ಕನ್ನಡ ಪ್ರಭ ವಾರ್ತೆ ಚಿತ್ತಾಪುರ
ಪಟ್ಟಣದಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೊಹ ತತ್ವಗಳಿಗೆ ಜೀವಂತ ವೇದಿಕೆಯಾಗುವ ನಿಟ್ಟಿನಲ್ಲಿ ಯಾವುದೇ ಒಂದು ಕುಟುಂಬ ಅಥವಾ ವ್ಯಕ್ತಿಗೆ ಸೀಮಿತವಾಗದೇ ಇಡೀ ಸಮಾಜದ ಆಸ್ತಿಯಾಗಿ ರೂಪುಗೊಳ್ಳಬೇಕು ಎನ್ನುವ ಉದ್ದೇಶದೊಂದಿಗೆ ಸಮಾನ ಮನಸ್ಕರು ಕೂಡಿಕೊಂಡು ರಾವೂರ ರಸ್ತೆಯಲ್ಲಿ 4 ಕೋಟಿ ರು. ವೆಚ್ಚದಲ್ಲಿ ಬಸವ ಭವನ ಮತ್ತು 75 ಲಕ್ಷ ರು.ವೆಚ್ಚದಲ್ಲಿ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯವನ್ನು ನಿರ್ಮಾಣ ಮಾಡಲಾಗಿದ್ದು ಅದನ್ನು ನ, 28ರಂದು ಲೊಕಾರ್ಪಣೆ ಮಾಡಲಾಗುತ್ತಿದೆ. ಬಸವ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದು, ವಿದ್ಯಾರ್ಥಿನಿಯರ ವಸತಿ ನಿಲಯವನ್ನು ಅಖಿಲ ಭಾರತ ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಉದ್ಘಾಟಿಸುವರು. ಮಾಜಿ ಸಚಿವ ಶರಣಬಸವಪ್ಪ ದರ್ಶನಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಲೊಕಸಭೆ ಸದಸ್ಯರಾದ ರಾಧಕೃಷ್ಣ ದೊಡ್ಮನಿ, ಅಖಿಲ ಭಾರತ ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ ಸೇರಿದಂತೆ ಜಿಲ್ಲೆಯ ಶಾಸಕರು ಮತ್ತು ವಿವಿಧ ಮಠಗಳ ಪೂಜ್ಯರು ಸಮಾಜದ ಗಣ್ಯರು ಮುಖಂಡರು ಹಾಗೂ ಬಸವಾಭಿಮಾನಿಗಳು ಭಾಗವಹಿಸುವರು ಎಂದು ತಿಳಿಸಿದರು,
ನ, ೨೮ ರಂದು ಬೆಳಿಗ್ಗೆ ೬ ರಿಂದ ೯ ಗಂಟೆಯ ವರೆಗೆ ವಾಸ್ತುಪೂಜೆ ನಂತರ ಭವನ ಹಾಗೂ ವಸತಿ ನಿಲಯ ನಿರ್ಮಾಣಕ್ಕೆ ಸಹಕರಿಸಿದವರಿಗೆ ಸನ್ಮಾನ ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ನಾಲವಾರದ ಶ್ರೀ ಡಾ. ಸಿದ್ದ ತೊಟೇಂದ್ರ ಶಿವಾಚಾರ್ಯರು ಹಾಗೂ ವಿವಿಧ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿರುವರು ಎಂದರು.ಸುದ್ದಿಗೋಷ್ಟಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ನಾಗರಾಜ ಬಂಕಲಗಾ, ಖಜಾಂಚಿ ಅಣ್ಣಾರಾವ ಪಾಟೀಲ್ ಮುಡಬೂಳ, ಚಂದ್ರಶೇಖರ ಸಾತನೂರ, ಪ್ರಭುದೇವ ಬೊಮ್ಮನಳ್ಳಿ, ಶರಣು ಸಜ್ಜನಶೆಟ್ಟಿ, ಚಂದ್ರಕಾಂತ ಪಾಟೀಲ್, ಶರಣಗೌಡ ಪಾಟೀಲ, ಅಶೋಕ ನಿಪ್ಪಾಣಿ, ಅನಿಲ ವಡ್ಡಡಗಿ ಇದ್ದರು.