ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣ ಜಯಂತಿಯಲ್ಲಿ ಮಾತನಾಡಿ, ತಮ್ಮ ಹೋರಾಟದ ಮೂಲಕ ಬಸವಣ್ಣನವರು ಸಾಮಾಜಿಕ ಅಸಮಾನತೆ ತೊಡೆದುಹಾಕಲು ಶ್ರಮಿಸಿ ಅಂರ್ತಜಾತಿ ವಿವಾಹ ಮಾಡಿಸಿದ್ದರು. ಅಲ್ಲದೇ, ಅಸ್ಪೃಶ್ಯತೆ ತೊಡೆದು ಹಾಕಿ ಸಮಾಜಗಳಿಗೆ ಲಿಂಗಧಾರಣೆ ಮಾಡುವ ಮೂಲಕ ಎಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸಿದರು ಎಂದರು.
ಅನುಭವ ಮಂಟಪವನ್ನು ಸ್ಥಾಪನೆ ಮಾಡಿ ಎಲ್ಲ ಸಮುದಾಯಗಳನ್ನು ಒಂದೆಡೆ ಸೇರಿಸಿ ಸಮಾನತೆ ಸಾರಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸುವಲ್ಲಿ ವಚನ ಸಾಹಿತ್ಯದ ಪಾತ್ರ ತುಂಬಾ ದೊಡ್ಡದು ಎಂದು ಅಭಿಪ್ರಾಯಪಟ್ಟರು.ಕಸಾಪ ತಾಲೂಕು ಮಾಜಿ ಅಧ್ಯಕ್ಷ ದೇವರಾಜು ಕೊದೇನಕೊಪ್ಪಲು ಮಾತನಾಡಿ, ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕಗಳನ್ನು ತಿದ್ದುವ ಪ್ರಯತ್ನ ಮಾಡಿದ ವಿಶ್ವಗುರು ಬಸವಣ್ಣ ಅವರ ತತ್ವ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದರು.
ಈ ವೇಳೆ ಪ್ರಮುಖರಾದ ಎಂ.ಎನ್.ಜಯರಾಜು, ಮಹದೇವಸ್ವಾಮಿ, ಎಚ್.ಎನ್.ಪುಟ್ಟಸ್ವಾಮಿ, ಮಹಾಲಿಂಗು, ಬಿ.ಚುಂಚಣ್ಣ, ದೇವರಾಜು, ಉಮೇಶ್, ಚಿಕ್ಕಮರಿಗೌಡ, ಶಾಂತರಾಜು, ಮಧು ಕುಮಾರ್ ಇದ್ದರು.
ಮಂಡ್ಯ:ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದರಷ್ಟೇ ಸಾಲದು ಮಂಡ್ಯ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯಾದ ಬಸವಣ್ಣನವರ ಪುತ್ಥಳಿಯನ್ನು ನಗರದ ಡೀಸಿ ಕಚೇರಿ ಎದುರಿನ ಉದ್ಯಾನವನದಲ್ಲಿ ಸ್ಥಾಪಿಸಬೇಕು ಎಂದು ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ ಒತ್ತಾಯಿಸಿದರು.
ಬಸವ ಜಯಂತಿಯಂದು ಸಾರ್ವಜನಿಕರು ಮಾಲಾರ್ಪಣೆ ಮಾಡಲು, ಗೌರವ ಸಲ್ಲಿಸಲು ನಗರದಲ್ಲಿ ಪುತ್ಥಳಿ ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸದಿದ್ದರೆ ಮುಂಬರುವ ದಿನಗಳಲ್ಲಿ ಹತ್ತುಹಲವು ಸಂಘಟನೆಗಳ ಜೊತೆಗೂಡಿ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಸಿದರು.ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಹೋರಾಟದ ಹಾದಿ ಬೇಡ ನಿಯಮಾವಳಿಗಳನ್ನು ಪರಿಶೀಲಿಸಿ ಬೇಡಿಕೆಗೆ ಸ್ಪಂದಿಸಲಾಗುವುದು ಎಂದರು.