ಆ.3ರಂದು ‘ಬನ್ನಂಜೆ 90 ಉಡುಪಿ ನಮನ’

KannadaprabhaNewsNetwork |  
Published : Jul 31, 2025, 12:53 AM IST
30ಬನ್ನಂಜೆ | Kannada Prabha

ಸಾರಾಂಶ

ಬನ್ನಂಜೆ ಗೋವಿಂದ ಆಚಾರ್ಯ ಪ್ರತಿಷ್ಠಾನ ಬೆಂಗಳೂರು ಅಡಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ ಹಾಗೂ ಎಂಜಿಎಂ ಕಾಲೇಜುಗಳ ಸಾಂಗತ್ಯದಲ್ಲಿ ನಡೆಯುವ ಒಂದು ದಿನದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ 8 ಗಂಟೆಗೆ ಬನ್ನಂಜೆ ಅವರ ಮೂಡುಬೆಟ್ಟಿನ ಮೂಲಮನೆಯ ಬ್ರಹ್ಮಸ್ಥಾನ ಮತ್ತು ನಾಗ ಸ್ಥಾನದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 8.30ಕ್ಕೆ ಬನ್ನಂಜೆಯವರು ಕಲಿತ ಆದಿಉಡುಪಿ ಶಾಲೆಯಿಂದ ಬನ್ನಂಜೆಯವರ ಭಾವಚಿತ್ರದೊಂದಿಗೆ ಮೆರವಣಿಗೆ ಎಂಜಿಎಂ ಕಾಲೇಜಿನ ವರೆಗೆ ನಡೆಯಲಿದೆ. ಮೆರವಣಿಗೆಗೆ ನಾಡೋಜ ಪ್ರೊ ಕೆ.ಪಿ.ರಾವ್ ಚಾಲನೆ ನೀಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿಪ್ರಖ್ಯಾತ ವಿದ್ವಾಂಸ, ವಿದ್ಯಾವಾಚಸ್ಪತಿ, ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ನೆನಪಿನ ‘ಬನ್ನಂಜೆ 90 ಉಡುಪಿ ನಮನ’ ಕಾರ್ಯಕ್ರಮವು ಆಗಸ್ಟ್ 3ರಂದು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಮಿತಿ ಪ್ರಧಾನ ಸಂಚಾಲಕ ರವಿರಾಜ್ ಎಚ್.ಪಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಬನ್ನಂಜೆ ಗೋವಿಂದ ಆಚಾರ್ಯ ಪ್ರತಿಷ್ಠಾನ ಬೆಂಗಳೂರು ಅಡಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ ಹಾಗೂ ಎಂಜಿಎಂ ಕಾಲೇಜುಗಳ ಸಾಂಗತ್ಯದಲ್ಲಿ ನಡೆಯುವ ಒಂದು ದಿನದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ 8 ಗಂಟೆಗೆ ಬನ್ನಂಜೆ ಅವರ ಮೂಡುಬೆಟ್ಟಿನ ಮೂಲಮನೆಯ ಬ್ರಹ್ಮಸ್ಥಾನ ಮತ್ತು ನಾಗ ಸ್ಥಾನದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 8.30ಕ್ಕೆ ಬನ್ನಂಜೆಯವರು ಕಲಿತ ಆದಿಉಡುಪಿ ಶಾಲೆಯಿಂದ ಬನ್ನಂಜೆಯವರ ಭಾವಚಿತ್ರದೊಂದಿಗೆ ಮೆರವಣಿಗೆ ಎಂಜಿಎಂ ಕಾಲೇಜಿನ ವರೆಗೆ ನಡೆಯಲಿದೆ. ಮೆರವಣಿಗೆಗೆ ನಾಡೋಜ ಪ್ರೊ ಕೆ.ಪಿ.ರಾವ್ ಚಾಲನೆ ನೀಡಲಿದ್ದಾರೆ.ಬೆಳಗ್ಗೆ 9.20ಕ್ಕೆ ಬನ್ನಂಜೆಯವರ ಕೃತಿ ಆಧಾರಿತ ಯಕ್ಷಗಾನ ಪ್ರಸ್ತುತಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮವನ್ನು ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವೇದವ್ಯಾಸಾಚಾರ್ಯ ಶ್ರೀಶಾನಂದರು ಉದ್ಘಾಟಿಸುವರು. ಛಾಯಾಚಿತ್ರ ಹಾಗೂ ಬನ್ನಂಜೆಯವರು ಬಳಸುತ್ತಿದ್ದ ವಸ್ತು ಪ್ರದರ್ಶನವನ್ನು ತರಂಗದ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಪೈ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ವೈದೇಹಿ ವಹಿಸಿಕೊಳ್ಳಲಿದ್ದಾರೆ.ಸಭಾ ಕಾರ್ಯಕ್ರಮದಲ್ಲಿ ಬನ್ನಂಜೆಯವರ ಕವಿತೆಗಳ ಗಾಯನವನ್ನು ಕವಿತಾ ಉಡುಪ ಹಾಗೂ ಸುಮಾ ಶಾಸ್ತ್ರಿ ನಡೆಸಿಕೊಡಲಿದ್ದಾರೆ. ನಂತರ ಬೆಳಗ್ಗೆ ಹಾಗೂ ಮಧ್ಯಾಹ್ನ ನಾಡಿನ ಹಿರಿಯ ವಿದ್ವಾಂಸರಿಂದ ಬನ್ನಂಜೆಯವರ ಕುರಿತಾದ 2 ಗೋಷ್ಠಿಗಳು ನಡೆಯಲಿದ್ದು, ಗೋಷ್ಠಿಯಲ್ಲಿ ಶ್ರೀ ಬ್ರಹ್ಮಣ್ಯಾಚಾರ್ಯ, ಶ್ರೀಕಾಂತ್ ಶೆಟ್ಟಿ ಕಾರ್ಕಳ, ಪಾದೇಕಲ್ಲು ವಿಷ್ಣುಭಟ್, ನಿತ್ಯಾನಂದ ಪಡ್ರೆ, ಎಂ.ಎಲ್.ಸಾಮಗ, ಗಣನಾಥ್ ಎಕ್ಕಾರ್ ಭಾಗವಹಿಸಲಿದ್ದಾರೆ.ಸಮಾರೋಪ ಸಮಾರಂಭ ಶ್ರೀ ವಿದ್ಯಾಭೂಷಣರ ಸಭಾಧ್ಯಕ್ಷತೆ ನಡೆಯಲಿದೆ. ಸಮಾರೋಪನುಡಿಯನ್ನು ಗಂಗಾವತಿ ಪ್ರಾಣೇಶ್ ನೆರವೇರಿಸುವರು. ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದ ಅಧ್ಯಕ್ಷ ಮಲ್ಲೇಪುರಂ ಜಿ. ವೆಂಕಟೇಶ್ ಪ್ರಾಸ್ತಾವಿಕ ನುಡಿಯನ್ನಾಡುವರು.ಸಭಾ ಕಾರ್ಯಕ್ರಮದ ನಂತರ ಸಂಜೆ 5.30ಕ್ಕೆ ಶ್ರೀ ವಿದ್ಯಾಭೂಷಣರಿಂದ ಆಚಾರ್ಯರ ಹಾಡುಗಳ ಹಾಡು, ನಾದ ಲಹರಿ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಟಿ.ರಂಗ ಪೈ, ವಿಶ್ವನಾಥ ಶೆಣೈ, ಸದಾಶಿವ ರಾವ್, ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...