ಬಂಟರ ಸಂಘ ಗಣೇಶೋತ್ಸವ ಶೋಭಾಯಾತ್ರೆ

KannadaprabhaNewsNetwork |  
Published : Sep 10, 2024, 01:42 AM IST
32 | Kannada Prabha

ಸಾರಾಂಶ

ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೋಮವಾರ ಅದ್ಧೂರಿಯಿಂದ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೋಮವಾರ ಅದ್ಧೂರಿಯಿಂದ ಸಂಪನ್ನಗೊಂಡಿತು.

ಸೋಮವಾರ ಗಣಪತಿ ವಿಸರ್ಜನೆ ಶೋಭಾಯಾತ್ರೆ ವಿವಿಧ ಭಜನಾ ತಂಡಗಳು, ಸಹಸ್ರಾರು ಭಕ್ತ ಬಾಂಧವರೊಡಗೂಡಿ ಸಡಗರದಿಂದ ನಡೆಯಿತು. ಮಹಾಮಾಯಿ ಕೆರೆಯಲ್ಲಿ ಗಣೇಶ ವಿಗ್ರಹವನ್ನು ವಿಸರ್ಜಿಸುವುದರೊಂದಿಗೆ ಶ್ರೀದೇವರ ಅನುಗ್ರಕ್ಕೆ ಎಲ್ಲರೂ ಪಾತ್ರರಾದರು. ಬಂಟ ಸಮುದಾಯದ ವಿವಿಧ ಸಂಘಟನೆಯವರು ವೈಭವೋಪೇತದಿಂದ ಈ ಕಾರ್ಯಕ್ರಮ ನಡೆಸಿಕೊಟ್ಟರು.

ಸಭಾ ಕಾರ್ಯಕ್ರಮ: ಬಂಟರ ಯಾನೆ ನಾಡವರ ಸಂಘ ಕಳೆದ 18 ವರ್ಷಗಳಿಂದ ತುಳುನಾಡಿನಲ್ಲೇ ಮಾದರಿ ರೀತಿಯಲ್ಲಿ ಗಣೇಶೋತ್ಸವ ಸಂಘಟಿಸುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜದ ಎಲ್ಲ ಜಾತಿ- ವರ್ಗಗಳೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ ಬೆರೆಯುವ ವಿಶಾಲ ಗುಣ ಬಂಟರಲ್ಲಿರುವುದು ಆದರ್ಶನೀಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ನಡೆಯುತ್ತಿರುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ದ್ವಿತೀಯ ದಿನದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಯಶಪಾಲ್ ಸುವರ್ಣ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಸಿಎ ಎನ್.ಬಿ. ಶೆಟ್ಟಿ, ಬ್ಯಾಂಕ್ ಆಫ್ ಬರೋಡದ ಪ್ರಧಾನ ವ್ಯವಸ್ಥಾಪಕ ರಾಜೇಶ್ ಖನ್ನ, ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ, ಕರ್ನಾಟಕ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಶುಭ ಹಾರೈಸಿದರು.ಈ ಸಂದರ್ಭ ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ, ಯಕ್ಷಗಾನ ಅರ್ಥಧಾರಿ ಭಾಸ್ಕರ ರೈ ಕುಕ್ಕುವಳ್ಳಿ, ಸಾಮಾಜಿಕ, ಧಾರ್ಮಿಕ ಮುಂದಾಳು ಟಿ. ಭಾಸ್ಕರ ರೈ, ಅಂತಾರಾಷ್ಟ್ರೀಯ ಈಜು ಸ್ಪರ್ಧೆಯ ವಿಜೇತ ಈಜುಪಟು ಚಿಂತನ್ ಎಸ್. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ ಮೋಹನ್ ರೈ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಆಶಾಜ್ಯೋತಿ ರೈ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷ್ಣ ಪ್ರಸಾದ್ ರೈ, ಗಣೇಶೋತ್ಸವ ಸಮಿತಿ ಸಂಚಾಲಕರಾದ ದಿವಾಕರ ಸಾಮಾನಿ, ಅಶ್ವತ್ಥಾಮ ಹೆಗ್ಡೆ, ಮನೀಶ್ ರೈ ಹಾಗೂ ಸಂತೋಷ್ ಶೆಟ್ಟಿ ಶೆಡ್ಡೆ ಇದ್ದರು.ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ಮಾತೃ ಸಂಘದ ಉಪಾಧ್ಯಕ್ಷ ಹೇಮಾನಾಥ ಶೆಟ್ಟಿ ಕಾವು ವಂದಿಸಿದರು. ಡಾ. ಮಂಜುಳಾ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ನಿರೂಪಿಸಿದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ