ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ವೀರಶೈವ ವಿದ್ಯಾರ್ಥಿನಿಯದಲ್ಲಿ ಕರೆಯಲಾಗಿದ್ದ ಬಸವಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯ ಸಾನಿಧ್ಯ ವಹಿಸಿ ಮಾತನಾಡಿ, ಮುಂದಿನ ಪೀಳಿಗೆಗೆ ಶರಣಸಂಸ್ಕೃತಿಯ ಪರಿಚಯ ಮಾಡಿಸುವ ಮಹತ್ತರ ಉದ್ದೇಶವನ್ನು ಅಭಿಯಾನ ಹೊಂದಿದೆ ಎಂದರು.
ವೈಚಾರಿಕತೆ, ವೈಜ್ಞಾನಿಕತೆಯ ಉತ್ತುಂಗದಲ್ಲಿ ಮೆರೆಯುತ್ತಿರುವ ಮಾನವರಿಗೆ ಆದರ್ಶಗಳ ಅರಿವು ಬೇಕಿದೆ. ಸದೃಢ ಸಮಾಜ ಕಟ್ಟುವುದು, ಮಕ್ಕಳಲ್ಲಿ ಆಧ್ಯಾತ್ಮದ ಅರಿವು ಮೂಡಿಸುವುದು, ಮಹಿಳೆಯರ ಘನತೆಯನ್ನು ಕಾಪಾಡುವುದು, ವ್ಯಕ್ತಿತ್ವ ವಿಕಸನದಂತಹ ಮಹತ್ವದ ವಿಚಾರಗಳನ್ನು ಅಭಿಯಾನದಲ್ಲಿ ಪ್ರಚಾರಪಡಿಸಲಾಗುವುದು ಎಂದರು.ಅಭಿಯಾನ ಯಶಸ್ವಿಗೊಳಿಸಲು ಮಂಡ್ಯ ಜಿಲ್ಲೆಯ ಬಸವಪರ ಸಂಘಟನೆಗಳ ಒಕ್ಕೂಟದ ಸಂಚಾಲಕರಾಗಿ ಅಖಿಲಭಾರತ ವೀರಶೈವ ಮಹಾಸಭೆಯ ಮಾಜಿ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಸೆ.೨೫ರಂದು ಮಂಡ್ಯ ನಗರಕ್ಕೆ ಆಗಮಿಸಲಿರುವ ಬಸವಸಂಸ್ಕೃತಿ ಅಭಿಯಾನದ ರಥ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬೆಳಿಗ್ಗೆ ೧೧ಗಂಟೆಗೆ ಕಲಾಮಂದಿರಕ್ಕೆ ಆಗಮಿಸಲಿದೆ. ಬಾಲ್ಕಿಮಠದ ಡಾ.ಬಸವಲಿಂಗ ಪಟ್ಟದದೇವರು, ಗದಗದ ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ನಾಡಿನ ಹಲವು ಮಠಗಳ ಪೀಠಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸಂವಾದ, ಅಪರೂಪದ ಜಂಗಮದೆಡೆಗೆ ನಾಟಕ ನಡೆಯಲಿದ್ದು ಆಗಮಿಸುವ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿದೆ.