ಬಲಿಪ ಭಾಗವತರ ಮೊದಲ ಸಂಸ್ಮರಣೆ, ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Apr 12, 2024, 01:04 AM IST
ಗೋವಿಂದ ಭಟ್ ಅವರಿಗೆ ಬಲಿಪ  ಭಾಗವತ  ಪ್ರಶಸ್ತಿ ಪ್ರದಾನ | Kannada Prabha

ಸಾರಾಂಶ

ಗೋವಿಂದ ಭಟ್‌ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬಲಿಪರು ಎಂದರೆ ಯಕ್ಷಗಾನ ಯಕ್ಷಗಾನ ಎಂದರೆ ಬಲಿಪರು ಎನ್ನುವ ಮಟ್ಟಕ್ಕೆ ಬಲಿಪರು ಬೆಳಗಿದ್ದರು ಎಂದು ಗತವೈಭವನ್ನು ನೆನಪಿಸಿಕೊಂಡರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಯಕ್ಷಗಾನ ಲೋಕದ ಮೇರು ಭಾಗವತ ದಿ. ಬಲಿಪ ನಾರಾಯಣ ಭಾಗವತ ಅವರ ಮೊದಲ ವರ್ಷದ ಸಂಸ್ಮರಣೆಯ ಅಂಗವಾಗಿ ಹಿರಿಯ ಕಲಾವಿದ ಸುರಿಕುಮೇರಿ ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾರೂರಿನ ನೂಯಿಯಲ್ಲಿರುವ ಬಲಿಪರ ನಿವಾಸದ ಆವರಣದಲ್ಲಿ ಜರುಗಿದ ಕಟೀಲು ಮೇಳದ ಹರಕೆ ಬಯಲಾಟದ ರಂಗಸ್ಥಳದಲ್ಲಿ ಮಾನಪತ್ರ, ನಗದು ಗೌರವದೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗೋವಿಂದ ಭಟ್‌ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬಲಿಪರು ಎಂದರೆ ಯಕ್ಷಗಾನ ಯಕ್ಷಗಾನ ಎಂದರೆ ಬಲಿಪರು ಎನ್ನುವ ಮಟ್ಟಕ್ಕೆ ಬಲಿಪರು ಬೆಳಗಿದ್ದರು ಎಂದು ಗತವೈಭವನ್ನು ನೆನಪಿಸಿಕೊಂಡರು. ಕಟೀಲಿನ ಶ್ರೀಹರಿನಾರಾಯಣ ದಾಸ ಆಸ್ರಣ್ಣ ಆಶೀರ್ವಚನ ನೀಡಿದರು. ಮಾರೂರು ಖಂಡಿಗ ರಾಮದಾಸ ಆಸ್ರಣ್ಣ, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಮೂಡುಬಿದಿರೆಯ ಉದ್ಯಮಿ ಕೆ. ಶ್ರೀಪತಿ ಭಟ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ಕೆ. ರಾಮ ಭಟ್ ಮತ್ತಿತರರು ಉಪಸ್ಥಿತರಿದ್ದರು. ಕೆ. ವತ್ಸ ಭಟ್, ಕರ್ಪೆ ನೀಲಕಂಠ ಭಟ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!