ಇಎಸ್‌ಐ ಆಸ್ಪತ್ರೆಗೆ ಬಸವಂತಪ್ಪ ಭೇಟಿ: ಸ್ವಚ್ಛತೆ, ವೈದ್ಯಕೀಯ ಸೇವೆಗೆ ಮೆಚ್ಚುಗೆ

KannadaprabhaNewsNetwork |  
Published : Sep 27, 2026, 01:45 AM IST
ಕ್ಯಾಪ್ಷನ26ಕೆಡಿವಿಜಿ36, 37 ದಾವಣಗೆರೆಯ ಇಎಸ್‌ಐ ಆಸ್ಪತ್ರೆಗೆ ಸಚಿವ ಕೆ.ಎಸ್‌.ಬಸವಂತಪ್ಪ ಭೇಟಿ ನೀಡಿ ಸ್ವಚ್ಛತೆ, ವೈದ್ಯಕೀಯ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.  | Kannada Prabha

ಸಾರಾಂಶ

ದಾವಣಗೆರೆ ನಗರದ ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಆಸ್ಪತ್ರೆಯ ಸ್ವಚ್ಛತೆ, ಆಡಳಿತ ವ್ಯವಸ್ಥೆ ಹಾಗೂ ವೈದ್ಯರು, ದಾದಿಯರು ಮತ್ತು ಸಿಬ್ಬಂದಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

- ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯಕ್ಕೆ ಒತ್ತು ನೀಡಲು ಸಲಹೆ । 100 ಹಾಸಿಗೆಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯತ್ತ ಹೆಜ್ಜೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಆಸ್ಪತ್ರೆಯ ಸ್ವಚ್ಛತೆ, ಆಡಳಿತ ವ್ಯವಸ್ಥೆ ಹಾಗೂ ವೈದ್ಯರು, ದಾದಿಯರು ಮತ್ತು ಸಿಬ್ಬಂದಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿದ ಸಚಿವರು, ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ರೋಗಿಗಳು ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯ ಸೌಲಭ್ಯಗಳು ದೊರೆಯುತ್ತಿದ್ದು, ವೈದ್ಯರು ಮತ್ತು ಸಿಬ್ಬಂದಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಸಚಿವರಿಗೆ ತಿಳಿಸಿದರು.

ನಂತರ ಆಸ್ಪತ್ರೆಯ ಆಡಳಿತಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆಸ್ಪತ್ರೆಯಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು, ಹಾಸಿಗೆಗಳ ಸಂಖ್ಯೆ ಹಾಗೂ ನಡೆಯುತ್ತಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.

ಪ್ರಸ್ತುತ 50 ಹಾಸಿಗೆಗಳ ಸೌಲಭ್ಯ ಆಸ್ಪತ್ರೆಯಲ್ಲಿದ್ದು, 25 ಹಾಸಿಗೆಗಳನ್ನು ಪುರುಷರು ಮತ್ತು ಮಕ್ಕಳಿಗಾಗಿ ಹಾಗೂ 25 ಹಾಸಿಗೆಗಳನ್ನು ಮಹಿಳೆಯರಿಗಾಗಿ ಬಳಸಲಾಗುತ್ತಿದೆ. ಹೆಚ್ಚುವರಿಯಾಗಿ ಮತ್ತೊಂದು 50 ಹಾಸಿಗೆಗಳ ವಿಭಾಗದ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಪೂರ್ಣಗೊಂಡರೆ 100 ಬೆಡ್ ಗಳ ಆಸ್ಪತ್ರೆಯಾಗಲಿದೆ ಎಂದು ಆಡಳಿತಾಧಿಕಾರಿ ಡಾ. ಜಿ.ಎಂ. ಬಸವನಗೌಡ ಸಚಿವರಿಗೆ ವಿವರಿಸಿದರು.

ಆಸ್ಪತ್ರೆಗೆ ಅಗತ್ಯವಿರುವ ವಿವಿಧ ವೈದ್ಯಕೀಯ ಉಪಕರಣಗಳು ಹಾಗೂ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಎಸ್‌ಐ ಆಸ್ಪತ್ರೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಸ್ವರೂಪ ಪಡೆಯಲಿದ್ದು, ಇದರಿಂದ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಮೊದಲು ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ:

ಆಸ್ಪತ್ರೆಯಲ್ಲಿ ಅತ್ಯವಶ್ಯಕ ಆಗಿರುವ ಎಂಆರ್‌ಐ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ಮೊದಲ ಆದ್ಯತೆಯಲ್ಲಿ ಕಲ್ಪಿಸಬೇಕಾಗಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವ ಕೆ.ಎಸ್.ಬಸವಂತಪ್ಪ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಸಂಬಂಧಪಟ್ಟ ಆಯುಕ್ತರೊಂದಿಗೆ ಚರ್ಚಿಸಿ ದಾವಣಗೆರೆ ಇಎಸ್‌ಐ ಆಸ್ಪತ್ರೆಗೆ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಿವಾಸಿ ವೈದ್ಯಾಧಿಕಾರಿ ಡಾ. ಮಧುಕುಮಾರ್, ಶುಶ್ರೂಷಾ ಅಧೀಕ್ಷಕ ವರ್ಗ–2 ಗಣೇಶ್ ಸೇರಿದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

- - -

-26ಕೆಡಿವಿಜಿ36, 37:

ದಾವಣಗೆರೆಯ ಇಎಸ್‌ಐ ಆಸ್ಪತ್ರೆಗೆ ಸಚಿವ ಕೆ.ಎಸ್‌.ಬಸವಂತಪ್ಪ ಭೇಟಿ ನೀಡಿ ಸ್ವಚ್ಛತೆ, ವೈದ್ಯಕೀಯ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಯೋಗ ಸೃಷ್ಟಿಯಲ್ಲಿ ಎನ್‌ಡಿಎ ಸಂಪೂರ್ಣ ವಿಫಲ
ಜನರ ಸಮಸ್ಯೆ ಆಲಿಸಿದ ಕೆ.ಎಸ್.ಬಸವಂತಪ್ಪ