ಕನ್ನಡಪ್ರಭ ವಾರ್ತೆ ಬೇಲೂರು
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೋವಿನಹಳ್ಳಿ ಗ್ರಾಮದಲ್ಲಿ ಭಗವಾನ್ ಗೌತಮ ಬುದ್ಧ ಹಾಗೂ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಮೇ 7ರಂದು ಮಧ್ಯಾಹ್ನ ೩ ಗಂಟೆಗೆ ಗೋವಿನಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ನಿಜಗುಣಾನಂದ ಸ್ವಾಮೀಜಿ, ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಕರ್ನಾಟಕ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್ ಸಿ ಮಹದೇವಪ್ಪ, ಉಸ್ತುವಾರಿ ಸಚಿವ ರಾಜಣ್ಣ, ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್ ಕೆ ಸುರೇಶ್, ಮಾಜಿ ಶಾಸಕ ಕೆ ಎಸ್ ಲಿಂಗೇಶ್ ಸೇರಿದಂತೆ ಸರಿ ಸುಮಾರು ೫ ಸಾವಿರ ಜನ ಸೇರಲಿದ್ದು, ಈ ಕಾರ್ಯಕ್ರಮಕ್ಕೆ ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಮಧ್ಯಾಹ್ನ ೩ ಗಂಟೆಗೆ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಶಶಿಧರ್ ಮೌರ್ಯ, ಬೊಮ್ಮಡಿಹಳ್ಳಿ ಮಂಜಪ್ಪ, ಗೋವಿನಹಳ್ಳಿ ಮಹೇಶ್, ಸುಪ್ರೀತ್ ಹಾಜರಿದ್ದರು.