ಸರ್ವರಿಗೂ ಸಮಬಾಳು, ಸಮಪಾಲು ಬಸವಣ್ಣರ ಧ್ಯೇಯ

KannadaprabhaNewsNetwork |  
Published : Feb 19, 2024, 01:31 AM IST
18ಕೆಆರ್ ಎಂಎನ್ 4.ಜೆಪಿಜಿ ಮಾಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣವನ್ನು ಶಾಸಕ ಬಾಲಕೃಷ್ಣ ನೆರವೇರಿಸಿದರು. | Kannada Prabha

ಸಾರಾಂಶ

ಮಾಗಡಿ: ವಿಶ್ವಗುರು ಬಸವಣ್ಣ ನವರು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಜಾತ್ಯಾತೀತ ನಿಲುವನ್ನು ಹೊಂದಿದ್ದವರು ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಮಾಗಡಿ: ವಿಶ್ವಗುರು ಬಸವಣ್ಣ ನವರು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಜಾತ್ಯಾತೀತ ನಿಲುವನ್ನು ಹೊಂದಿದ್ದವರು ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಶ್ರೀ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮ ಸಮಾಜ ನಿರ್ಮಾಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರ ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ ಈ ಮೂಲಕ ದೇಶದ ಪ್ರಗತಿಗೆ ಪ್ರಾಮಾಣಿಕವಾಗಿ ದುಡಿಯೋಣ ಎಂದು ಹೇಳಿದರು.

ತಹಸೀಲ್ದಾರ್ ಸುರೇಂದ್ರ ಮೂರ್ತಿ ಮಾತನಾಡಿ, ಶ್ರೀ ಬಸವಣ್ಣನವರು ಸಮಾಜದಲ್ಲಿ ಎಲ್ಲರೂ ಸಮಾನರಾಗಿರಬೇಕು, ಜಾತಿ ಪದ್ದತಿಯಿಂದ ದೂರ ಇರಬೇಕು ಧ್ಯೇಯ ಹೊಂದಿದ್ದರು ಎಂದರು.

ತಾಪಂ ಇಒ ಚಂದ್ರು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಂಗಾಧರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯ ಶವಣನೂರು, ತೋಟಗಾರಿಕೆ ಸಹಾಯಕ ನಿರ್ದೇಶಕ ಸಂತೋಷ, ಸಾಮಾಜಿಕ ಅರಣ್ಯಾಧಿಕಾರಿ ಮಂಜುನಾಥ್, ಬಿಸಿಎಂ ಸಹಾಯಕ ನಿರ್ದೇಶಕಿ ಸವಿತಾ, ಪಶು ವೈದ್ಯ ಇಲಾಖೆಯ ಸಹಾಯಕ ನಿರ್ದೇಶಕಿ, ಜಯಶ್ರೀ ಹಾಜರಿದ್ದರು.

18ಕೆಆರ್ ಎಂಎನ್ 4.ಜೆಪಿಜಿ

ಮಾಗಡಿ ತಾಪಂ ಸಭಾಂಗಣದಲ್ಲಿ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣವನ್ನು ಶಾಸಕ ಬಾಲಕೃಷ್ಣ ನೆರವೇರಿಸಿದರು.

ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸಿ

ರಾಮನಗರ: ವಿಶ್ವಗುರು ಬಸವಣ್ಣನವರ ತತ್ವ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾತಿ, ಮತ, ಲಿಂಗಗಳ ಬೇಧವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ, ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು ಎಂಬ ಬಸವಣ್ಣನವರ ವಿಚಾರಗಳನ್ನು ತಿಳಿಸಿದರು.

ವಿದ್ವಾನ್ ಚಂದ್ರಶೇಖರ್ ಮಾತನಾಡಿ, ಬಸವಣ್ಣನವರು ಮಹಾನ್ ಸುಧಾರಕರಾಗಿ ಜನರಿಗೆ ಸೇವೆ ಸಲ್ಲಿಸುವುದರ ಜೊತೆಗೆ, ಅವರು ದಕ್ಷಿಣ ಭಾರತದಲ್ಲಿ ದಕ್ಷಿಣ ಕಲಚೂರಿ ಸಾಮ್ರಾಜ್ಯದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು ಮತ್ತು ವಚನ ಸಾಹಿತ್ಯವನ್ನು ಪರಿಚಯಿಸುವ ಮೂಲಕ ಸಾಹಿತ್ಯ ಕ್ರಾಂತಿಯನ್ನು ಹುಟ್ಟುಹಾಕಿದರು ಎಂದರು.

ಎಲ್ಲಾ ಧರ್ಮಗಳಿಗೂ ದಯವೇ ಮೂಲವಾಗಬೇಕು. ಮಾನವನ ಎಲ್ಲಾ ಚಟುವಟಿಕೆಗಳಿಗೆ ದಯವೇ ಆಧಾರವಾಗಬೇಕು. ಎಲ್ಲಾ ಪ್ರಾಣಿಗಳಲ್ಲಿ ದಯೆಯನ್ನು ತೋರಿಸುವುದೇ ಧರ್ಮದ ಮೂಲ ಸೂತ್ರವಾಗಬೇಕು. ಇದು ಬಸವಣ್ಣನವರ ಅಮೃತವಾಣಿ ಮತ್ತು ಹಲವು ವಿಚಾರಗಳನ್ನು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಪಂ ಉಪಕಾರ್ಯದರ್ಶಿ ಚಿಕ್ಕ ಸುಬ್ಬಯ್ಯ, ಉಪವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರ್ ತೇಜಸ್ವಿನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಬಾಬು, ನಗರಸಭೆಯ ಅಧ್ಯಕ್ಷರಾದ ವಿಜಯಕುಮಾರಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

18ಕೆಆರ್ ಎಂಎನ್ 5.ಜೆಪಿಜಿ

ರಾಮನಗರ ಜಿಪಂ ಸಭಾಂಗಣದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ