ಬಂಟ್ವಾಳ: ‘ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

KannadaprabhaNewsNetwork |  
Published : Jan 11, 2025, 12:48 AM IST
11 | Kannada Prabha

ಸಾರಾಂಶ

ಬೇಲೂರು, ಹಳೇಬೀಡು, ಹಂಪಿ, ಆಲಮಟ್ಟಿ, ವಿಜಯಪುರ, ಕೂಡಲಸಂಗಮ, ಐಹೊಳೆ, ಪಟ್ಟದಕಲ್ಲು ಬಾದಾಮಿ, ಅಂಜನಾದಿ, ಮೊದಲಾದ ಕ್ಷೇತ್ರಗಳನ್ನು ಪ್ರವಾಸದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024- 25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಏರ್ಪಡಿಸಿರುವ ‘ಕರ್ನಾಟಕದ ದರ್ಶನ’ ಎಂಬ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಪ್ರವಾಸಕ್ಕೆ ಬಂಟ್ವಾಳದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.‌ ಹಸಿರು‌ನಿಶಾನೆ ತೋರಿಸುವ ಮೂಲಕ ಚಾಲನೆ‌‌ ನೀಡಿದರು. ದೇಶ ಸುತ್ತು ಕೋಶ ಓದು ಎಂಬ ಮಾತಿನಂತೆ ತರಗತಿ ಕೋಣೆಗಳಿಂದ ಹೊರಗೆ ಶೈಕ್ಷಣಿಕ ವಿಚಾರವಾಗಿ ಅನುಭವವನ್ನು ಪಡೆಯಲು ರಾಜ್ಯ ಸರ್ಕಾರವು ಹಮ್ಮಿಕೊಂಡಿರುವ ಈ ಮಹತ್ತರವಾದ ಕಾರ್ಯಕ್ರಮವನ್ನು ಎಲ್ಲ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ ಹಾಗೂ ಶಿಕ್ಷಣಕ್ಕೆ ಪೂರಕವಾದ ಇಂತಹ ಚಟುವಟಿಕೆಗಳು ಹೆಚ್ಚು ಆಸಕ್ತಿಯನ್ನು ತಂದುಕೊಡುತ್ತವೆ ಎಂದರು.

ಬೇಲೂರು, ಹಳೇಬೀಡು, ಹಂಪಿ, ಆಲಮಟ್ಟಿ, ವಿಜಯಪುರ, ಕೂಡಲಸಂಗಮ, ಐಹೊಳೆ, ಪಟ್ಟದಕಲ್ಲು ಬಾದಾಮಿ, ಅಂಜನಾದಿ, ಮೊದಲಾದ ಕ್ಷೇತ್ರಗಳನ್ನು ಪ್ರವಾಸದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಲಿದ್ದಾರೆ.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶಿವಪ್ರಸಾದ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಇದರ ಅಧೀಕ್ಷಕರಾದ ಪುಷ್ಪರಾಜ್, ಶಿಕ್ಷಣ ಸಂಯೋಜಕರಾದ ಪ್ರತಿಮಾ, ಸುಜಾತ, ಸುಧಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸಂತೋಷ್, ಪ್ರಥಮ ದರ್ಜೆ ಸಹಾಯಕರಾದ ಕಿಶೋರ್, ಕಚೇರಿ ಸಿಬ್ಬಂದಿ ಕಾರ್ತಿಕ್, ಸಮೂಹ ಸಂಪನ್ಮೂಲ ವ್ಯಕ್ತಿ ಮಲ್ಲಿಕಾರ್ಜುನ, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ರಘು, ಹಾಗೂ 75 ವಿದ್ಯಾರ್ಥಿಗಳನ್ನೊಳಗೊಂಡ ತಂಡದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಶಿಕ್ಷಕಿ ವಿಜಯಲಕ್ಷ್ಮೀ, ಚಿತ್ರಕಲಾ ಶಿಕ್ಷಕರಾದ ಮುರಳೀಧರ ಆಚಾರ್ಯ ಹಾಗೂ ಸತ್ಯಶಂಕರ ಉಪಸ್ಥಿತರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...