ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಿರ್ಮಾಣ: ಯಶ್ಪಾಲ್‌ ಸುವರ್ಣ

KannadaprabhaNewsNetwork |  
Published : Jun 28, 2025, 12:24 AM IST
27ಕೆಂಪೇಗೌಡ | Kannada Prabha

ಸಾರಾಂಶ

ಶುಕ್ರವಾರ ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿನಾಡಪ್ರಭು ಕೆಂಪೇಗೌಡರು ಭವಿಷ್ಯದ ದೂರದೃಷ್ಟಿಯಿಂದ ನಿರ್ಮಿಸಿದ ಬೆಂಗಳೂರು ನಗರವು ಇಂದು ಇಡೀ ವಿಶ್ವದ ಜನರನ್ನು ತನ್ನತ್ತ ಸೆಳೆಯುವಂತೆ ಮಾಡುವುದರೊಂದಿಗೆ ಕೋಟ್ಯಾಂತರ ಜನರಿಗೆ ಉದ್ಯೋಗ, ಆಶ್ರಯ, ಬದುಕು ಕಟ್ಟಿಕೊಳ್ಳುವ ಅವಕಾಶ ನೀಡಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದ್ದಾರೆ.

ಶುಕ್ರವಾರ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರು ಎಲ್ಲರ ಮನದಲ್ಲೂ ಚಿರಸ್ಥಾಯಿಯಾಗಿ ಉಳಿದಿದ್ದಾರೆ ಎಂದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಉಪನ್ಯಾಸ ನೀಡಿ, ರಾಜನಾದವನು ಸಮಾಜದ ಚಿಂತನೆ ಮಾಡುವುದರೊಂದಿಗೆ ದೂರದೃಷ್ಟಿಯಿಂದ ಆಡಳಿತ, ಪ್ರಗತಿಪರ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು ಎಂಬುದಕ್ಕೆ ಸ್ಪಷ್ಟ ನಿದರ್ಶನ ನಾಡಪ್ರಭು ಕೆಂಪೇಗೌಡರು ಎಂದರು.ಒಕ್ಕಲಿಗ ಸೇವಾ ಸಂಘದ ಕಾರ್ಯದರ್ಶಿ ಹೇಮಾನಂದ ಹಲ್ದಡ್ಕ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿದ್ದರು. ಕೆಂಪೇಗೌಡ ಜಯಂತಿ ಅಂಗವಾಗಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಉಪತಹಸೀಲ್ದಾರ್ ಐರೀನ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಒಕ್ಕಲಿಗ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಸೀತಾರಾಮ ಗೌಡ ಎ., ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಮತ್ತಿತರು ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ದಯಾನಂದ ಡಿ ಕಿದಿಯೂರು ನಿರೂಪಿಸಿದರು. ಉಪನ್ಯಾಸಕ ಗಂಗಾಧರ್ ವಂದಿಸಿದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!