ಶಿರೋಮಣಿ ಪ್ರಶಸ್ತಿಯಿಂದ ಸಿದ್ದಕಟ್ಟೆ ಸಹಕಾರ ಸಂಘದ ಹೆಸರು ರಾಜ್ಯಾದ್ಯಂತ ಪಸರಿಸಿದೆ: ಸಂದೇಶ್ ಶೆಟ್ಟಿ

KannadaprabhaNewsNetwork |  
Published : Feb 27, 2026, 03:00 AM IST
ಸಹಕಾರ ಶಿರೋಮಣಿ ಪ್ರಶಸ್ತಿಯಿಂದ ಸಿದ್ದಕಟ್ಟೆ ಸಹಕಾರ ಸಂಘದ ಹೆಸರು ರಾಜ್ಯ ವ್ಯಾಪ್ತಿ ಪಸರಿಸಿದೆ: ಸಂದೇಶ್ ಶೆಟ್ಟಿ | Kannada Prabha

ಸಾರಾಂಶ

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅವರಿಗೆ ಕರ್ನಾಟಕ ಸಹಕಾರ ಶಿರೋಮಣಿ 2025 ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿರುವುದು ಸಂಘಕ್ಕೆ ಹಾಗೂ ಪ್ರದೇಶದ ರೈತ ಸಮುದಾಯಕ್ಕೆ ದೊರೆತ ಮಹತ್ವದ ಗೌರವವಾಗಿದೆ ಎಂದು ಸಂಘದ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅವರಿಗೆ ಕರ್ನಾಟಕ ಸಹಕಾರ ಶಿರೋಮಣಿ 2025 ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿರುವುದು ಸಂಘಕ್ಕೆ ಹಾಗೂ ಪ್ರದೇಶದ ರೈತ ಸಮುದಾಯಕ್ಕೆ ದೊರೆತ ಮಹತ್ವದ ಗೌರವವಾಗಿದೆ ಎಂದು ಸಂಘದ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ ಅಭಿಪ್ರಾಯಪಟ್ಟರು.

ಅವರು ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಕಳೆದ ಆರು ವರ್ಷಗಳಿಂದ ಸಂಘದ ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಅವರು ರೈತರಿಗೆ ಅಗತ್ಯವಾದ ಸಾಲ ಸೌಲಭ್ಯಗಳನ್ನು ಯಾವುದೇ ತಾರತಮ್ಯವಿಲ್ಲದೆ ಸುಲಭವಾಗಿ ಒದಗಿಸುವ ಮೂಲಕ ಸಂಘವನ್ನು ರೈತಪರ ದಿಕ್ಕಿನಲ್ಲಿ ಮುನ್ನಡೆಸಿದ್ದಾರೆ. ಅಲ್ಲದೆ ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಸಂಘವನ್ನು ಎಲ್ಲಾ ಕ್ಷೇತ್ರಗಳಲ್ಲೂ ಗಣನೀಯ ಸಾಧನೆಗೈಯುವಂತೆ ಮಾಡಿದ್ದಾರೆ ಎಂದರು.

ಪ್ರಭಾಕರ ಪ್ರಭು ಅವರ ಈ ಸಾಧನೆಯನ್ನು ಗುರುತಿಸಿ ಕನ್ನಡ ಪ್ರಭ ಹಾಗೂ ಏಷಿಯಾ ನೆಟ್ ಸುವರ್ಣ ನ್ಯೂಸ್ ಬಳಗವು ಕರ್ನಾಟಕ ಸಹಕಾರ ಶಿರೋಮಣಿ 2025 ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿರುವುದು ಸಿದ್ದಕಟ್ಟೆ ಸಹಕಾರ ಸಂಘದ ಹೆಸರು ರಾಜ್ಯಾದ್ಯಂತ ಪಸರಿಸಲು ಕಾರಣವಾಗಿದೆ ಎಂದು ಹೇಳಿದರು.ಈ ಸಂದರ್ಭ ನಿರ್ದೇಶಕರಾದ ರಶ್ಮಿತ್ ಶೆಟ್ಟಿ ನೋಣಲ್ ಗುತ್ತು ಮತ್ತು ದಿನೇಶ್ ಪೂಜಾರಿ ಹುಲಿಮೇರು ಅಭಿನಂದನಾ ಮಾತುಗಳನ್ನಾಡಿ, ಪ್ರಭಾಕರ ಪ್ರಭು ಅವರ ಕಾರ್ಯಶೈಲಿ ಮತ್ತು ಸಂಘದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ಜಾರಪ್ಪ ನಾಯ್ಕ, ವೀರಪ್ಪ ಪರವ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ್ ಹೆಗ್ಡೆ, ಮಂದಾರತಿ ಶೆಟ್ಟಿ, ಪುಷ್ಪಲತಾ ಎಸ್.ಆರ್., ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೆರಿಯಶಾಂತಿ, ಅಡ್ಡಹೊಳೆಯಲ್ಲಿ ಆನೆ ದಾಟು ಕಾಮಗಾರಿ ಪೂರ್ಣ
ಮಣಿಪಾಲ ಕಸ್ತೂರ್ಬಾ, ಸಹ ಆಸ್ಪತ್ರೆಗಳಲ್ಲಿ ಇಎಸ್‌ಐಎಸ್ ಸೇವೆ ಲಭ್ಯ