ಕನ್ನಡಪ್ರಭ ವಾರ್ತೆ ನಾಪೋಕ್ಲು
ಕಣ್ಣೇಶ್ವರ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಿ ಉತ್ಸವಕ್ಕೆ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿವರ್ಷದಂತೆ ಅಗಸ್ತ್ಯೇಶ್ವರ ದೇವಾಲಯದಲ್ಲಿ ಕಾವೇರಿ ತೀರ್ಥೋದ್ಭವದ ಮರುದಿನ ಜಾತ್ರೆ ಜರುಗಲಿದೆ.ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಮಹಾಮಂಗಳಾರತಿ ನೆರವೇರಿಸಿ ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆದು ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಲಿದೆ.
ತುಲಾಸಂಕ್ರಮಣದ ಸಂದರ್ಭದಲ್ಲಿ ಕಾವೇರಿಯ ಉಗಮಸ್ಥಾನ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಅಧಿಕ ಸಂಖ್ಯೆಯಲ್ಲಿ ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡಿ ಪುನೀತರಾಗಿ ತೆರಳುವರು.ಪ್ರತಿವರ್ಷ ಕಾವೇರಿ ತೀರ್ಥೋದ್ಭವದ ಮರುದಿನ ಬಲಮುರಿ ಜಾತ್ರೆ ನಡೆಯುವುದು. ತಲಕಾವೇರಿಯಂತೆ ಬಲಮುರಿಯೂ ಸಹ ಬಲು ಪಾವಿತ್ರ್ಯದ ಪುಣ್ಯಸ್ಥಳ. ಬಲಮುರಿಯಲ್ಲಿ ಕಣ್ಣೇಶ್ವರ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಿವೆ.