ಶಿವಮೊಗ್ಗ : ಅಡಕೆ, ಭತ್ತ ಕೃಷಿ ಉತ್ಪನ್ನಗಳ ಸಾಗಾಣಿಕೆ ನಿರ್ಬಂಧ ಸಲ್ಲ - ಸಚಿವ ಮಧು ಬಂಗಾರಪ್ಪ

KannadaprabhaNewsNetwork |  
Published : Feb 24, 2025, 12:33 AM ISTUpdated : Feb 24, 2025, 02:09 PM IST
ಪೋಟೋ: 23ಎಸ್‌ಎಂಜಿಕೆಪಿ02ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.  | Kannada Prabha

ಸಾರಾಂಶ

ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜತೆಗೆ ಭಾರಿ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ - ಸಚಿವ ಮಧು ಬಂಗಾರಪ್ಪ ಹೇಳಿದರು.

  ಶಿವಮೊಗ್ಗ : ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜತೆಗೆ ಭಾರಿ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಮಲೆನಾಡು ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ನೂತನ ರಸ್ತೆಗಳ ನಿರ್ಮಾಣ ಮತ್ತು ದುರಸ್ತಿಗೆ ಸಂಭಂದಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಿಯಾಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದು ಹೇಳಿದರು.

ಈ ವಿಷಯಕ್ಕೆ ಸಂಭಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಸಚಿವರ ಉಪಸ್ಥಿತಿಯಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯನ್ನು ಶೀಘ್ರದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಕಟ್ಟಡಗಳು, ಶಿಥಿಲಗೊಂಡ ಶಾಲೆಗಳ ವಿವರಗಳನ್ನು ನೀಡುವಂತೆ ಸೂಚಿಸಿದ ಅವರು, ಈಗಾಗಲೇ ಕೈಗೆತ್ತಿಕೊಂಡಿರುವ ರಸ್ತೆ, ಸೇತುವೆ, ಕಾಲುವೆ ಮತ್ತಿತರ ಕಟ್ಟಡಗಳ ಕಾಮಗಾರಿಯನ್ನು ನಿಗದಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಗ್ರಾಮೀಣ ಜನರಿಗೆ ಉತ್ತಮ ಸಂಪರ್ಕ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 400 ಕಾಲುಸಂಕಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆ ಪೈಕಿ ಈಗಾಗಲೇ 150 ಕಾಲುಸಂಕಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಕಿ ಇರುವೆಡೆಗಳಲ್ಲಿ ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಅಲ್ಲದೆ ಜಿಲ್ಲೆಯಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಗ್ರಾಮದ ನಿವಾಸಿಗಳಿಗೆ ಮೊಬೈಲ್ ಸಂಪರ್ಕ ಸೌಲಭ್ಯ ಕಲ್ಪಿಸಿಕೊಡಲು ನಿರ್ಮಿಸಲಾಗುತ್ತಿರುವ ಟವರ್‌ಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಈ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಇಟ್ಟುಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ರಾಜ್ಯ ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಸಿ. ಸಿ. ಎಫ್. ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ