- - -
- 1992ರಲ್ಲಿ ಪ್ರೌಢಶಾಲೆ ಆರಂಭಿಸಿ, ಅಶಕ್ತರು, ಬಡವರು, ನಿರ್ಗತಿಕ, ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ
- 2011-12 ರಲ್ಲಿ ಗ್ರಾಮೀಣ ಪ್ರತಿಭಾನ್ವಿತ ಮಕ್ಕಳಿಗೆ ಪೂರಕವಾಗಿ ಪ್ಯಾರಾ ಮೆಡಿಕಲ್ ಕಾಲೇಜು ಆರಂಭ- - - ಕನ್ನಡಪ್ರಭ ವಾರ್ತೆ, ಶಿಕಾರಿಪುರ
ಸೋಮವಾರ ಪಟ್ಟಣದ ಸುದ್ದಿಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1991ರಲ್ಲಿ ಪಟ್ಟಣದ ಸಾಲೂರು ರಸ್ತೆಯಲ್ಲಿನ ಟಿಎಪಿಸಿಎಂಎಸ್ ಸಮೀಪದಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಶಾಲೆಯ ಮೂಲಕ ಆರಂಭವಾಗಿದೆ. 1992ರಲ್ಲಿ ಪ್ರೌಢಶಾಲೆಯನ್ನು ಆರಂಭಿಸಿ, ಸತತ 33 ವರ್ಷಗಳಿಂದ ಸಮಾಜದಲ್ಲಿನ ಅಶಕ್ತರು, ಬಡವರು, ನಿರ್ಗತಿಕ, ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ಜತೆಗೆ ವಸತಿ ಸೌಲಭ್ಯದ ಮೂಲಕ ಎಲ್ಲ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದೆ ಎಂದರು.
ಸಂಸ್ಥೆಯ ಸತತ 3 ದಶಕದ ಸಾಧನೆಯನ್ನು ಪರಿಶೀಲಿಸಿ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಮಟ್ಟದಲ್ಲಿ 5 ಸಂಸ್ಥೆಗಳಿಗೆ ನೀಡುವ ಉತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿಗೆ ಈ ಬಾರಿ ಬಾಪೂಜಿ ಶಿಕ್ಷಣ ಸಂಸ್ಥೆ ಭಾಜನವಾಗಿದೆ. ನ.23ರಂದು ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿನ ಬಾಲಭವನದಲ್ಲಿ ನಡೆದ ಮಕ್ಕಳ ದಿನ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ₹1 ಲಕ್ಷ ನಗದು, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದ್ದಾರೆ ಎಂದ ಅವರು, ಸಂಸ್ಥೆಯ ಸಾಧನೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶ್ರಮಿಸಿದ ಸರ್ವರಿಗೂ ಅಭಿನಂದಿಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಕಾರ್ಯದರ್ಶಿ ಪವಿತ್ರ, ಪಿಯು ಕಾಲೇಜಿನ ಪ್ರಾಚಾರ್ಯ ಮುಸ್ತಾಫ, ಪ್ರೌಢಶಾಲೆ ಮುಖ್ಯೋಪಾಧ್ಯಾಯ ರಾಘವೇಂದ್ರ ಕುಲಕರ್ಣಿ ಉಪಸ್ಥಿತರಿದ್ದರು.
ಶಿಕಾರಿಪುರದ ಬಾಪೂಜಿ ಶಿಕ್ಷಣ ಸಂಸ್ಥೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿಯನ್ನು ಸಂಸ್ಥಾಪಕ ಅಧ್ಯಕ್ಷ ಪಾಪಯ್ಯ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರಿನ ಬಾಲಭವನದಲ್ಲಿ ವಿತರಿಸಿ ಗೌರವಿಸಿದರು.