ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಮೊದಲು ಪುತ್ರ ಭರತ್‌ನನ್ನು ಚುನಾವಣಾ ರಾಜಕೀಯಕ್ಕೆ ಕರೆತರುವ ಬಗ್ಗೆ ಬೊಮ್ಮಾಯಿ ಅವರು ತುಸು ಅರೆಮನಸ್ಸು ಹೊಂದಿದ್ದರು. ತಮಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಆ ನಿರೀಕ್ಷೆ ಹುಸಿಯಾದ ಬಳಿಕ ಪುತ್ರನನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಆದರೆ, ಬಿಜೆಪಿ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ನೀಡುವುದೋ ಅಥವಾ ಇಲ್ಲವೋ ಎಂಬುದಕ್ಕೆ ಇನ್ನೂ ಸಾಕಷ್ಟು ಸಮಯವಿದೆ. ಸುದೀರ್ಘ ಚರ್ಚೆ, ಲಾಬಿ ನಡೆಯುವ ನಿರೀಕ್ಷೆಯಿದೆ.ಹಾಗೆ ನೋಡಿದರೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಲ್ಲ. ಅದು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿ. ಆದರೂ ಬೊಮ್ಮಾಯಿ ಅವರು ಭವಿಷ್ಯದ ಲೆಕ್ಕಾಚಾರದ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕವೂ ಶಿಗ್ಗಾವಿ ಕ್ಷೇತ್ರದಲ್ಲಿ ಪದೇ ಪದೇ ಭೇಟಿ, ಬಿರುಸಿನ ಸಂಚಾರ ಆರಂಭಿಸಿದ್ದಾರೆ. ತಮ್ಮ ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಬಿಟ್ಟು ಪಕ್ಕದ ಶಿಗ್ಗಾವಿ ಕ್ಷೇತ್ರದಲ್ಲೇ ಹೆಚ್ಚು ಓಡಾಡುತ್ತಿರುವುದು, ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತಿರುವುದು ಸಹಜವಾಗಿಯೇ ಚರ್ಚೆಗೆ ಗ್ರಾಸವಾಗಿದೆ.
ಈ ಮೂವರೂ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು ಎನ್ನುವುದು ವಿಶೇಷ. ಕ್ಷೇತ್ರದ ಲಿಂಗಾಯತರ ಪೈಕಿ ಪಂಚಮಸಾಲಿ ಸಮುದಾಯ ಪ್ರಾಬಲ್ಯ ಹೊಂದಿದೆ. ಬೊಮ್ಮಾಯಿ ಅವರ ಸಾದರ ಲಿಂಗಾಯತ ಸಮುದಾಯದ ಬಲ ತೀರಾ ಕಡಿಮೆ. ಆದರೆ, ಬೊಮ್ಮಾಯಿ ಅವರು ಅದನ್ನು ಮೀರಿ ತಮ್ಮ ವೈಯಕ್ತಿಕ ವರ್ಚಸ್ಸಿನಿಂದ ಗೆದ್ದು ಬರುತ್ತಿದ್ದರು.
ಇದೀಗ ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮುದಾಯದವರನ್ನು ಕಣಕ್ಕಿಳಿಸಿದರೆ ಕಷ್ಟವಾಗಲಿದೆ. ಈ ನಿಟ್ಟಿನಲ್ಲಿ ಕುಟುಂಬ ರಾಜಕಾರಣ ಮತ್ತು ಲಿಂಗಾಯತ ಒಳಪಂಗಡದ ಬಲಾಬಲದ ಆಧಾರದ ಮೇಲೆ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು ಹೊರತುಪಡಿಸಿ ಪಂಚಮಸಾಲಿ ಸಮುದಾಯದವರೊಬ್ಬರಿಗೆ ಅವಕಾಶ ಕಲ್ಪಿಸಬೇಕು ಮಾತು ಬಿಜೆಪಿ ಪಾಳೆಯದಲ್ಲಿ ಕೇಳಿಬರುತ್ತಿದೆ.