ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ದೇವರ ಉತ್ಸವ ಬಲಿ, ಸಣ್ಣ ರಥೋತ್ಸವ, ಪಲ್ಲಕಿ ಉತ್ಸವ, ದೇವರಪೇಟೆ ಸವಾರಿಯು ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ನರಸಿಂಹ ಭಟ್, ಶ್ರೀಪತಿ ಉಪಾಧ್ಯಾಯ ಪೌರೋಹಿತ್ಯದಲ್ಲಿ ನಡೆಯಿತು.
ಮೂಲ್ಕಿ: ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ದೇವರ ಉತ್ಸವ ಬಲಿ, ಸಣ್ಣ ರಥೋತ್ಸವ, ಪಲ್ಲಕಿ ಉತ್ಸವ, ದೇವರಪೇಟೆ ಸವಾರಿಯು ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ನರಸಿಂಹ ಭಟ್, ಶ್ರೀಪತಿ ಉಪಾಧ್ಯಾಯ ಪೌರೋಹಿತ್ಯದಲ್ಲಿ ನಡೆಯಿತು.ಪೇಟೆ ಸವಾರಿ ಸಂದರ್ಭದಲ್ಲಿ ದೇವರು ಪಂಚಮಹಲ್ ಶ್ರೀ ಸದಾಶಿವ ದೇವಸ್ಥಾನ ಹಾಗೂ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಎರಡು ದೇವರುಗಳಿಗೆ ಏಕಕಾಲದಲ್ಲಿ ಪೂಜೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಅಭಿವೃದ್ಧಿ ಸಮಿತಿಯ ಡಾ.ಹರಿಕೃಷ್ಣ ಪುನರೂರು, ಅತುಲ್ ಕುಡ್ವ, ಸತೀಶ್ ಭಂಡಾರಿ, ಉದ್ಯಮಿ ಶರತ್ ಸಾಲ್ಯಾನ್ ಬೆಂಗಳೂರು, ಸುನಿಲ್ ಆಳ್ವ ಗೋಪಾಲಕೃಷ್ಣ ಭಟ್, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ ವರ್ಮ ಮತ್ತಿತರರು ಉಪಸ್ಥಿತರಿದ್ದರು. ಜಾತ್ರಾ ಮಹೋತ್ಸವದ ಪ್ರಯುಕ್ತ ಎಪ್ರಿಲ್ 7 ರಂದು ಹಗಲು ರಥೋತ್ಸವ, ರಾತ್ರಿ ಶಯನೋತ್ಸವ, .8ರಂದು ಬೆಳಿಗ್ಗೆ ಕವಾಟೋದ್ಘಾಟನೆ, ರಾತ್ರಿ ಮಹಾರಥೋತ್ಸವ ನಡೆಯಲಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.