ಶೋಷಿತರನ್ನು ಸಮಾಜದ ಮುನ್ನಲೆಗೆ ತರಲು ಬಸವಣ್ಣ ಶ್ರಮಿಸಿದ್ದರು : ತಮ್ಮಯ್ಯ

KannadaprabhaNewsNetwork |  
Published : May 02, 2025, 12:15 AM IST
ಚಿಕ್ಕಮಗಳೂರಿನ ಕಲ್ಯಾಣ ನಗರದ ಬಸವ ತತ್ತ್ವ ಪೀಠದಲ್ಲಿ ಏರ್ಪಡಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಬಸವಣ್ಣನವರ ಪುತ್ಥಳಿಗೆ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಮಾಲಾರ್ಪಣೆ ಮಾಡಿದರು. ಅರುಣ್‌ಕುಮಾರ್‌, ಜಗದೀಶ್‌ ಬಾಬು, ಬಿ.ಎಚ್‌.ಹರೀಶ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಶೋಷಿತರನ್ನು ಸಮಾಜದ ಮುನ್ನಲೆಗೆ ತರುವ ಮೂಲಕ ಶೈಕ್ಷಣಿಕ, ಸಾಮಾಜಿಕವಾಗಿ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಕೀರ್ತಿ ವಿಶ್ವ ಗುರು ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಬಸವ ಜಯಂತಿ ಅಂಗವಾಗಿ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಶೋಷಿತರನ್ನು ಸಮಾಜದ ಮುನ್ನಲೆಗೆ ತರುವ ಮೂಲಕ ಶೈಕ್ಷಣಿಕ, ಸಾಮಾಜಿಕವಾಗಿ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಕೀರ್ತಿ ವಿಶ್ವ ಗುರು ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಕಲ್ಯಾಣ ನಗರದ ಬಸವ ತತ್ತ್ವ ಪೀಠದಲ್ಲಿ ಬಸವ ಜಯಂತಿ ಅಂಗವಾಗಿ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. 12ನೇ ಶತಮಾನದಲ್ಲಿ ಬಸವಣ್ಣನವರು ಕರ್ನಾಟಕದಲ್ಲಿ ಜನಿಸದಿದ್ದರೆ ಶೋಷಿತರನ್ನು ಸಮಾಜದ ಮುನ್ನಲೆಗೆ ತರಲು ಕಷ್ಟ ಸಾಧ್ಯವಾಗುತ್ತಿತ್ತು. ಡಾ. ಬಿ.ಆರ್.ಅಂಬೇಡ್ಕರ್, ಜಗಜ್ಯೋತಿ ಬಸವಣ್ಣ, ಬುದ್ಧ, ಈ ಮಹಾನ್ ಪುರುಷರನ್ನು ಕೇವಲ ಒಂದು ಜಾತಿ, ಧರ್ಮ, ಮತಕ್ಕೆ ಸೀಮಿತಗೊಳಿಸದೆ ಇಡೀ ದೇಶ ಪ್ರಪಂಚ ಒಪ್ಪಿರುವುದರಿಂದ ಈ ಮಹಾನ್ ಪುರುಷರ ಜಯಂತಿಯನ್ನು ಸರ್ವರೂ ಒಗ್ಗಟ್ಟಾಗಿ ಆಚರಿಸಬೇಕೆಂದು ತಿಳಿಸಿದರು.

ಸಮಾಜದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಈಗಲೂ ಇದ್ದು, ಅಂದೂ ಇದ್ದರು, ಇಂದೂ ಸಹ ತೊಂದರೆ ಕೊಡುತ್ತಿದ್ದಾರೆ. ಬಸವಣ್ಣನವರ ವಿಚಾರಧಾರೆಗಳ ಬಗ್ಗೆ ನಂಬಿಕೆ ಇಲ್ಲದೇ ಇರುವ ಪಟ್ಟಭದ್ರ ಹಿತಾಸಕ್ತಿಗಳು ನಶಿಸುತ್ತಾರೆ. ಆದರೆ, ಬಸವಣ್ಣ ನವರ ವಿಚಾರಧಾರೆಗಳು, ಸಿದ್ಧಾಂತ, ವಚನಗಳು ಪ್ರಪಂಚ ಇರುವವರೆಗೂ ಜೀವಂತವಾಗಿ ಇರುತ್ತವೆ ಎಂದು ಹೇಳಿದರು.ಬಸವಣ್ಣನ ಅನುಯಾಯಿಗಳಾದ ನಾವು ಎಲ್ಲಾ ಧರ್ಮವನ್ನು ಸಮಾನವಾಗಿ ಕಾಣುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ನಾಂದಿಯಾಗೋಣ ಎಂದರು.ಈ ಸಂದರ್ಭದಲ್ಲಿ ಟ್ರಸ್ಟ್‌ ಖಜಾಂಚಿ ಸದಾಶಿವಪ್ಪ, ಅರುಣ್‌ಕುಮಾರ್, ಜಗದೀಶ್ ಬಾಬು, ಬಿ.ಎಚ್. ಹರೀಶ್, ಕುಮಾರ್, ನಿಶಾಂತ್ ಉಪಸ್ಥಿತರಿದ್ದರು. 1 ಕೆಸಿಕೆಎಂ 5ಚಿಕ್ಕಮಗಳೂರಿನ ಕಲ್ಯಾಣ ನಗರದ ಬಸವ ತತ್ತ್ವ ಪೀಠದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಬಸವಣ್ಣ ನವರ ಪುತ್ಥಳಿಗೆ ಶಾಸಕ ಎಚ್‌.ಡಿ. ತಮ್ಮಯ್ಯ ಮಾಲಾರ್ಪಣೆ ಮಾಡಿದರು. ಅರುಣ್‌ ಕುಮಾರ್‌, ಜಗದೀಶ್‌ ಬಾಬು, ಬಿ.ಎಚ್‌.ಹರೀಶ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!