ಕನ್ನಡಪ್ರಭ ವಾರ್ತೆ ಮಂಡ್ಯ
ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್, ಬಸವಣ್ಣ ಅವರು ವಚನ ಸಾಹಿತ್ಯದ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದರು. ಹನ್ನೆರಡನೇ ಶತಮಾನದಲ್ಲಿ ವಚನಗಳ ಮೂಲಕ ಸಮಾಜವನ್ನು ತಿದ್ದಿದ ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿ ಸಮಾನತೆ ಬಗ್ಗೆ ವಿಶ್ವಕ್ಕೆ ಮಾದರಿಯಾದರು. ಅವರ ತತ್ವ, ವಚನಗಳು ಸಾರ್ವಕಾಲಿಕ ಮೌಲ್ಯಗಳಾಗಿದ್ದು ಅದನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದರು.
ಬಸವೇಶ್ವರರು ಅಂದು ಸಮಾಜದಲ್ಲಿ ಹಾಸು ಹೊಕ್ಕಾಗಿದ್ದ ಮೇಲು-ಕೀಳು, ಬಡವ-ಬಲ್ಲಿದ, ಎಂಬ ಅಸಮಾನತೆಯ ವಿರುದ್ಧ ಹೋರಾಟ ನಡೆಸಿದರು. ಸಮಾನತೆಯ ಬದುಕಿಗೆ ಒತ್ತು ಕೊಟ್ಟ ವ್ಯಕ್ತಿಯಾಗಿ ಪ್ರತಿಯೊಬ್ಬರ ಮನದಲ್ಲಿ ಹಾಸುಹೊಕ್ಕಾಗಿದ್ದಾರೆ ಎಂದರು.ಬಸವೇಶ್ವರರು ಸಾರಿ ಹೋದ ಸಂದೇಶಗಳನ್ನು ನಾವೆಲ್ಲರೂ ಜೀವನದಲ್ಲಿ ಪಾಲಿಸಿದರೆ ಸಮಾಜದಲ್ಲಿ ಅಶಾಂತಿ,ಅತೃಪ್ತಿ ಮತ್ತು ಅಸಹನೆ ಶಾಶ್ವತವಾಗಿ ದೂರವಾಗುತ್ತವೆ ಎಂದರು.
ಕಾಯಕವೇ ಕೈಲಾಸ ಎಂಬ ಸಂದೇಶ ನೀಡಿದ ವಿಶ್ವಗುರು: ಡಾ.ಶ್ರೀಧರ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾಯಕಯೋಗಿ, ವಿಶ್ವ ಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತೋತ್ಸವ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಜಗಜ್ಯೋತಿ ಬಸವಣ್ಣವರ ತತ್ವ ಆದರ್ಶಗಳನ್ನು ಸಮಾಜದಲ್ಲಿ ಎಲ್ಲರೂ ಅಳವಡಿಸಿಕೊಂಡಲ್ಲಿ ಬಸವ ಜಯಂತಿ ಆಚರಣೆ ಅರ್ಥಪೂರ್ಣ ವೆನಿಸುತ್ತದೆ ಎಂದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮಾತನಾಡಿ, ಬಸವಣ್ಣ ನವರು ಸಮಾಜದ ಎಲ್ಲಾ ವರ್ಗದ ಜನರನ್ನು ಒಂದುಗೂಡಿಸಿ ಜಾತೀಯತೆಯ ವಿರುದ್ಧ ಸಮರ ಸಾರಿದ್ದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.