ಮಂಗಳೂರು: ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಕಲ್ಕೂರ ಪ್ರತಿಷ್ಠಾನದಿಂದ ನೀಡಲಾಗುವ ‘ಕಾರಂತ ಪ್ರಶಸ್ತಿ -2025’ಗೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಚಿಂತಕ, ಹಿರಿಯ ಮುತ್ಸದ್ದಿ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ತಿಳಿಸಿದ್ದಾರೆ.
ಇದಲ್ಲದೆ 1995-96ರ ವಿಷಯ ಸಮಿತಿ ಹಾಗೂ 1996- 1999 ತನಕ ಮತ್ತು 2015 ರಿಂದ ಭರವಸೆ ಸಮಿತಿ ಅಧ್ಯಕ್ಷರಾಗಿ ಹಾಗೂ ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿಯೂ ಆಯ್ಕೆಯಾಗಿದ್ದಾರೆ.ನಾಲ್ಕು ದಶಕಗಳಿಂದ ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ಅಪ್ರತಿಮ ಸಾಧನೆಗೈದಿರುವ ಏಕೈಕ ಕನ್ನಡಿಗ ಹಾಗೂ ಒಂದೇ ಕ್ಷೇತ್ರದಿಂದ ಸತತ 8 ಬಾರಿ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ವಿಶ್ವ ದಾಖಲೆ ನಿರ್ಮಿಸಿ 43 ವರ್ಷಗಳಿಂದ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಹಿತ ಕಾಯುವಲ್ಲಿ ಶ್ರಮಿಸುತ್ತಿರುವ ಇವರ ಸಾಧನೆ ‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ ದಾಖಲೆ ಸೇರಿದೆ ಎಂದು ಪ್ರಕಟಣೆ ತಿಳಿಸಿದೆ.