ಬಂಟ್ವಾಳ: ೧೨೦೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

KannadaprabhaNewsNetwork |  
Published : Oct 01, 2024, 01:39 AM IST

ಸಾರಾಂಶ

ಬಂಟರ ಸಂಘ ಬಂಟವಾಳ ತಾಲೂಕು ವತಿಯಿಂದ ಮುಂಬೈ ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ನೆರವಿನಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಬ್ರಹ್ಮರಕೂಟ್ಲುವಿನ ಬಂಟರ ಭವನದಲ್ಲಿ ಭಾನುವಾರ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಜಾತ್ಯತೀತ ನೆಲೆಯಲ್ಲಿ ವಿದ್ಯಾರ್ಥಿವೇತನ‌ ವಿತರಿಸುವ ಮೂಲಕ ಆಲ್‌ ಕಾರ್ಗೋ ಸಂಸ್ಥೆ ಮತ್ತು ಬಂಟವಾಳದ ಬಂಟರ ಸಂಘ ಎಲ್ಲರಿಗೂ ಮಾದರಿಯಾಗಿದೆ ಎಂದು ಬೆಂಗಳೂರು ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಅಧ್ಯಕ್ಷ ಆರ್.ಉಪೇಂದ್ರ ಶೆಟ್ಟಿ ಹೇಳಿದರು.ಬಂಟರ ಸಂಘ ಬಂಟವಾಳ ತಾಲೂಕು ವತಿಯಿಂದ ಮುಂಬೈ ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ನೆರವಿನಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಬ್ರಹ್ಮರಕೂಟ್ಲುವಿನ ಬಂಟರ ಭವನದಲ್ಲಿ ಭಾನುವಾರ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಂಟವಾಳ ಬಂಟರ ಸಂಘ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅಧ್ಯಕ್ಷತೆ ವಹಿಸಿ, ಪ್ರಸ್ತಾವನೆಯ ಮಾತುಗಳನ್ನಾಡಿದರು.

ಮುಖ್ಯ ಅತಿಥಿ ಆಲ್ ಕಾರ್ಗೊ ಲಾಜಿಸ್ಟಿಕ್ಸ್ ಹಿರಿಯ ಪ್ರಧಾನ ವ್ಯವಸ್ಥಾಪಕ ಡಾ.ನೀಲ್‌ರತನ್ ಶಿಂಧೆ ಮಾತನಾಡಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಹಲವು ಮಂದಿ ಸಾಧಕರನ್ನು ಸನ್ಮಾನಿಸಲಾಯಿತು. ಆಲ್‌ ಕಾರ್ಗೋ ಸಂಸ್ಥೆಯ ಮಂಗಳೂರು ಪ್ರತಿನಿಧಿ ಸವಿಸ್ತಾರ್‌ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.

ಸಂಘದ ನಿಕಟಪೂರ್ವ ಅಧ್ಯಕ್ಷ ನಗ್ರಿಗುತ್ತು ವಿವೇಕ್‌ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಸ್ಥಾಪಕ ಅಧ್ಯಕ್ಷ ಕಿರಣ್‌ ಹೆಗ್ಡೆ ಅತಿಥಿಗಳನ್ನು ಗೌರವಿಸಿದರು. ಜೊತೆ ಕಾರ್ಯದರ್ಶಿ ರಂಜನ್ ಕುಮಾರ್ ಶೆಟ್ಟಿ, ಜೊತೆ ಕೋಶಾಧಿಕಾರಿ ಪ್ರತಿಭಾ ಎ. ರೈ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ವಿದ್ಯಾರ್ಥಿವೇತನ ನಿರ್ವಹಣಾ ಸಂಚಾಲಕ ಎಚ್. ಸಂಕಪ್ಪ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಲೋಕೇಶ್ ಶೆಟ್ಟಿ ವಂದಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಬಂಟ ಸಮಾಜ ಸೇರಿದಂತೆ ವಿವಿಧ ಜಾತಿ ಮತದ ೧೨೦೦ ವಿದ್ಯಾರ್ಥಿಗಳಿಗೆ ಸುಮಾರು ೪೫ ಲಕ್ಷ ರು. ವೆಚ್ಚದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜ.1ರಂದು ಜಕಣಾಚಾರಿ ಸಂಸ್ಮರಣಾ ದಿನ
ಸೇವಾ ಕಾರ್ಯಕ್ರಮಗಳೊಂದಿಗೆ ಕೆ. ಮರೀಗೌಡ ಹುಟ್ಟುಹಬ್ಬ