ಬಳಂಜ: ಉಚಿತ ಪುಸ್ತಕ ವಿತರಣಾ ಸಮಾರಂಭ

KannadaprabhaNewsNetwork |  
Published : Jun 12, 2025, 01:56 AM IST
ದತ್ತಿನಿಧಿ | Kannada Prabha

ಸಾರಾಂಶ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆ ನೇತೃತ್ವದಲ್ಲಿ ಇತ್ತೀಚೆಗೆ, ಸಂಘದ ಧತ್ತಿನಿಧಿ ಯೋಜನೆಯಡಿ ಉಚಿತ ಪುಸ್ತಕ ವಿತರಣಾ ಸಮಾರಂಭ ನೆರವೇರಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿವಿದ್ಯೆಯೆಂಬ ಶಕ್ತಿ ನಮ್ಮೊಳಗಿದ್ದಾಗ ಆತ್ಮವಿಶ್ವಾಸ ಹೆಚ್ಚಾಗಿ ಸರಿಯಾದ ಗುರಿ ತಲುಪಲು ಸಾಧ್ಯವಿದೆ. ಜನರಲ್ಲಿ ಜಾಗೃತಿ ಮೂಡಿ,ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿದಾಗ ಸಮಾಜದ ಬದಲಾವಣೆ ಸಾಧ್ಯ. ಬದುಕಿನ ಉನ್ನತಿಗೆ ಶಿಕ್ಷಣವೇ ಭದ್ರ ಬುನಾದಿ ಎಂದು ನಿವೃತ್ತ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ಹೇಳಿದ್ದಾರೆ.ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆ ನೇತೃತ್ವದಲ್ಲಿ ಇತ್ತೀಚೆಗೆ, ಸಂಘದ ಧತ್ತಿನಿಧಿ ಯೋಜನೆಯಡಿ ನೀಡಲ್ಪಡುವ ಉಚಿತ ಪುಸ್ತಕ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣದ ಮೂಲಕ ಕೇರಳದಲ್ಲಿ ಕ್ರಾಂತಿ ಮಾಡಿ ಸಾಕ್ಷರತೆಯ ನಾಡನ್ನಾಗಿ ಪರಿವರ್ತಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಅದ್ಬುತ ಚಿಂತನೆ, ದೂರದೃಷ್ಟಿ ಸಾರ್ವಕಾಲಿಕವಾದುದು. ಅವರ ತತ್ವ, ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಉನ್ನತಿ ಪಡೆಯುತ್ತದೆ ಎಂದರು.ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯವಾಗಿದ್ದು ಕಳೆದೆರೆಡು ದಶಕಗಳಿಂದ ಸಂಘವು ಧತ್ತಿನಿಧಿ ಯೋಜನೆಯಿಂದ ಕಲಿಕೆಗೆ ಹೆಚ್ವಿನ ಪ್ರೋತ್ಸಾಹ ನೀಡುತ್ತಿದೆ ಎಂದರು.ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು,ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.ವೀಣ್ ಕುಮಾರ್ ಹೆಚ್‌ ಎಸ್ ಸ್ವಾಗತಿಸಿ, ಶಿಕ್ಷಕಿ ವಿಶಾಲ ಜಗದೀಶ್ ನಿರೂಪಿಸಿ,ವಂದಿಸಿ ದರು. ಸಂಘದ ಮಾಜಿ ಅಧ್ಯಕ್ಷರು,ನಿರ್ದೇಶಕರು ಸದಸ್ಯರು ಸಹಕರಿಸಿದರು.

....................

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನದತ್ತಿನಿಧಿ ಯೋಜನೆಯಿಂದ ನೀಡಲ್ಪಡುವ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಪಿಯುಸಿ ಹಾಗೂ ಎಸ್.ಎಸ್.ಎಲ್‌ಸಿ ಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಾದ ಮೌಲ್ಯ ಕಾಪಿನಡ್ಕ,ಸುಜ್ಞಾ ಅಶ್ವಥಪಲಿಕೆ,ರಿತಿಕಾ ಪೂಜಾರಿ ಬಳಂಜ,ರಮ್ಯ ಬಳಂಜ ಇವರನ್ನು ಸನ್ಮಾನಿಸಲಾಯಿತು. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಸ್ತಾಂತರಿಸಲಾಯಿತು.ನೂರಾರು ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಹಾಗೂ ನೀರಿನ ಬಾಟಲಿ ನೀಡಿ ಶೈಕ್ಷಣಿಕವಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಯಿತು.

.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ