ಕನ್ನಡಪ್ರಭ ವಾರ್ತೆ ಬೀದರ್
ಬೀದರ್ ನಗರದ ಎಸ್‌ಬಿಐ ಬ್ಯಾಂಕ್ ಬಳಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕ್ ನೌಕರರಿಗೆ 5 ದಿನಗಳ ಕಾಲ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಮಾಡಬೇಕು ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಐದು ದಿನಗಳ ಕಾಲ ಕಾರ್ಯ ನಿರ್ವಹಿಸುತ್ತದೆ. ಆದರೆ ಬ್ಯಾಂಕ್ ಮಾತ್ರ 6 ದಿನಗಳ ಕಾಲ ಕಾರ್ಯನಿರ್ವಹಿಸುತ್ತಿವೆ ಇದರಿಂದಾಗಿ ಬ್ಯಾಂಕ್ ನೌಕರರು ತುಂಬಾ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದೇವೆ. ಒಂದು ವರ್ಷದ ಹಿಂದೆಯೇ ಸರ್ಕಾರದ ಮುಂದೆ ಈ ಬೇಡಿಕೆ ಇಟ್ಟಿದ್ದೇವೆ. ಆದರೆ ಸರ್ಕಾರ ನಮ್ಮ ಬೇಡಿಕೆಯನ್ನು ನಿರ್ಲಕ್ಷ್ಯ ಮಾಡ್ತಿದೆ ಕೂಡಲೇ ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಇಡೇರಿಸಬೇಕೆಂದು ಸಂಘದ ಜಿಲ್ಲಾಧ್ಯಕ್ಷ ರಮೇಶ ಸಿಂಧೆ ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಹಿರಿಯರಾದ ಕಾ.ಶಿವಾಜಿರಾವ್ ಮಾನೆ, ಕಾ.ಸಂತೋಷ ಕೋರೆ, ಮಿಲಿಂದ ಚಲುವಾ, ಆಕಾಶ ಸಾಗರ, ಸಿದ್ರಾಮ ಸೀತಾ ಸೇರಿದಂತೆ ನೂರಾರು ಬ್ಯಾಂಕ್ ನೌಕರರು ಭಾಗಿಯಾಗಿದ್ದರು.