ಎಕ್ಸಿಟ್‌ ಪೋಲ್‌ ಸಮೀಕ್ಷೆಗೆ ನಿಷೇಧ: ತುಷಾರ್‌

KannadaprabhaNewsNetwork |  
Published : Mar 29, 2024, 02:01 AM IST
ಚುನಾವಣೆ | Kannada Prabha

ಸಾರಾಂಶ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಮತ್ತು ಚುನಾವಣಾ ನಂತರದ ಸಮೀಕ್ಷೆಯನ್ನು ಪ್ರಸಾರ ಮಾಡದಂತೆ ನಿಷೇಧಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಲೋಕಸಭಾ ಚುನಾವಣೆಯು ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು, ಎಲ್ಲಾ ಹಂತದ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮಾಧ್ಯಮಗಳು ಚುನಾವಣಾ ಪೂರ್ವ ಮತ್ತು ಚುನಾವಣಾ ನಂತರದ ಸಮೀಕ್ಷೆ (ಎಕ್ಸಿಟ್ ಪೋಲ್ ಸಮೀಕ್ಷೆ) ಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಜಿಲ್ಲಾ ಚುನಾವಣಾಕಾರಿ ತುಷಾರ್ ಗಿರಿನಾಥ್ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಚುನಾವಣಾ ನೀತಿ ಸಂಹಿತೆ ನಿಯಮಗಳು, ಮುದ್ರಣ, ದೃಶ್ಯ ಮತ್ತು ಸಾಮಾಜಿಕ ಜಾಲತಾಣಗಳು ಹಾಗೂ ಪಾವತಿಸಿದ ಸುದ್ದಿ ಕುರಿತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣಾ ಫಲಿತಾಂಶ ಬರುವುದಕ್ಕೂ ಮುನ್ನ ಅಂದರೆ 48 ಗಂಟೆಗಳ ಮುಂಚೆ ಯಾವುದೇ ಮಾಧ್ಯಮಗಳಲ್ಲಿ ಎಕ್ಸಿಟ್‌ ಪೋಲ್‌ ಸಮೀಕ್ಷೆ ಪ್ರಸಾರ ಮಾಡುವಂತಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಾದ ದಿನದಿಂದ ಎಲ್ಲ ಹಂತದ ಮತದಾನ ಪೂರ್ಣಗೊಳ್ಳುವವರೆಗೂ ಮಾಧ್ಯಮಗಳು ಎಕ್ಸಿಟ್ ಪೋಲ್ ಸಮೀಕ್ಷೆಗಳನ್ನು ಪ್ರಸಾರ ಮಾಡುವುದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಒಂದು ವೇಳೆ ಮಾಧ್ಯಮಗಳಲ್ಲಿ ಎಕ್ಸಿಟ್ ಪೋಲ್‌ಗಳ ವರದಿ ಪ್ರಸಾರವಾದರೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.ನಾಮಪತ್ರ ಸಲ್ಲಿಕೆ: ಚುನಾವಣಾ ಕಚೇರಿ ಸುತ್ತ 144 ಸೆಕ್ಷನ್ ಜಾರಿ

ಕನ್ನಡಪ್ರಭ ವಾರ್ತೆ ಬೆಂಗಳೂರು

ಲೋಕಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳ ಕಚೇರಿಗಳ ಸುತ್ತಮುತ್ತ 100 ಮೀಟರ್‌ ವ್ಯಾಪ್ತಿಯಲ್ಲಿ 10 ದಿನ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ನಾಮಪಪತ್ರ ಸಲ್ಲಿಕೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗುರುವಾರದಿಂದ ಏ.8ರ ಸಂಜೆ 6ರವರೆಗೆ ಜಾರಿಯಲ್ಲಿ ಇರುತ್ತದೆ. ನಗರದಲ್ಲಿ ಮೂರು ಲೋಕಸಭಾ ಕ್ಷೇತ್ರಗಳು ಬರಲಿದ್ದು, ನಾಮಪತ್ರ ಸಲ್ಲಿಸುವ ವೇಳೆ ಅಸಂಖ್ಯಾತ ಬೆಂಬಲಿಗರ ಜತೆ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳು ಬರಲಿದ್ದಾರೆ. ಆ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿ ಬಳಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.ಮಕ್ಕಳನ್ನು ಬಳಸುವಂತಿಲ್ಲ

ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಜಾಹೀರಾತಿನಲ್ಲಿ ಧಾರ್ಮಿಕ ಸ್ಥಳಗಳಾದ ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ, ಇತರೆ ಪ್ರಾರ್ಥನಾ ಸ್ಥಳಗಳು ಹಾಗೂ ಶಾಲಾ ಮಕ್ಕಳನ್ನು ಬಳಸುವಂತಿಲ್ಲ.

-ಪ್ರೀತಿ ಗೆಹ್ಲೋಟ್, ಜಿಲ್ಲಾ ಎಂಸಿಎಂಸಿ ನೋಡಲ್ ಅಧಿಕಾರಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!
ರೈತರ ಯೂರಿಯಾ ಕದ್ದು ತಮಿಳ್ನಾಡಿಗೆ ಸಾಗಣೆ ದಂಧೆ ಪತ್ತೆ