೬ ರಂದು ಬೆಂಗಳೂರು ಚಲೋ ಚಳವಳಿ

KannadaprabhaNewsNetwork |  
Published : Feb 02, 2024, 01:00 AM IST
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ | Kannada Prabha

ಸಾರಾಂಶ

ರಾಜ್ಯ ಸರ್ಕಾರ ಫೆ.೧೬ ರಂದು ಮಂಡಿಸುವ ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ಕಬ್ಬು ಬೆಳೆಗಾರ ಸಂಘ ಸೇರಿದಂತೆ ರಾಜ್ಯ ರೈತ ಒಕ್ಕೂಟಗಳು ಫೆ. ೬ ರಂದು ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿದ್ದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಕುರುಬೂರ್‌ ಶಾಂತಕುಮಾರ್‌ ಕರೆ । ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಚಳವಳಿ

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ರಾಜ್ಯ ಸರ್ಕಾರ ಫೆ.೧೬ ರಂದು ಮಂಡಿಸುವ ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ಕಬ್ಬು ಬೆಳೆಗಾರ ಸಂಘ ಸೇರಿದಂತೆ ರಾಜ್ಯ ರೈತ ಒಕ್ಕೂಟಗಳು ಫೆ. ೬ ರಂದು ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿದ್ದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. ತೆಲಂಗಾಣ ರಾಜ್ಯದಲಿ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿರುವ ರೀತಿ ರಾಜ್ಯದಲ್ಲಿಯೂ ಸಾಲ ಮನ್ನಾ ಆಗಬೇಕು. ಕಬ್ಬಿನ ಎಫ್ಆರ್‌ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಈಗಾಗಲೇ ಕಬ್ಬು ಕಟಾವು ಸಾಗಾಣಿಕೆ ದರ ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೊಡಿಸಬೇಕು. ೨೦೨೨-೨೩ರ ಸಾಲಿನಲ್ಲಿ ಟನ್‌ ಕಬ್ಬಿಗೆ ೧೫೦ ಹೆಚ್ಚುವರಿ ನೀಡಬೇಕಾದ ದರವನ್ನು ಕೂಡಲೇ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸರ್ಕಾರವೇ ರೈತರಿಗೆ ಪಾವತಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಒತ್ತಾಯಿಸಲು ಫೆ.೬ ರಂದು ಬೆಂಗಳೂರು ಚಲೋ ನಡೆಸಲಾಗುವುದು ಎಂದರು.ತೆಲಂಗಾಣದಲ್ಲಿ ಪ್ರತಿಯೊಬ್ಬರಿಗೂ ರಾಜ್ಯ ಸರ್ಕಾರವೇ ವಿಮಾ ಕಂತು ಪಾವತಿಸಿ ೫ ಲಕ್ಷ ಜೀವ ವಿಮೆ ಪಾಲಿಸಿ ನೀಡುತ್ತಿದೆ. ಆಕಸ್ಮಿಕ, ಅಪಘಾತ ಸಾವು. ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ ಐದು ಲಕ್ಷ ರು. ಪರಿಹಾರ ಸಿಗುತ್ತದೆ ಇದೇ ರೀತಿ ರಾಜ್ಯದಲ್ಲಿ ಜಾರಿಗೆ ತರಬೇಕು ರೈತರ ಎಲ್ಲಾ ಕೃಷಿ ಉತ್ಪನ್ನಗಳನ್ನ ಕನಿ? ಬೆಂಬಲ ಬೆಲೆ ಯೋಜನೆ ಅಡಿ ಪಂಜಾಬ್, ಹರಿಯಾಣ, ತೆಲಂಗಾಣ, ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಎಂಎಸ್‌ಪಿ ಖರೀದಿ ಕೇಂದ್ರ ತೆರೆದು. ರೈತರಿಂದ ಖರೀದಿಸುವ ಮಿತಿಯನ್ನ ರದ್ದುಗೊಳಿಸಿ .ಮೇಲಿನ ರಾಜ್ಯಗಳಲಿ ಇರುವಂತೆ ಜಾರಿ ಮಾಡಬೇಕು. ಬರಗಾಲ ಪೀಡಿತ ಪ್ರದೇಶದ ರೈತರಿಗೆ. ತಮಿಳುನಾಡಿಗೆ ನೀರು ಹರಿಸಿ ಕಾವೇರಿ ಅಚ್ಚುಕಟ್ಟು ರೈತರಿಗೆ ವಂಚನೆ ಮಾಡಿರುವ ಸರ್ಕಾರ ರೈತರಿಗೆ ಕೂಡಲೇ ಎಕರೆಗೆ ೨೫.೦೦೦ ಪರಿಹಾರ ನೀಡಬೇಕು. ರೈತರು ಬೆಳೆದ ಎಲ್ಲಾ ಪೌಷ್ಠಿಕ ಸಿರಿಧಾನ್ಯಗಳನ್ನು ಉತ್ಪಾದನಾ ವೆಚ್ಚಕ್ಕೆ ಬೆಂಬಲ ಬೆಲೆ ಹೆಚ್ಚುವರಿ ಬೆಲೆ ನಿಗದಿ ಮಾಡಿ ಸರ್ಕಾರವೇ ಕಡ್ಡಾಯವಾಗಿ ಖರೀದಿಸುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಒತ್ತಾಯಿಸಲಾಗುವುದು ಎಂದರು.

ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಖರೀದಿಸಿ, ಸರ್ಕಾರದ ಅಂಗಸಂಸ್ಥೆಗಳಾದ ಆಸ್ಪತ್ರೆ, ವಿದ್ಯಾರ್ಥಿ ನಿಲಯ. ಜೈಲುಗಳಿಗೆ. ಪೂರೈಸುವ ವ್ಯವಸ್ಥೆ ಮಾಡಬೇಕು. ರೈತರ ಎಲ್ಲಾ ಬೆಳೆಗಳಿಗೆ ಬೆಳೆ ವಿಮೆ ಜಾರಿಯಾಗಬೇಕು, ಬೆಳೆವಿಮೆ ಪದ್ಧತಿಯಲ್ಲಿ ಕೆಲವು ನೀತಿಗಳು ಬದಲಾಗಬೇಕು ಅತಿವೃಷ್ಟಿ ಪ್ರಕೃತಿ ವಿಕೋಪ ಬೆಳೆನಷ್ಟಕ್ಕೆ ಪರಿಹಾರ ವೈಜ್ಞಾನಿಕವಾಗಿ ಸಂಪೂರ್ಣ ಸಿಗುವಂತಾಗಬೇಕು , ಕೃಷಿ ಸಾಲ ನೀತಿ ಬದಲಾಗಬೇಕು. ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು. ಎಲಾ ರೈತರಿಗೂ ಕೇವಲ ಪಹಣಿ ಪತ್ರ ಆದರಿಸಿ ಕನಿಷ್ಠ ೫ ಲಕ್ಷ ಆಧಾರರಹಿತ ಬಡ್ಡಿ ಸಾಲ ಕೂಡಿಸುವ ಯೋಜನೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಜಾರಿಯಾಗಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಗ್ರೀನ್ ಬಡ್ಸ್ ಆಸ್ತಿ ಹರಾಜಿನಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆದು ನ್ಯಾಯಯುತವಾಗಿ ಹರಾಜು ನಡೆಸಿ ಹೂಡಿಕೆದಾರರು ಹಾಗೂ ಏಜೆಂಟರಿಗೆ ಬರಬೇಕಾದ ಹಣವನ್ನು ಕೊಡಿಸಬೇಕು ಎಂದು ಒತ್ತಾಯಿಸಿದರು.. ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ಕಿನಕಹಳ್ಳಿ ಬಸವಣ್ಣ, ಮೆಳ್ಳಹಳ್ಳಿ ಚಂದ್ರಶೇಖರಮೂರ್ತಿ, ನೀಲಕಂಠಪ್ಪ, ಪಟೇಲ್ ಶಿವಮೂರ್ತಿ, ಲಿಂಗರಾಜು, ಬಡಗಲಪುರ ನಾಗರಾಜು, ಪ್ರದೀಪ್, ಕೆಂಪರಾಜು, ಗುರು, ಉಡಿಗಾಲ ರಾಜು, ರೇವಣ್ಣ ಮುಂತಾದವರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ