ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಇಂದು ವಿಶ್ವವಿಖ್ಯಾತ: ಡಿಸಿ ಡಾ. ಕೆ.ವಿದ್ಯಾಕುಮಾರಿ

KannadaprabhaNewsNetwork | Published : Jun 28, 2024 12:46 AM

ಸಾರಾಂಶ

ಉಡುಪಿ ಬಾಲಕಿಯರ ಸರ್ಕಾರಿ ಪಪೂ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಜಿಲ್ಲಾಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಉದ್ಘಾಟಿಸಿರು.

ಕನ್ನಡಪ್ರಭ ವಾರ್ತೆ ಉಡುಪಿ

ನಾಡಪ್ರಭು ಕೆಂಪೇಗೌಡ ಅವರು ದೂರದೃಷ್ಠಿ ಇಟ್ಟುಕೊಂಡು ನಿರ್ಮಿಸಿದ ಬೆಂಗಳೂರು ನಗರ ಕೋಟ್ಯಾಂತರ ಜನರ ಬದುಕು ಕಟ್ಟಿಕೊಳ್ಳಲು ಆಶ್ರಯ ಆಗುವುದರ ಜೊತೆಗೆ ವಿಶ್ವವಿಖ್ಯಾತಿ ನಗರವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು.

ಅವರು ಗುರುವಾರ ನಗರದ ಬಾಲಕಿಯರ ಸರ್ಕಾರಿ ಪಪೂ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಜಿಲ್ಲಾಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

15-16ನೇ ಶತಮಾನದ ಅವಧಿಯಲ್ಲಿ ನಾಡಪ್ರಭು ಕೆಂಪೇಗೌಡರು ಸ್ವತಂತ್ರವಾಗಿ ಯೋಚಿಸುವಂತಹ ವ್ಯಕ್ತಿತ್ವ ಹೊಂದಿದ್ದರು. ಅವರು ನಗರ ನಿರ್ಮಾಣ ಮಾಡುವಾಗಲೇ ಸಮಾಜದಲ್ಲಿನ ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ವೃತ್ತಿ ಆಧಾರಿತವಾಗಿ ಅಭಿವೃದ್ಧಿಗೆ ಅನೇಕ ಪೇಟೆಗಳನ್ನು ನಿರ್ಮಿಸಿದರು. ಈಗಾಲೂ ಸಹ ಬೆಂಗಳೂರಿನಲ್ಲಿ ಚಿಕ್ಕಪೇಟೆ, ಕಾಟನ್ ಪೇಟೆ, ಕುಂಬಾರ ಪೇಟೆ, ಅಕ್ಕಿಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳು ಇರುವುದನ್ನು ಕಾಣಬಹುದಾಗಿದೆ ಎಂದರು.

ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಕಾಶ್ ಶೆಟ್ಟಿ ಕೆಂಪೇಗೌಡರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಎಸ್ಪಿ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಎಡಿಸಿ ಮಮತಾ ದೇವಿ ಜಿ.ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ಗೌಡ ಎ, ಬಾಲಕಿಯರ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ದಯಾನಂದ ನಿರೂಪಿಸಿ, ಕಾಲೇಜಿನ ಪ್ರಾಂಶುಪಾಲೆ ಸುಮಾ ಎಸ್ ವಂದಿಸಿದರು.

Share this article