ಹೊರ ದೇಶಗಳಲ್ಲಿ ಬಸವ ಜಯಂತಿ ಹೆಮ್ಮೆಯ ವಿಷಯ-ಪ್ರೊ. ಭಾಸ್ಕರ್‌

KannadaprabhaNewsNetwork |  
Published : May 10, 2024, 11:50 PM IST
 ಪೊಟೋ ಪೈಲ್ ನೇಮ್ ೧೦ಎಸ್‌ಜಿವಿ೧ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆದಂಡೆ ಸಭಾಂಗಣದಲ್ಲಿ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ವಹಿಸಿ ಅವರು ಮಾತನಾಡಿದರು. | Kannada Prabha

ಸಾರಾಂಶ

ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೇವೆ, ದೇಶ ಹಾಗೂ ಹೊರ ದೇಶಗಳಲ್ಲಿ ಬಸವೇಶ್ವರರ ಜಯಂತಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.

ಶಿಗ್ಗಾವಿ: ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೇವೆ, ದೇಶ ಹಾಗೂ ಹೊರ ದೇಶಗಳಲ್ಲಿ ಬಸವೇಶ್ವರರ ಜಯಂತಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.

ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆದಂಡೆ ಸಭಾಂಗಣದಲ್ಲಿ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಸವಣ್ಣನವರ ಜಯಂತಿಯನ್ನು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳು ಆಚರಣೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಲ್ಲಿ ಬಸವಣ್ಣನವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಸರ್ಕಾರ ಪ್ರೇರಣೆ ನೀಡಿದೆ. ಈ ರೀತಿ ದಾರ್ಶನಿಕರ ದಿನಾಚರಣೆಯ ಆಚರಿಸುವುದರಿಂದ ಅವರ ಆದರ್ಶಗಳು ಪ್ರೇರಣೆ ಆಗುತ್ತವೆ ಎಂದರು.

ಜನಪದ ಲೋಕ ಬಸವಣ್ಣನವರನ್ನು ಕಂಡ ಪರಿ ಹೇಗಿದೆ ಎಂಬುದನ್ನು ಕುರಿತು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಾಂಸ್ಕೃತಿಕ ನಾಯಕ ಬಸವಣ್ಣವರನ್ನು ಕುರಿತು ಜಾನಪದ ಸಾಹಿತ್ಯವನ್ನು ಅನುಲಕ್ಷಿಸಿ ಸಂಪುಟ ಒಂದನ್ನು ಪ್ರಕಟಿಸುವ ಯೋಜನೆಯನ್ನು ಹಾಕಿಕೊಂಡಿದೆ. ಮುಂಬರುವ ಒಂದು ತಿಂಗಳ ಒಳಗಾಗಿ ಈ ಕೃತಿ ಲೋಕಾರ್ಪಣೆಗೊಳ್ಳಲಿದೆ. ಇದು ನಮಗೆಲ್ಲರಿಗೂ ಮಾದರಿಯಾಗುವ ರೀತಿಯಲ್ಲಿ ಇರುತ್ತದೆ ಎಂದು ಹೇಳಿದರು.

ಸಹಾಯಕ ಕುಲಸಚಿವರಾದ ಶಹಜಹಾನ್ ಮುದಕವಿ ಮಾತನಾಡಿದರು. ನಂತರ ವಿಶ್ವವಿದ್ಯಾಲಯದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

ಅಭಿಯಂತರರಾದ ಮಂಜುನಾಥ, ಸುಭಾಸ, ಅತಿಥಿ ಸಹಾಯಕ ಪ್ರಾಧ್ಯಾಪಕ ಶಿವಾನಂದ ದೊಡ್ಡಮನಿ, ಕಿರಿಯ ಸಹಾಯಕ ಶರೀಪ ಮಾಕಪ್ಪನವರ, ಸಿದ್ದು ಕುರಗೋಡಿ, ಶಿವರಾಜ, ಮಂಜು ಬಾರ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ