇತ್ರ ವ್ಯಾಪ್ತಿಯ 36 ಗ್ರಾಮ ಪಂಚಾಯಿತಿಗಳ ಪೈಕಿ 22 ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತರೇ ಅಧಿಕಾರ ಹಿಡಿಯುವಲ್ಲಿ ಬಾಲಕೃಷ್ಣ ಹೆಚ್ಚಿನ ಶ್ರಮ ವಹಿಸಿದರು. ಅಲ್ಲದೆ, ಹಲವಾರು ಕಾರ್ಯಕ್ರಮಗಳ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಬಲಿಷ್ಠವಾಗಿ ಸಂಘಟಿಸುವ ಕಾರ್ಯವನ್ನು ಮಾಡಿದರು.
ಕ್ಷೇತ್ರಕ್ಕೆ ಕುಟುಂಬದ ಕೊಡುಗೆ ? :
ಹುಲಿಕಟ್ಟೆ ಜಿ.ಚನ್ನಪ್ಪ ಅವರು 1972, 1983, 1985ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದರು. ಆನಂತರದ ಚುನಾವಣೆಗಳಲ್ಲಿ ಬಾಲಕೃಷ್ಣರವರು ಗೆಲುವು ಸಾಧಿಸಿ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ಬಾಲಕೃಷ್ಣ ಅವರಿಗೆ ಸಚಿವ ಸ್ಥಾನ ಪ್ರಾಪ್ತಿಯಾಗಲಿದಿಯೇ ಎಂಬ ಚರ್ಚೆಗಳು ನಡೆಯುತ್ತಿವೆ.
ಸಚಿವ ಸ್ಥಾನ ಕೊಡುವುದು ಕಷ್ಟಸಾಧ್ಯ
ಕನಕಪುರ ಕ್ಷೇತ್ರ ಶಾಸಕರಾಗಿ ಆಯ್ಕೆಯಾದ ಡಿ.ಕೆ.ಶಿವಕುಮಾರ್ ರವರು ಉಪಮುಖ್ಯಮಂತ್ರಿಯಾಗಿ ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದರು. ಈಗ ಮುಖ್ಯಮಂತ್ರಿ ಹುದ್ದೆ ಲಭಿಸಿರುವುದು ಜಿಲ್ಲೆಗೆ ಖುಷಿಯ ಸಂಗತಿ. ಸಿಎಂ ಸ್ಥಾನವೇ ಸಿಕ್ಕಿರುವಾಗ ಬೇರೊಬ್ಬ ಶಾಸಕರಿಗೆ ಸಚಿವ ಸ್ಥಾನ ಕೊಡುವುದು ಕಷ್ಟಸಾಧ್ಯ ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ನಡೆದಿವೆ.ಕೋಟ್ ..........
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಡಿ.ಕೆ.ಶಿವಕುಮಾರ್ ರವರ ನೇತೃತ್ವದ ಸರ್ಕಾರದಲ್ಲಿ ಸಚಿವನಾಗಿ ಕೆಲಸ ಮಾಡುವ ಅಭಿಲಾಷೆ ಹೊಂದಿದ್ದೇನೆ. ಹೈಕಮಾಂಡ್ ನಿರ್ಧಾರ ಏನೆಂದು ಕಾದು ನೋಡಬೇಕು. ನಾನು ಆಶಾವಾದಿಯಾಗಿದ್ದು, ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ.-ಎಚ್.ಸಿ.ಬಾಲಕೃಷ್ಣ, ಶಾಸಕರು, ಮಾಗಡಿ ಕ್ಷೇತ್ರ
29ಕೆಆರ್ ಎಂಎನ್ 6,7.ಜೆಪಿಜಿ6.ಎಚ್.ಸಿ.ಬಾಲಕೃಷ್ಣ
7.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಶಾಸಕ ಬಾಲಕೃಷ್ಣ--------------------------