- ಬೆಕ್ಕಿನ ಕಲ್ಮಠದಲ್ಲಿ ಶ್ರೀ ಗುರುಬಸವ ಮಹಾಸ್ವಾಮಿ ಸ್ಮರಣೋತ್ಸವಕ್ಕೆ ಚಾಲನೆ ನೀಡಿ ಮರುಳಸಿದ್ಧ ಶ್ರೀ ಅಭಿಮತ । ಭಾವೈಕ್ಯ ಸಮ್ಮೇಳನ
ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಲ್ಲಿ ಗುರುವಾರ ಶ್ರೀ ಗುರುಬಸವ ಮಹಾಸ್ವಾಮಿಗಳ 112ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಹಾಗೂ ಭಾವೈಕ್ಯ ಸಮ್ಮೇಳನ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ನಾಮಕರಣ ಹಾಗೂ ಬಸವಣ್ಣನನ್ನು ಕರ್ನಾಟಕ ರಾಜ್ಯ ಸರ್ಕಾರವು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಅತ್ಯಂತ ಸಂತೋಷದ ಸಂಗತಿ. ವಚನ ಸಾಹಿತ್ಯ ಸಾರ ಪ್ರತಿಯೊಬ್ಬರ ಜೀವನಕ್ಕೂ ಮಾರ್ಗದರ್ಶನ ಎಂದು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಭಾಗವಹಿಸುವಿಕೆಯ ಮಹತ್ವವನ್ನು ಮಕ್ಕಳಲ್ಲಿ ಪೋಷಕರು ಹಾಗೂ ಶಿಕ್ಷಕರು ತಿಳಿಸಬೇಕು. ಸ್ಪರ್ಧೆಯ ಜತೆಯಲ್ಲಿ ಮಕ್ಕಳಿಗೆ ವಚನ ಸಾಹಿತ್ಯ ಶ್ರೇಷ್ಠತೆ ಹಾಗೂ ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.ಬಸವಣ್ಣ ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಸಂತೋಷದ ಸಂಗತಿ. ಬಸವಣ್ಣ ರಾಜ್ಯಕ್ಕೆ ಮಾತ್ರ ಸೀಮಿತವಲ್ಲ. ಒಂದು ಪ್ರದೇಶಕ್ಕೆ ಸೀಮಿತ ಅಲ್ಲ, ಬಸವಣ್ಣ ವಿಶ್ವವ್ಯಾಪಿ ಸಾಂಸ್ಕೃತಿಕ ನಾಯಕ ಎಂದು ತಿಳಿಸಿದರು.
ಜಡೆ ಸಂಸ್ಥಾನ ಮಠದ ಶ್ರೀ ಯೋಗಾಚಾರ್ಯ ಡಾ.ಮಹಾಂತ ಸ್ವಾಮೀಜಿ, ಶ್ರೀ ಗುರುಬಸವ ಸ್ವಾಮೀಜಿ 112ನೇ ಪುಣ್ಯ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಎಚ್.ಸಿ.ಯೋಗೀಶ್, ಪ್ರಧಾನ ಕಾರ್ಯದರ್ಶಿ ಮಹಾಲಿಂಗಯ್ಯ ಶಾಸ್ತ್ರಿ, ಕೋಶಾಧ್ಯಕ್ಷ ಇ.ವಿಶ್ವಾಸ್, ಪ್ರಚಾರ ಸಮಿತಿ ಅಧ್ಯಕ್ಷ ಸೋಮನಾಥ್, ಸುಜಯಪ್ರಸಾದ್, ಶೀಲಾ ಸುರೇಶ್, ರುದ್ರಯ್ಯಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.ಬಸವಣ್ಣನ ವಿರೋಧಿಸುವವಗೆ ವಚನ ಕೇಳಿಸಿ