ಏಪ್ರಿಲ್ ಅಂತ್ಯದೊಳಗೆ ತಡೆಗೋಡೆ ಕಾಮಗಾರಿ ಪೂರ್ಣ: ಸತೀಶ್ ಜಾರಕಿಹೊಳಿ

KannadaprabhaNewsNetwork |  
Published : Jan 12, 2025, 01:18 AM IST
ಚಿತ್ರ :  11ಎಂಡಿಕೆ2 : ಡಿಸಿ ಕಚೇರಿಯ ತಡೆಗೋಡೆ ಕಾಮಗಾರಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ವೀಕ್ಷಿಸಿದರು.  | Kannada Prabha

ಸಾರಾಂಶ

ಮಡಿಕೇರಿ ಜಿಲ್ಲಾಡಳಿತ ಭವನದ ತಡೆಗೋಡೆ ಕಾಮಗಾರಿ ವೀಕ್ಷಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪ್ರಸಕ್ತ ಸಾಲಿನ ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲಾ ಕೇಂದ್ರ ಮಡಿಕೇರಿಯ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಕಾಮಗಾರಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಶನಿವಾರ ವೀಕ್ಷಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಕೆ.ಎನ್.ನಳಿನಿ, ಕಾರ್ಯಪಾಲಕ‌ ಎಂಜಿನಿಯರ್ ಎಂ.ಪಿ.ಮುತ್ತುರಾಜು ಇತರರು ಇದ್ದರು.

ಈ ಸಂದರ್ಭ ಸಂಬಂಧಪಟ್ಟ ಎಂಜಿನಿಯರ್ ಅವರಿಂದ ಮಾಹಿತಿ ಪಡೆದು ಮಾತನಾಡಿದ ಲೋಕೋಪಯೋಗಿ ಸಚಿವರು ತಡೆಗೋಡೆಯ ದುರಸ್ತಿ ಕಾರ್ಯವನ್ನು ಪ್ರಸಕ್ತ ಸಾಲಿನ ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ಕಡೆಗೆ ತೆರಳುವ ರಸ್ತೆಯ ಬಲಭಾಗದಲ್ಲಿ ಕೆಲ ವರ್ಷಗಳ ಹಿಂದೆ, ಜಿಲ್ಲಾಡಳಿತ ಭವನದ ಸುರಕ್ಷತೆಗಾಗಿ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಇದು ನಂತರದ ವರ್ಷದ ಭಾರೀ ಮಳೆಯ ಸಂದರ್ಭ ಕುಸಿತಕ್ಕೆ ಒಳಗಾಗುವ ಅಪಾಯವನ್ನು ಎದುರಿಸಿದ ಹಿನ್ನೆಲೆ, ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು.

ಲೋಕೋಪಯೋಗಿ ಇಲಾಖಾ ಎಂಜಿನಿಯರ್‌ ಗಳೊಂದಿಗೆ ತಡೆಗೋಡೆಯ ದುರಸ್ತಿ ಕಾರ್ಯ ಮತ್ತು ಪ್ರಸ್ತುತ ಪರಿಸ್ಥಿತಿಗಳನ್ನು ಪರಿಶೀಲಿಸಿದರು.

ಈ ಸಂದರ್ಭ ಸಂಬಂಧಪಟ್ಟ ಎಂಜಿನಿಯರ್‌ಗಳು ಸಚಿವರಿಗೆ ಮಾಹಿತಿ ನೀಡಿದರು.

ತಡೆಗೋಡೆಯನ್ನು ಎರಡು ಹಂತಗಳಲ್ಲಿ ಮೆಟ್ಟಿಲಿನ ಮಾದರಿಯಲ್ಲಿ ದುರಸ್ತಿ ಪಡಿಸಲಾಗುತ್ತದೆ. ಈ ಹಿಂದಿನ ತಡೆಗೋಡೆಯ ಅರ್ಧ ಭಾಗವನ್ನು ಅದು ಇರುವ ಯಥಾಸ್ಥಿತಿಯಲ್ಲಿ ಗಟ್ಟಿಗೊಳಿಸಿ, ಅದರ ಮೇಲೆ ಕಾಂಕ್ರೀಟ್ ಹಾಕಲಾಗುತ್ತದೆ. ಬಳಿಕ ಮತ್ತೊಂದು ಹಂತವನ್ನು 45 ಡಿಗ್ರಿ ಕೋನದಲ್ಲಿ ತಡೆಗೋಡೆ ನಿರ್ಮಿಸಿ ಬಲ ಪಡಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

ಪ್ರಮುಖರಾದ ಚಂದ್ರಮೌಳಿ, ಟಿ.ಪಿ.ರಮೇಶ್, ತೆನ್ನೀರ ಮೈನಾ, ಕೆ.ಜಿ. ಪೀಟರ್, ಅಂಬೆಕಲ್ಲು ನವೀನ್, ಪ್ರಕಾಶ್ ಆಚಾರ್ಯ, ಯಾಕೂಬ್ ಸೇರಿದಂತೆ ಪ್ರಮುಖರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ವರ್ಷ: ದೇವಾಲಯಗಳಿಗೆ ಭಕ್ತರ ದಾಂಗುಡಿ
ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?