ಸಾಮಾಜಿಕ ಬದಲಾವಣೆಯ ಹರಿಕಾರ ಬಸವಣ್ಣ: ಪುರಂದ ಹೆಗ್ಡೆ

KannadaprabhaNewsNetwork |  
Published : May 01, 2025, 12:48 AM IST
ಫೋಟೋ: ೩೦ಪಿಟಿಆರ್-ಬಸವಣ್ಣತಾಲೂಕು ರಾಷ್ಟ್ರೀಯ  ಹಬ್ಬಗಳ ಆಚರಣಾ ಸಮಿತಿಯಿಂದ ಬಸವೇಶ್ವರ ಜಯಂತಿ ಆಚರಿಸಲಾಯಿತು. | Kannada Prabha

ಸಾರಾಂಶ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಬಸವೇಶ್ವರ ಜಯಂತಿ ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಸಾಮಾಜಿಕ ಬದಲಾವಣೆಯ ಹರಿಕಾರರಾಗಿದ್ದ ಬಸವಣ್ಣ ಸಮಾನತೆಗೆ ಒತ್ತು ಕೊಟ್ಟವರು. ಕಾಯಕವೇ ಕೈಲಾಸ ಎಂದು ಹೇಳುವ ಮೂಲಕ ಯಾವುದೇ ವೃತ್ತಿಯೂ ಕೀಳಲ್ಲ ಎಂಬ ಅವರ ಮಾತು ಜನತೆಗೆ ಅರ್ಥವಾಗಬೇಕು. ಸಮಾಜದ ದುಷ್ಟ ಪದ್ಧತಿಗಳ ನಿವಾರಣೆಗೆ ಹೋರಾಡಿದ ಅವರ ಜೀವನ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ ಹೇಳಿದ್ದಾರೆ.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ದೀಪಪ್ರಜ್ವಲನೆ ಮಾಡಿ ಅವರು ಮಾತನಾಡಿದರು.

‘ಕಳ ಬೇಡ ಕೊಲ ಬೇಡ’ ಎನ್ನುತ್ತಾ ವ್ಯಕ್ತಿಗಳ ನಡುವೆ ಮತ್ಸರ-ಅಸಹ್ಯ ಬೇಡ ಎಂದು ಹೇಳಿದ ಕ್ರಾಂತಿಯೋಗಿ ಬಸವಣ್ಣ ಅವರ ಬದುಕೇ ಸಮಾಜಕ್ಕೊಂದು ಉತ್ತಮ ಸಂದೇಶವಾಗಿದೆ. ಕೇವಲ ಕಾಟಾಚಾರಕ್ಕೆ ಅವರ ಜಯಂತಿಗಳ ಆಚರಣೆಯಾಗಬಾರದು. ಈ ಆಚರಣೆ ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಹಾಗಿರಬೇಕು. ಅವರ ಜೀವನದ ಆದರ್ಶ ತತ್ವಗಳ ಮೂಲಕ ಸಮಾಜದ ಆರೋಗ್ಯ ಕಾಪಾಡಿದ ವ್ಯಕ್ತಿತ್ವ ಅವರದ್ದಾಗಿದೆ ಎಂದರು.ಕಾಯಕವೇ ಕೈಲಾಸ ಎಂದು ಕಾಯಕಕ್ಕೆ ಗೌರವ ನೀಡಿರುವ ಕವಿ ಮತ್ತು ದಾರ್ಶನಿಕರಾದ ಬಸವೇಶ್ವರ ಜಯಂತಿ ಹಲವು ವರ್ಷಗಳಿಂದ ಸರ್ಕಾರಿ ಮಟ್ಟದಲ್ಲಿ ಅಚರಣೆ ಮಾಡುತ್ತಾ ಬರಲಾಗುತ್ತಿದೆ. ಸಾಮಾಜಿಕ ಪರಿಸ್ಥಿತಿ ತೀರಾ ಹದೆಗೆಟ್ಟಿದ್ದ ೧೨ನೇ ಶತಮಾನದಲ್ಲಿ ಬಸವಣ್ಣ ಅವರು ಸಮಾಜಕ್ಕೆ ತನ್ನನ್ನು ತಾನು ಅರ್ಪಿಸಿಕೊಂಡು ಸಾಮಾಜ ಸುಧಾರಣೆಗೆ ಮುಂದಾಗಿದ್ದರು ಎಂದರು.

ಅಕ್ಷರದಾಸೋಹ ನಿರ್ದೇಶಕ ವಿಷ್ಣುಪ್ರಸಾದ್ ಇದ್ದರು.

ಕಂದಾಯ ಇಲಾಖೆಯ ದಯಾನಂದ್ ಡಿ.ಟಿ ಸ್ವಾಗತಿಸಿ, ನಿರೂಪಿಸಿದರು.

PREV

Recommended Stories

ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!