ಕಡೂರುತಾಲೂಕಿನ ಕರಿಯನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ ಕಾವಲು ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಅಪರಿಚಿತರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಕನ್ನಡಪ್ರಭ ವಾರ್ತೆ, ಕಡೂರು
ತಾಲೂಕಿನ ಕರಿಯನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ ಕಾವಲು ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಅಪರಿಚಿತರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿ ತಿರುಪತಿಹಳ್ಳಿ ಗ್ರಾಮದ ಲಕ್ಷ್ಮಣ (52) ಹತ್ಯೆಯಾದವರು. ಕಳೆದ ಮೂರು ತಿಂಗಳಿನಿಂದ ಕರಿಯನಹಳ್ಳಿ ಗ್ರಾಮದ ಮಹೇಶ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅವರು, ತೋಟದ ಮನೆ ಯಲ್ಲಿಯೇ ವಾಸವಾಗಿದ್ದರು.ಶುಕ್ರವಾರ ಬೆಳಿಗ್ಗೆ ತೋಟದ ಮಾಲೀಕ ಮಹೇಶ ಅವರೊಂದಿಗೆ ಕೆಲಸ ಮಾಡುತ್ತಿದ್ದ ರವಿನಾಯ್ಕ ಅವರು ಮೃತರ ಸಂಬಂಧಿ ಕರಿಗೆ ದೂರವಾಣಿ ಕರೆ ಮಾಡಿ, ಲಕ್ಷ್ಮಣ ಅವರು ತೋಟದ ಮನೆಯಲ್ಲಿ ಹತ್ಯೆಯಾಗಿರುವ ವಿಷಯ ತಿಳಿಸಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಎಎಸ್ಪಿ ಸಿ.ಟಿ. ಜಯ ಕುಮಾರ್, ಅಪರಾಧ ತನಿಖಾ ತಂಡ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಿಂದ ಸಾಕ್ಷ್ಯಾಧಾರ ಹಾಗೂ ಅಗತ್ಯ ಮಾಹಿತಿ ಸಂಗ್ರಹಿಸಿದರು.ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.--ಬಾಕ್ಸ್ --ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ, ಸಾಕ್ಷ್ಯಾಧಾರ ಸಂಗ್ರಹಹತ್ಯೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಮೊಬೈಲ್ ಫೋನ್, ಸಿಸಿಟಿವಿ ದಾಖಲೆಗಳು ಸೇರಿದಂತೆ ಮಹತ್ವದ ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಎರಡು-ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.