ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದ ಬಂಗಾರಪ್ಪ: ಮಧು

KannadaprabhaNewsNetwork |  
Published : Mar 29, 2024, 12:56 AM IST
ಪೊಟೋ: 28ಎಸ್‌ಎಂಜಿಕೆಪಿ05ಶಿವಮೊಗ್ಗದ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಮಾತನಾಡಿದರು. | Kannada Prabha

ಸಾರಾಂಶ

ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್.ಬಂಗಾರಪ್ಪ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿ ಅನೇಕ ಯೋಜನೆಗಳ ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅಪಾರ ಕೊಡುಗೆ ನೀಡಿದ್ದಾರೆ. ಅದೇ, ಧೈರ್ಯದಿಂದ ಗೀತಾಕ್ಕನನ್ನು ಬೆಂಬಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು.

ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್.ಬಂಗಾರಪ್ಪ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿ ಅನೇಕ ಯೋಜನೆಗಳ ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು ಎಂದರು.

ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಾತನಾಡಿ, ರೈತರಿಗೆ ಬೆಂಬಲ ಬೆಲೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯಮಟ್ಟದಲ್ಲಿ ಸಚಿವ ಮಧು ಬಂಗಾರಪ್ಪ ರೈತರ ಕಷ್ಟಗಳಿಗೆ ನೆರವಾದರೆ, ಕೇಂದ್ರದ ಹಂತದಲ್ಲಿ ರೈತರ ಕಷ್ಟಗಳಿಗೆ ಸ್ಪಂದಿಸಲು ನಾನು ಶ್ರಮಿಸುತ್ತೇನೆ. ಅದೇ ಕಾರಣಕ್ಕೆ ನನಗೆ ಮತ ನೀಡಿ ಎಂದು ಕೋರಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿ, ಏತ ನೀರಾವರಿ ಯೋಜನೆಗೆ ಬೀಜ ಬಿತ್ತಿದವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಎನ್ನುವುದು ಹೆಮ್ಮೆಯ ಸಂಗತಿ. ಜಿಲ್ಲೆಯಲ್ಲಿ ಮುಳುಗಡೆ ಸಂತ್ರಸ್ತರ ಸಮಸ್ಯೆ ನುಂಗಲಾರದ ತುತ್ತಾಗಿದೆ. ಇದಕ್ಕೆ ಪರಿಹಾರ ಕಂಡು ಕೊಳ್ಳಲು ಗೀತಾ ಶಾಶ್ವತ ಪರಿಹಾರ ಸೂಚಿಸುವರು ಎಂದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ, ಎಸ್.ರವಿಕುಮಾರ್, ಜಿ.ಡಿ.ಮಂಜುನಾಥ್, ಎನ್.ರಮೇಶ್, ಜಿ.ಪಲ್ಲವಿ, ಕಲಗೋಡು ರತ್ನಾಕರ್, ಎಂ.ಶ್ರೀಕಾಂತ್, ವೈ.ಎಚ್.ನಾಗರಾಜ್, ಚಂದ್ರಭೂಪಾಲ್, ರವಿಕುಮಾರ್, ಮಲೆಶಂಕರ ರಮೇಶ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ