)
ಕನ್ನಡಪ್ರಭ ವಾರ್ತೆ ತಾಳಿಕೋಟೆ
ಪಟ್ಟಣದ ರಾಜವಾಡೆಯ ಮೈದಾನದಿಂದ ಬೆಳಗ್ಗೆ 7-30ಕ್ಕೆ ವಿಶ್ವಗುರು ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆ ಪ್ರಾರಂಭಗೊಂಡು ಕತ್ರಿ ಬಜಾರ, ಶಿವಾಜಿ ಮಹಾರಾಜ ವೃತ್ತ, ಮಹಾರಾಣಾ ಪ್ರತಾಪ್‌ಸಿಂಹ ವೃತ್ತ, ಬಸ್ ನಿಲ್ದಾಣ ಮಾರ್ಗವಾಗಿ ಶ್ರೀ ಬಸವೇಶ್ವರ ವೃತ್ತಕ್ಕೆ ತಲುಪುವುದು ನಂತರ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಜರಗಲಿದೆ. ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸುವರು. ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆ ವಹಿಸುವರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸಹ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್.ಎನ್., ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಬಿ.ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿಎಸ್ ಕವಲಗಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ ಆಗಮಿಸುವರು.ಉಪನ್ಯಾಸಕರಾಗಿ ಜೆ.ಎಸ್.ಜಿ. ಫೌಂಡೇಶನ್ ಕಾರ್ಯದರ್ಶಿ ಶ್ರೀಕಾಂತ ಪತ್ತಾರ ಅವರು ಆಗಮಿಸಲಿದ್ದು, ಈ ಸಮಯದಲ್ಲಿ ತಹಸೀಲ್ದಾರ್ ಡಾ.ವಿನಯಾ ಹೂಗಾರ, ತಾಪಂ ಇಒ ಅನಸೂಯಾ ಚಲವಾದಿ, ಬಿಇಒ ಬಿ.ಎಸ್.ಸಾವಳಗಿ, ಸಿಪಿಐ ಮೊಹಮ್ಮದ್ ಫಸಿವುದ್ದೀನ ಹಾಗೂ ಪುರಸಭೆ ಮುಖ್ಯಾಧಿಕಾರಿ ವಸಂತ್ ಪವಾರ ಉಪಸ್ಥಿತರಿರುವರು.