ಬನ್ನಂಜೆ ಬ್ರಹ್ಮಕಲಶೋತ್ಸವ: ಇಂದು ವೈಭವದ ಹೊರೆಕಾಣಿಕೆ ಮೆರವಣಿಗೆ

KannadaprabhaNewsNetwork |  
Published : Apr 16, 2026, 02:45 AM IST
ವೈಭವದ ಹೊರೆಕಾಣಿಗೆ ಮೆರವಣಿಗೆಗೆ ನಾಡೋಜ ಜಿ. ಶಂಕರ್ ಚಾಲನೆ ನೀಡಿದರು | Kannada Prabha

ಸಾರಾಂಶ

ಇಲ್ಲಿನ ಬನ್ನಂಜೆಯ ಇತಿಹಾಸ-ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಏ.16ರಿಂದ ಬ್ರಹ್ಮಕಲಶೋತ್ಸವ ಅಂಗವಾಗಿ ವೈವವಿಧ್ಯಮಯ ಧಾರ್ಮಿಕ-ಸಾಂಸ್ಕೃತಿಕ ಕಾರ್‍ಯಕ್ರಮಗಳು ಆರಂಭವಾಗಿ ಏ. 20ರವರೆಗೆ ನಡೆಯಲಿವೆ. ಇದರ ಅಂಗವಾಗಿ ಬುಧವಾರ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ಉಡುಪಿ: ಇಲ್ಲಿನ ಬನ್ನಂಜೆಯ ಇತಿಹಾಸ-ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಏ.16ರಿಂದ ಬ್ರಹ್ಮಕಲಶೋತ್ಸವ ಅಂಗವಾಗಿ ವೈವವಿಧ್ಯಮಯ ಧಾರ್ಮಿಕ-ಸಾಂಸ್ಕೃತಿಕ ಕಾರ್‍ಯಕ್ರಮಗಳು ಆರಂಭವಾಗಿ ಏ. 20ರವರೆಗೆ ನಡೆಯಲಿವೆ. ಇದರ ಅಂಗವಾಗಿ ಬುಧವಾರ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ನೇತೃತ್ವದಲ್ಲಿ ನಡೆದ ಈ ಬೃಹತ್ ಹೊರೆಕಾಣಿಕೆ ಮೆರವಣಿಗೆಯಲ್ಲಿ ನೂರಕ್ಕೂ ಅಧಿಕ ವಾಹನಗಳಲ್ಲಿ ಉಡುಪಿ ಮತ್ತು ಸುತ್ತಮುತ್ತಲಿನ ಊರುಗಳ ಭಕ್ತಾಭಿಮಾನಿಗಳು ಹಸಿರು ತರಕಾರಿ, ಫಲವಸ್ತು, ಧವಸ ಧಾನ್ಯ, ಅಕ್ಕಿ, ಬೆಲ್ಲ ತುಪ್ಪಾದಿಗಳನ್ನು ದೇವಾಲಯಕ್ಕೆ ತಂದೊಪ್ಪಿಸಿದರು.ನಗರದ ಹೊರ ಭಾಗದ ಜೋಡುಕಟ್ಟೆಯಲ್ಲಿ ದೇವಾಲಯದ ಪ್ರಧಾನ ಅರ್ಚಕ ಪಿ. ವಾಸುದೇವ ಉಪಾಧ್ಯ ಅವರು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ನಂತರ ಡಾ. ಜಿ. ಶಂಕರ್ ಅವರು ಈಡುಗಾಯಿ ಒಡೆಯುವ ಮೂಲಕ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ. ಮಾಧವ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ಪ್ರಮುಖರಾದ ಉದಯ ಕುಮಾರ್ ಶೆಟ್ಟಿ, ಬನ್ನಂಜೆ ಸುರೇಶ್ ಶೆಟ್ಟಿ, ತೋಟದಮನೆ ದಿವಾಕರ ಶೆಟ್ಟಿ, ಪಿ. ಪುರುಷೋತ್ತಮ ಶೆಟ್ಟಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶಮಿತಾ ಎಸ್. ಭಂಡಾರಿ, ಎಂ. ಪ್ರಭಾಕರ ಶೆಟ್ಟಿ, ಶೇಖರ ಶೆಟ್ಟಿ, ಸುದೇಶ್ ಶೇಟ್ ಇದ್ದರು.ಸಚಿವರಿಂದ ಧಾರ್ಮಿಕ ಸಭೆ ಉದ್ಘಾಟನೆ: ಗುರುವಾರ ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯನ್ನು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸುವರು. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರು ಸಾನಿಧ್ಯ ವಹಿಸಲಿದ್ದು, ಡಾ. ಜಿ. ಶಂಕರ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸ್ವೀಕರ್ ಯು.ಟಿ. ಖಾದರ್, ಶಾಸಕ ಯಶ್‌ಪಾಲ್ ಸುವರ್ಣ, ವಿಧಾನ ಪರಿಷತ್‌ ಸದಸ್ಯ ಭೋಜೆ ಗೌಡ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ ಭಾಗವಹಿಸುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಾಯ ದೇವಳಕ್ಕೆ ನೂತನ ಬ್ರಹ್ಮರಥ ಪುರಪ್ರವೇಶ
11 ಕೋಟಿ ರು. ವೆಚ್ಚದಲ್ಲಿ ಕೈಗಾರಿಕಾ ಪ್ರದೇಶ ಹೆದ್ದಾರಿ ಸಂಪರ್ಕ ರಸ್ತೆ ಅಭಿವೃದ್ಧಿ