ಚನ್ನಪಟ್ಟಣ: ಬೆಂಗಳೂರಿನಿಂದ ೧೦೦ ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ ರೈಲ್ವೆ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜತೆಗೆ ರಾಜಧಾನಿಯಿಂದ ಕರಾವಳಿ ಭಾಗದ ಮಂಗಳೂರಿಗೆ ಕೂಡ ಇದೇ ರೀತಿ ಚತುಷ್ಪಥ ಮಾರ್ಗ ಅಭಿವೃದ್ಧಿಯನ್ನೂ ಪರಿಗಣಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಎಂ.ಬಿ.ಪಾಟೀಲರ ಕೋರಿಕೆಯಂತೆ ಬೆಂಗಳೂರು-ಕೋಲಾರ ನಡುವೆ ನೇರ ರೈಲು ಸಂಪರ್ಕ ಕಲ್ಪಿಸಲಾಗುವುದು. ಸದ್ಯಕ್ಕೆ ವೈಟ್ ಫೀಲ್ಡ್ ತನಕ ಇರುವ ನಾಲ್ಕು ಪಥದ ಮಾರ್ಗವನ್ನು ಮುಂದಕ್ಕೂ ಕೊಂಡೊಯ್ಯಲಾಗುವುದು. ಇದಕ್ಕೆ ಬೇಕಾದ ಭೂಸ್ವಾಧೀನವನ್ನು ಕೇಂದ್ರ ಸರ್ಕಾರವೇ ನಡೆಸುತ್ತದೆ ಎಂದು ತಿಳಿಸಿದರು.
ಬೆಂ-ಮಂ ಚತುಷ್ಪಥ ಮಾರ್ಗ: ರಾಜಧಾನಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ತ್ವರಿತ ರೈಲು ಸಂಚಾರ ವ್ಯವಸ್ಥೆ ಆಗಬೇಕಿದೆ. ಇದಕ್ಕಾಗಿ ಸಕಲೇಶಪುರ-ಗುಂಡ್ಯ ನಡುವೆ ಸಮಾನಾಂತರವಾಗಿ ರಸ್ತೆ ಮತ್ತು ರೈಲು ಮಾರ್ಗ ಆಗಬೇಕಿದೆ. ಈ ಎರಡೂ ನಗರಗಳ ನಡುವೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿ ಅಗತ್ಯ ಇದೆ. ಬಂದರು ನಗರ ಮಂಗಳೂರಿಗೆ ಸಂಪರ್ಕ ಮಾಡುವುದರಿಂದ ಅನೇಕ ಪ್ರಯೋಜನಗಳು ಆಗಲಿವೆ. ಇದು ಕೂಡ ನಮ್ಮ ಆದ್ಯತೆ. ತುಮಕೂರು- ಚಿತ್ರದುರ್ಗ- ದಾವಣಗೆರೆ ಮಾರ್ಗದಲ್ಲಿ ಭರದಿಂದ ಕಾಮಗಾರಿ ನಡೆಯುತ್ತಿದೆ. ಈಗ ಏಕಪಥವಾಗಿರುವ ಈ ಮಾರ್ಗವನ್ನು ಜೋಡಿಹಳಿ ಮಾಡಬೇಕು ಬೇಡಿಕೆ ಇದ್ದು, ಇದನ್ನು ಕೂಡ ಪರಿಗಣಿಸಲಾಗುವುದು ಎಂದು ಹೇಳಿದರು.ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ರೈಲು:
ಎಲ್.ಸಿ. ಗೇಟ್ ಇರೋದಿಲ್ಲ:
ರಾಜ್ಯದಲ್ಲೇ ವಂದೇ ಭಾರತ್ ರೈಲು ಹೆಚ್ಚು:
ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ.ಪಾಟೀಲ್, ಸಂಸದ ಡಾ.ಸಿ.ಎನ್.ಮಂಜುನಾಥ, ಶಾಸಕ ಯೋಗೀಶ್ವರ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಎ.ಕೆ.ಗುಪ್ತ, ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಪ್ರವೀಣ್ ಕಾತರಕಿ, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಚಂದ್ರಶೇಖರ ಸೇರಿದಂತೆ ಇತರರಿದ್ದರು.
ಸಚಿವರಿಬ್ಬರು ವಿಶೇಷ ರೈಲಿನಲ್ಲಿ ಪ್ರಯಾಣ:
ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪ್ರಗತಿಯಲ್ಲಿರುವ ಹಾಗೂ ಪ್ರಸ್ತಾವಿತ ರೈಲ್ವೆ ಯೋಜನೆಗಳ ಕುರಿತು ಇಬ್ಬರು ಸಚಿವರು ಚರ್ಚೆ ನಡೆಸಿದರು.
ಯೋಗೇಶ್ವರ್ ಮನಸ್ಸು ನಮ್ಮ ಕಡೆ ಇದೆ: ಸೋಮಣ್ಣ
ಚನ್ನಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅನಿವಾರ್ಯವಾಗಿ ಕಾಂಗ್ರೆಸ್ ಸೇರಿ ಶಾಸಕರಾಗಿದ್ದಾರೆ. ಆದರೆ ಅವರ ಮನಸ್ಸೆಲ್ಲ ನಮ್ಮ ಕಡೆ ಇದೆ ಎಂದು ಸಚಿವ ಸೋವಣ್ಣ ತಿಳಿಸಿದರು.ತಾಲೂಕಿನ ಎಲೇಕೇರಿ ಎಲೆಕೇರಿ ಬಳಿ ನೂತನವಾಗಿ ನಿರ್ಮಿಸಿರುವ ರಸ್ತೆ ಮೇಲ್ಸೇತುವೆ ಉದ್ಘಾಟಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಕಷ್ಟಕಾಲದಲ್ಲಿ ಯಾರದ್ದಾದರೂ ಮನೆಗೆ ಹೋಗುವ ಕೆಲ ಮಂದಿಯಲ್ಲಿ ಮೊದಲಿಗರು ಸಿ.ಪಿ.ಯೋಗೇಶ್ವರ್. ಎರಡು ಕಡೆನೂ ನಾನು ಸೋತಾಗ ನಮ್ಮ ಮನೆಗೆ ಮೊದಲು ಬಂದದ್ದೇ ಯೋಗೇಶ್ವರ್. ನಾನು ಮತ್ತು ಡಾ.ಮಂಜುನಾಥ್ ಸಾಕಷ್ಟು ಪ್ರಯತ್ನ ಪಟ್ಟೆವು. ಆದರೆ, ಏನೇನೋ ಯಡವಟ್ಟು ಆಯಿತು. ಆನಂತರ ಅವರು ಅನಿವಾರ್ಯ ಕಾರಣಗಳಿಂದ ಕಾಂಗ್ರೆಸ್ ಸೇರಿ ಶಾಸಕರಾಗಿದ್ದಾರೆ. ಆದರೆ ಮನಸ್ಸೆಲ್ಲ ನಮ್ಮ ಕಡೆಯೇ ಇದೆ. ಅವರು ಎರಡು ಯೋಜನೆಗಳ ಕುರಿತು ಮನವಿ ನೀಡಿದ್ದಾರೆ ಈ ಬಗ್ಗೆ ಶೀಘ್ರವೇ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
ಬಾಕ್ಸ್.........................ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಿ: ಸೋಮಣ್ಣ
ಚನ್ನಪಟ್ಟಣ: ಯಾವುದೋ ಒಂದು ಉಪನಗರಕ್ಕಾಗಿ ಅನ್ನದಾತ ರೈತರಿಗೆ ನೋವು ಕೊಡುವುದು ಬೇಡ. ರೈತರ ಕೃಷಿ ಭೂಮಿಯನ್ನು ಕಿತ್ತುಕೊಳ್ಳುವ ಬದಲು, ಈ ಟೌನ್‌ಶಿಪ್ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರೈತರಿಗೆ ಅನಾನುಕೂಲ ಮಾಡಿ ಯೋಜನೆ ಜಾರಿಗೊಳಿಸುವುದು ಬೇಡ. ಬಿಡದಿ ಟೌನ್‌ಶಿಪ್ ವಿಚಾರವಾಗಿ ಈಗಾಗಲೇ ನಾನು ಸಾಕಷ್ಟು ಮಾತನಾಡಿದ್ದೇನೆ. ಭಾನುವಾರವಷ್ಟೇ ಸಿಎಂ ಸಹೋದರ ಡಿ.ಕೆ.ಸುರೇಶ್ ಜೊತೆಯೂ ಫೋನ್‌ನಲ್ಲಿ ಚರ್ಚಿಸಿದ್ದೇನೆ. ಡಿ.ಕೆ.ಶಿವಕುಮಾರ್ ಸಿಎಂ ಆಗಿ ಒಂದು ತಿಂಗಳಾಗಿದೆ. ನೀವು ಸಿಎಂ ಆಗಿ ಯಾವುದೇ ಹೊಸ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳಬೇಡಿ. ಅದರ ಬದಲು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡಿ ಎಂದು ಸೋಮಣ್ಣ ಸಲಹೆ ನೀಡಿದರು.
ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರೈತರು ಬೇಡ ಎಂದ ತಕ್ಷಣವೇ ಈ ಯೋಜನೆಯನ್ನು ಕೈಬಿಟ್ಟಿದ್ದರು. ಇವತ್ತು ನೀವ್ಯಾಕೆ ಈ ಯೋಜನೆಗಾಗಿ ಹಠ ಮಾಡುತ್ತಿದ್ದೀರಿ, ಯಾವುದೋ ಒಂದು ಉಪನಗರಕ್ಕಾಗಿ ಅನ್ನದಾತ ರೈತರಿಗೆ ನೋವು ಕೊಡುವುದು ಬೇಡ. ನಮ್ಮ ಜಿಲ್ಲೆಯವರೇ ಇಂದು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ ಎಂಬ ಹೆಮ್ಮೆಯಿದೆ. ಅವರು ಮೊದಲು ಬಿಡದಿ ಭಾಗದ ಬೈರಮಂಗಲ ಕೆರೆ ಶುದ್ಧೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಿ. ಹಠಮಾರಿ ಧೋರಣೆಯನ್ನು ಬಿಟ್ಟು, ವಿವಾದಿತ ಯೋಜನೆಯನ್ನು ಕೈಬಿಡಿ. ಇಡೀ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯತ್ತ ಗಮನ ಹರಿಸಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮನವಿ ಮಾಡಿದರು.ಪೊಟೋ೨೯ಸಿಪಿಟಿ೧:
ಚನ್ನಪಟ್ಟಣದ ಎಲೇಕೇರಿ ಮೇಲ್ಸೇತುವೆ ಉದ್ಘಾಟನಾ ಸಮಾರಂಭವನ್ನು ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವ ಎಂ.ಬಿ.ಪಾಟೀಲ್ ಉದ್ಘಾಟಿಸಿದರು. ಸಂಸದ ಡಾ.ಮಂಜುನಾಥ್, ಶಾಸಕ ಯೋಗೇಶ್ವರ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಎ.ಕೆ.ಗುಪ್ತ ಮತ್ತಿತರರು ಉಪಸ್ಥಿತರಿದ್ದರು.