ಕೊಡಗು ಜಿಲ್ಲೆಗೆ 7 ದಿನ ಪ್ರವಾಸಿಗರನ್ನು ನಿಷೇಧಿಸಿ: ಕೊಡಗು ರಕ್ಷಣಾ ವೇದಿಕೆ ಒತ್ತಾಯ

KannadaprabhaNewsNetwork |  
Published : Aug 01, 2024, 12:23 AM IST
ಚಿತ್ರ : 31ಎಂಡಿಕೆ9 : ಕೊಡಗು ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ ಸಂದರ್ಭ. | Kannada Prabha

ಸಾರಾಂಶ

ಕೇರಳ ರಾಜ್ಯದ ವಯನಾಡುವಿನಲ್ಲಿ ನಡೆದ ಜಲಸ್ಫೋಟ ದುರಂತದಲ್ಲಿ ಅಮಾಯಕ ಪ್ರವಾಸಿಗರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಕೊಡಗು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮುಂದಿನ 7 ದಿನಗಳವರೆಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೇರಳ ರಾಜ್ಯದ ವಯನಾಡುವಿನಲ್ಲಿ ನಡೆದ ಜಲಸ್ಫೋಟ ದುರಂತದಲ್ಲಿ ಅಮಾಯಕ ಪ್ರವಾಸಿಗರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಕೊಡಗು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮುಂದಿನ 7 ದಿನಗಳವರೆಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ, ವಯನಾಡುವಿನಲ್ಲಿ ಹೋಂಸ್ಟೇ ಮತ್ತು ರೆಸಾರ್ಟ್ಗಳಿದ್ದ ಗುಡ್ಡ ಕುಸಿದು ನೂರಾರು ಜನರೊಂದಿಗೆ ಅಮಾಯಕ ಪ್ರವಾಸಿಗರು ಕೂಡ ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯಲ್ಲೂ ಇದೇ ರೀತಿಯ ಅನಾಹುತ ಸಂಭವಿಸದಂತೆ ತಡೆಯಲು ಮಳೆಯ ತೀವ್ರತೆ ಕಡಿಮೆಯಾಗುವವರೆಗೆ ಪ್ರವಾಸಿಗರನ್ನು ನಿಷೇಧಿಸಬೇಕೆಂದು ಮನವಿ ಮಾಡಿದರು.

ಪ್ರಸಿದ್ಧ ಪ್ರವಾಸಿತಾಣ ವಯನಾಡುವಿನಲ್ಲಿ ಧಾರಾಕಾರ ಮಳೆಯಿಂದ ಭೀಕರ ಭೂಕುಸಿತವಾಗಿ ಸ್ಥಳೀಯರೊಂದಿಗೆ ಪ್ರವಾಸಿಗರು ಕೂಡ ಮೃತಪಟ್ಟಿದ್ದಾರೆ ಮತ್ತು ಕಣ್ಮರೆಯಾಗಿದ್ದಾರೆ. ಇದು ಕೇರಳದ ಪಕ್ಕದಲ್ಲೇ ಇರುವ ಕೊಡಗು ಜಿಲ್ಲೆಗೆ ಎಚ್ಚರಿಕೆಯ ಗಂಟೆಯಾಗಿದೆ. ದೇಶದ ಹೆಸರುವಾಸಿ ಪ್ರವಾಸಿತಾಣಗಳ ಪಟ್ಟಿಯಲ್ಲಿರುವ ಕೊಡಗಿನ ಬೆಟ್ಟಗುಡ್ಡಗಳ ಬಹುತೇಕ ಸ್ಥಳಗಳಲ್ಲಿ ರೆಸಾರ್ಟ್ ಮತ್ತು ಹೋಂಸ್ಟೇಗಳು ನಿರ್ಮಾಣಗೊಂಡಿವೆ. 2018ರಲ್ಲಿ ಕೊಡಗು ಕೂಡ ಭೂಕುಸಿತಕ್ಕೆ ಒಳಗಾಗಿದ್ದು, ಬಹಳಷ್ಟು ಅಮೂಲ್ಯ ಪ್ರಾಣಗಳು ಅಗಲಿವೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 7 ದಿನಗಳವರೆಗೆ ಕೊಡಗು ಜಿಲ್ಲೆಗೆ ಪ್ರವಾಸಿಗರ ಆಗಮನವನ್ನು ನಿಷೇಧಿಸಬೇಕು ಎಂದು ಪವನ್ ಪೆಮ್ಮಯ್ಯ ಮನವಿ ಮಾಡಿದರು.

ಮಹಾಮಳೆಯಿಂದ ಮುಂಬರುವ ದಿನಗಳಲ್ಲಿ ಅನಾಹುತಗಳು ಸಂಭವಿಸಿದರೆ ಜಿಲ್ಲಾಡಳಿತಕ್ಕೆ ಕೊಡಗು ರಕ್ಷಣಾ ವೇದಿಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭ ಕೊರವೇ ನಿರ್ದೇಶಕ ಎಂ.ವೈ.ಸುಲೈಮಾನ್ ಹಾಗೂ ವರ್ಗೀಸ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!